Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡಗಿನಲ್ಲಿ ಮೋಡಬಿತ್ತನೆ ಬೇಡ ಬಿಜೆಪಿ ಕೃಷಿಮೋರ್ಚಾ ಒತ್ತಾಯ*
  • *ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*
  • *ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*
  • *ಎಸ್‍ಐಆರ್ ಪ್ರಕ್ರಿಯೆ, ಸೆ.23 ರ ವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಅವಕಾಶ : ಕರಡು ಮತದಾರರ ಪಟ್ಟಿ : ಜಿಲ್ಲೆಯಲ್ಲಿ 4,05,803 ಮಂದಿ ಮತದಾರರು : ಡಿಸಿ ಮಾಹಿತಿ *
  • *ಪೊನ್ನಾಡ್ ರೈತ ಉತ್ಪಾದಕ ಸಂಸ್ಥೆ(ಎಫ್‌ಪಿಓ)ಗೆ ಮಾರುಕಟ್ಟೆ ವಿಭಾಗದಲ್ಲಿ ರಾಜ್ಯ ಮಟ್ಟದ ಶ್ರೇಷ್ಠತಾ ಪ್ರಶಸ್ತಿ*
  • *ಪೂಂಪುಹಾರ್ ವರೆಗೆ 16ನೇ ವರ್ಷದ ಕಾವೇರಿ ಜಾಗೃತಿ ರಥಯಾತ್ರೆ : ಅ.26ರಿಂದ ತಲಕಾವೇರಿಯಿಂದ ಆರಂಭ*
  • *ಕಟ್ಟೆಮಾಡು ಸಕಾ೯ರಿ ಶಾಲೆಯಲ್ಲಿ ಹಿರಿಯ ಜೀವಿಗಳಿಗೆ ಗೌರವ ನಮನ*
  • *ಬುಡಕಟ್ಟು ಸಾಂಸ್ಕೃತಿಕ ಕಾರ್ಯಕ್ರಮ, ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ : ಸಂಸ್ಕೃತಿ ಉಳಿಸಿ ಬೆಳೆಸುವಲ್ಲಿ ಯುವಜನರ ಪಾತ್ರ ಮಹತ್ವದ್ದು : ಶಾಸಕ ಎ.ಎಸ್.ಪೊನ್ನಣ್ಣ*
  • *ಹಿರಿಯ ಜೀವಿಗಳಿಗೆ  ಮರಗೋಡು ಸಕಾ೯ರಿ ಶಾಲೆಯಲ್ಲಿ ಗೌರವ ನಮನ*
  • *ಪಾರಾಣೆಯ ಸಕಾ೯ರಿ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ಗೌರವ ಸಲ್ಲಿಕೆ ; ಕನ್ನಡದಲ್ಲಿ ಓದಿಯೂ ಉತ್ತಮ ಹುದ್ದೆಗೇರಲು ಸಾಧ್ಯ – ಕೆ.ಎ.ಉಮ್ಮರ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಪ್ರತಾಪಸಿಂಹ ಉತ್ತಮವಾಗಿ ಕೆಲಸ ಮಾಡಿದ್ದಾರೆ, ಆದರೆ, ಅವರಿಗಿಂತ ಅತ್ಯುತ್ತಮ ಎನಿಸುವ ಅಭ್ಯರ್ಥಿ ಸಿಕ್ಕಿದ್ದರಿಂದ ಪ್ರತಾಪ್ ಸಿಂಹಗೆ ಟಿಕೆಟ್ ನೀಡಿಲ್ಲ : ಬಿಜೆಪಿ ಉಸ್ತುವಾರಿ ರಾಧಾ ಮೋಹನ ದಾಸ್*
ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

*ಪ್ರತಾಪಸಿಂಹ ಉತ್ತಮವಾಗಿ ಕೆಲಸ ಮಾಡಿದ್ದಾರೆ, ಆದರೆ, ಅವರಿಗಿಂತ ಅತ್ಯುತ್ತಮ ಎನಿಸುವ ಅಭ್ಯರ್ಥಿ ಸಿಕ್ಕಿದ್ದರಿಂದ ಪ್ರತಾಪ್ ಸಿಂಹಗೆ ಟಿಕೆಟ್ ನೀಡಿಲ್ಲ : ಬಿಜೆಪಿ ಉಸ್ತುವಾರಿ ರಾಧಾ ಮೋಹನ ದಾಸ್*

