ಮಡಿಕೇರಿ ಮಾ.26 NEWS DESK : ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಗೌಡ ಅವರು ಇಂದು ಕಾವೇರಿಯ ಉಗಮ ಸ್ಥಾನ ತಲಕಾವೇರಿ ಹಾಗೂ ಭಾಗಮಂಡಲದ ಶ್ರೀ ಭಗಂಡೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ಪ್ರಚಾರ ಕಾರ್ಯ ಆರಂಭಿಸಿದರು. ಗೆಲುವಿನ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದ ಅವರು ಮೈಸೂರು ಹಾಗೂ ಕೊಡಗಿನ ಜನ ನನ್ನ ಕೈಹಿಡಿಯಲಿದ್ದಾರೆ ಎಂದರು. ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ, ಮಡಿಕೇರಿ ಶಾಸಕ ಡಾ.ಮಂತರ್ ಗೌಡ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಧರ್ಮಜ ಉತ್ತಪ್ಪ ಮತ್ತಿತರ ಪ್ರಮುಖರು ಹಾಜರಿದ್ದರು.