ಮಾರ್ಚ್ 25, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಮಾ.25 NEWS DESK : ಅನುದಾನದ ವಿಚಾರದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ರಾಜ್ಯ ಸರ್ಕಾರ ಕಾನೂನು ಹೋರಾಟ ಆರಂಭಿಸಿರುವುದು ನಾಚಿಕೆಗೇಡಿನ ಸಂಗತಿ ಎಂದು ಬಿಜೆಪಿ ರಾಜ್ಯ ಚುನಾವಣಾ ಉಸ್ತುವಾರಿ ರಾಧಾ ಮೋಹನ ದಾಸ್ ಅಗರ್‍ವಾಲ್ ಟೀಕಿಸಿದ್ದಾರೆ.
ಮಡಿಕೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಾಧಾ ಮೋಹನ್ ದಾಸ್ ಅಗರವಾಲ್, ಯುಪಿಎ ಸರ್ಕಾರ 10 ವರ್ಷದಲ್ಲಿ ನೀಡಿದ ಅನುದಾನಕ್ಕಿಂತ ಹಲವು ಪಟ್ಟು ಹೆಚ್ಚು ಅನುದಾನವನ್ನು ಬಿಜೆಪಿ ಸರ್ಕಾರ ಕಳೆದ 10 ವರ್ಷಗಳಲ್ಲಿ ರಾಜ್ಯಕ್ಕೆ ನೀಡಿದೆ. ಈ ಕುರಿತ ಅಂಕಿ ಅಂಶಗಳು ಇದ್ದರೂ ಕೂಡ ರಾಜ್ಯ ಸರ್ಕಾರ ಚುನಾವಣೆ ವೇಳೆ ಸುಪ್ರೀಂಕೋರ್ಟ್ ಮೆಟ್ಟಿಲೇರಿರುವುದು ಹಾಸ್ಯಾಸ್ಪದ ಎಂದು ಹೇಳಿದರು.
‘ಇಂಡಿಯಾ’ ಒಕ್ಕೂಟದ ಕಾರಣಕ್ಕೆ ಕರ್ನಾಟಕದಲ್ಲಿನ ಕಾಂಗ್ರೆಸ್ ಸರ್ಕಾರ ತಮಿಳುನಾಡಿಗೆ ನೀರು ಬಿಟ್ಟಿರುವುದರಿಂದಲೇ ಇಂದು ಬೆಂಗಳೂರಿನಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಗೊಂಡಿದೆ. ಮೇಕೆದಾಟು ಯೋಜನೆಗೆ ಡಿಎಂಕೆ ಬಹಿರಂಗವಾಗಿ ವಿರೋಧಿಸುತ್ತಿದ್ದರೂ ಕಾಂಗ್ರೆಸ್ ಅವರೊಂದಿಗೆ ‘ಇಂಡಿಯಾ’ ಒಕ್ಕೂಟದಲ್ಲಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ರಾಜ್ಯದಲ್ಲಿ ಮುಸ್ಲಿಮರಿಂದ, ಮುಸ್ಲಿಮರಿಗಾಗಿ, ಮುಸ್ಲಿಮರಿಗೋಸ್ಕರ ಆಡಳಿತ ನಡೆಯುತ್ತಿದೆ ಎಂಬ ಭಾವನೆ ಎಲ್ಲಾ ಜಾತಿಯವರಲ್ಲಿದೆ. ಇದಕ್ಕೆ ಪೂರಕವಾಗಿ ವಿಧಾನಸೌಧದಲ್ಲಿ ಬಹಿರಂಗವಾಗಿಯೇ ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗಲಾಗಿದೆ, ಉಗ್ರರ ದಾಳಿಯೂ ನಡೆದಿದೆ. ತೀರಾ ಇತ್ತೀಚೆಗೆ ಹನುಮಾನ್ ಚಾಲೀಸ ಪಠಿಸಿದ ಎಂಬ ಕಾರಣಕ್ಕೆ ಯುವಕನೊಬ್ಬನನ್ನು ಥಳಿಸಲಾಗಿದೆ. ಈ ಬಾರಿ ಜಾತಿ ಓಲೈಕೆ ರಾಜಕಾರಣ ನಡೆಯುವುದಿಲ್ಲ ಎಂದೂ ರಾಧಾ ಮೋಹನ್ ದಾಸ್ ಹೇಳಿದರು.
ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ವಿರುದ್ಧ ಮದ್ಯ ಹಗರಣದ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಜಾರಿ ನಿರ್ದೇಶನಾಲಯ ಬಂಧಿಸಿದೆ. ಜಾಮೀನು ಕೊಡುವುದು ಬಿಜೆಪಿ ಕೆಲಸ ಅಲ್ಲ. ಸುಪ್ರೀಂಕೋರ್ಟ್ ಈ ಪ್ರಕರಣದಲ್ಲಿ ಬಂಧಿತರಾದವರಿಗೆ ಇನ್ನೂ ಜಾಮೀನು ನೀಡಿಲ್ಲ. ಭ್ರಷ್ಟರ ಪರವಾಗಿ ಭ್ರಷ್ಟರು ಪ್ರತಿಭಟನೆ ನಡೆಸುತ್ತಾರೆ. ಇವರನ್ನು ಭ್ರಷ್ಟರಾಗಿ ಎಂದು ಹೇಳಿದವರು ಯಾರು? ಭ್ರಷ್ಟರಾಗಿಲ್ಲದಿದ್ದರೆ ಜಾರಿ ನಿರ್ದೇಶನಾಲಯ ಕಂಡು ಏಕೆ ಹೆದರಬೇಕು ಎಂದು ಪ್ರಶ್ನಿಸಿದರು.
::: ಸಿಂಹಗೆ ಉತ್ತಮ ಅವಕಾಶ :::
ಪ್ರತಾಪಸಿಂಹ ಉತ್ತಮವಾಗಿ ಕೆಲಸ ಮಾಡಿದ್ದಾರೆ. ಆದರೆ, ಅವರಿಗಿಂತ ಅತ್ಯುತ್ತಮ ಎನಿಸುವ ಅಭ್ಯರ್ಥಿ ಸಿಕ್ಕಿದ್ದರಿಂದ ಮಾತ್ರ ಪ್ರತಾಪ್ ಸಿಂಹ ಅವರಿಗೆ ಟಿಕೆಟ್ ನೀಡಿಲ್ಲ. ಹಾಗೆಂದು ಪ್ರತಾಪ್ ಸಿಂಹ ಉತ್ತಮರಲ್ಲ ಎನ್ನುವುದು ಸರಿಯಲ್ಲ. ಅವರಿಗೆ ಮುಂಬರುವ ದಿನಗಳಲ್ಲಿ ಬಿಜೆಪಿಯಲ್ಲಿ ಉತ್ತಮ ಅವಕಾಶಗಳನ್ನು ಪಕ್ಷ ನೀಡಲಿದೆ. ಎಲ್ಲರ ರಾಜಕೀಯ ಜೀವನದಲ್ಲಿಯೂ ಬದಲಾವಣೆ ಇದ್ದೇ ಇರುತ್ತದೆ. ಹಾಗೇ ಪ್ರತಾಪ್ ಸಿಂಹ ಅವರ ರಾಜಕೀಯ ಜೀವನದಲ್ಲಿಯೂ ಬದಲಾವಣೆಯಾಗಿದೆ. ಈ ವಿಚಾರ ಪ್ರಧಾನಿ ಮೋದಿ ಅವರ ಗಮನಕ್ಕೂ ಬಂದಿದೆ ಎಂದು ಹೇಳಿದರು.
ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರ ಪೂರ್ವಿಕರಿಂದಲೇ ಇಡೀ ಮೈಸೂರು ಸಂಸ್ಥಾನ ಅಭಿವೃದ್ಧಿಗೊಂಡಿತು. ಬೆಂಗಳೂರು ಕೂಡ ಮಹಾರಾಜರ ಕಾಲದಲ್ಲಿ ಸಾಕಷ್ಟು ಪ್ರಗತಿಯಾಗಿತ್ತು, ಇದೇ ಅಭಿವೃದ್ಧಿಯ ಜೀನ್ ಯದುವೀರ್ ಅವರಲ್ಲಿ ಕೂಡ ಇದೆ. ಹೀಗಾಗಿಯೇ ಯದುವೀರ್ ಅವರಿಗೆ ಟಿಕೆಟ್ ನೀಡಲಾಗಿದೆ. ಯದುವೀರ್ ಭಾರತದಲ್ಲಿಯೇ ಅತ್ಯಂತ ಹೆಚ್ಚು ಅಂತರದಿಂದ ಗೆಲುವು ಸಾಧಿಸುವ ಮೊದಲ ಐವರಲ್ಲಿ ಒಬ್ಬರಾಗುತ್ತಾರೆ ಎಂದು ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿ ರಾಧಾ ಮೋಹನ್ ದಾಸ್ ವಿಶ್ವಾಸ ವ್ಯಕ್ತಪಡಿಸಿದರು.
ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಪಂಡ ರವಿಕಾಳಪ್ಪ, ಮಾಜಿ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್, ವಿಧಾನಪರಿಷತ್ ಸದಸ್ಯ ಎಂ.ಪಿ.ಸುಜಾಕುಶಾಲಪ್ಪ ಸೇರಿದಂತೆ ಕೊಡಗು ಬಿಜೆಪಿ ಪ್ರಮುಖರು ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೊಡಗಿನಲ್ಲಿ ಮೋಡಬಿತ್ತನೆ ಬೇಡ ಬಿಜೆಪಿ ಕೃಷಿಮೋರ್ಚಾ ಒತ್ತಾಯ*

ಆಗಷ್ಟ್ 24, 2026

*ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*

ಆಗಷ್ಟ್ 24, 2026

*ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*

ಆಗಷ್ಟ್ 24, 2026

*ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*

ಆಗಷ್ಟ್ 24, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಆ.24 : ನಾಪೋಕ್ಲುವಿನ ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆ ನಾಪೋಕ್ಲು, ರೋಟರಿ ಮಿಸ್ಟಿ ಹಿಲ್ಸ್…

*ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*

ಆಗಷ್ಟ್ 24, 2026

*ಎಸ್‍ಐಆರ್ ಪ್ರಕ್ರಿಯೆ, ಸೆ.23 ರ ವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಅವಕಾಶ : ಕರಡು ಮತದಾರರ ಪಟ್ಟಿ : ಜಿಲ್ಲೆಯಲ್ಲಿ 4,05,803 ಮಂದಿ ಮತದಾರರು : ಡಿಸಿ ಮಾಹಿತಿ *

ಆಗಷ್ಟ್ 24, 2026

*ಪೊನ್ನಾಡ್ ರೈತ ಉತ್ಪಾದಕ ಸಂಸ್ಥೆ(ಎಫ್‌ಪಿಓ)ಗೆ ಮಾರುಕಟ್ಟೆ ವಿಭಾಗದಲ್ಲಿ ರಾಜ್ಯ ಮಟ್ಟದ ಶ್ರೇಷ್ಠತಾ ಪ್ರಶಸ್ತಿ*

ಆಗಷ್ಟ್ 24, 2026

*ಪೂಂಪುಹಾರ್ ವರೆಗೆ 16ನೇ ವರ್ಷದ ಕಾವೇರಿ ಜಾಗೃತಿ ರಥಯಾತ್ರೆ : ಅ.26ರಿಂದ ತಲಕಾವೇರಿಯಿಂದ ಆರಂಭ*

ಆಗಷ್ಟ್ 24, 2026

*ಕಟ್ಟೆಮಾಡು ಸಕಾ೯ರಿ ಶಾಲೆಯಲ್ಲಿ ಹಿರಿಯ ಜೀವಿಗಳಿಗೆ ಗೌರವ ನಮನ*

ಆಗಷ್ಟ್ 24, 2026

*ಬುಡಕಟ್ಟು ಸಾಂಸ್ಕೃತಿಕ ಕಾರ್ಯಕ್ರಮ, ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ : ಸಂಸ್ಕೃತಿ ಉಳಿಸಿ ಬೆಳೆಸುವಲ್ಲಿ ಯುವಜನರ ಪಾತ್ರ ಮಹತ್ವದ್ದು : ಶಾಸಕ ಎ.ಎಸ್.ಪೊನ್ನಣ್ಣ*

ಆಗಷ್ಟ್ 24, 2026

*ಹಿರಿಯ ಜೀವಿಗಳಿಗೆ  ಮರಗೋಡು ಸಕಾ೯ರಿ ಶಾಲೆಯಲ್ಲಿ ಗೌರವ ನಮನ*

ಆಗಷ್ಟ್ 24, 2026

*ಪಾರಾಣೆಯ ಸಕಾ೯ರಿ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ಗೌರವ ಸಲ್ಲಿಕೆ ; ಕನ್ನಡದಲ್ಲಿ ಓದಿಯೂ ಉತ್ತಮ ಹುದ್ದೆಗೇರಲು ಸಾಧ್ಯ – ಕೆ.ಎ.ಉಮ್ಮರ್*

ಆಗಷ್ಟ್ 24, 2026

*ಮಳೆಗಾಗಿ ಸಚಿವರಿಂದ ವಿಶೇಷ ಪೂಜೆ*

ಆಗಷ್ಟ್ 23, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.