Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಜಮೀನು ತೆರವು ಕಾರ್ಯಾಚರಣೆ : ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಮಸಗೋಡು ಗ್ರಾಮಸ್ಥರ ಅಸಮಾಧಾನ*
  • *ಎಸ್‌ಎಸ್‌ಎಲ್‌ಸಿ ಪರೀಕ್ಷೆ ಇಂದಿನಿಂದ ಶುರು: 8.65 ಲಕ್ಷ ವಿದ್ಯಾರ್ಥಿಗಳಿಗೆ ಅಗ್ನಿಪರೀಕ್ಷೆ; ಪರೀಕ್ಷಾ ಕೇಂದ್ರಗಳ ಸುತ್ತ 144 ನಿಷೇಧಾಜ್ಞೆ ಜಾರಿ!*
  • *ಕೊಡಗಿನಲ್ಲಿ ವನ್ಯಜೀವಿ ಉಪಟಳ : ಅರಣ್ಯ ಸಚಿವರಿಂದ ಮಹತ್ವದ ಸಭೆ : ಶಾಸಕದ್ವಯರು ಭಾಗಿ*
  • *ಏ.2 ರಂದು ಸೋಮವಾರಪೇಟೆ ತಾ.ಪಂ.ಕೆಡಿಪಿ ಸಭೆ*
  • *ವಿರಾಜಪೇಟೆಯ ಮಲೆ ಮಹದೇಶ್ವರ ದೇವಾಲಯದ ವಾರ್ಷಿಕ ಉತ್ಸವ*
  • *ಮಾ.15 ರಂದು ಮೂರ್ನಾಡು ಗೌಡ ಮಹಿಳಾ ಒಕ್ಕೂಟದಿಂದ ಮಹಿಳಾ ದಿನಾಚರಣೆ*
  • *ವಿರಾಜಪೇಟೆ ಶ್ರೀ ಮುತ್ತಪ್ಪ ದೇವಾಲಯದ ತೆರೆ ಮಹೋತ್ಸವಕ್ಕೆ ಚಾಲನೆ*
  • *ಫಾಸ್ಟ್ ಪುಡ್(ಚಾಟ್ಸ್ ಸೆಂಟರ್) ತಯಾರಿಕೆ ತರಬೇತಿಗೆ ಅರ್ಜಿ ಆಹ್ವಾನ*
  • *ಕೋಟ್ಪಾ ಕಾಯ್ದೆ ಉಲ್ಲಂಘನೆ : 1800 ರೂ.ದಂಡ*
  • *ಸ್ವ-ಉದ್ಯೋಗ ತರಬೇತಿಗೆ ಅರ್ಜಿ ಆಹ್ವಾನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಬಿಜೆಪಿಗೆ ಮೈಸೂರು- ಕೊಡಗು ಪ್ರತಿಷ್ಠೆಯ ಕ್ಷೇತ್ರ : 2ಲಕ್ಷ ಮತಗಳ ಅಂತರದಿಂದ ಗೆಲ್ಲುವ ಗುರಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಬಿಜೆಪಿಗೆ ಮೈಸೂರು- ಕೊಡಗು ಪ್ರತಿಷ್ಠೆಯ ಕ್ಷೇತ್ರ : 2ಲಕ್ಷ ಮತಗಳ ಅಂತರದಿಂದ ಗೆಲ್ಲುವ ಗುರಿ*

ಮಾರ್ಚ್ 26, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಮಾ.26 NEWS DESK : ಮೈಸೂರು- ಕೊಡಗು ಲೋಕಸಭಾ ಕ್ಷೇತ್ರ ಭಾರತೀಯ ಜನತಾ ಪಾರ್ಟಿಗೆ ಪ್ರತಿಷ್ಠೆಯ ಕಣವಾಗಿದ್ದು, ಸುಮಾರು 2ಲಕ್ಷ ಮತಗಳ ಅಂತರದಿAದ ಯದುವೀರ್ ಅವರನ್ನು ಗೆಲ್ಲಿಸುವ ಗುರಿ ಹೊಂದಿರುವುದಾಗಿ ಬಿಜೆಪಿ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ಬಗ್ಗೆ ವಿಶೇಷ ಆಸಕ್ತಿ ಹೊಂದಿದ್ದಾರೆ. ಅತ್ಯಧಿಕ ಮತಗಳ ಅಂತರದಿAದ ಯದುವೀರ್ ಅವರನ್ನು ಗೆಲ್ಲಿಸುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತಕ್ಕ ಉತ್ತರ ನೀಡಲು ಮುಂದಾಗಿದ್ದಾರೆ ಎಂದರು.
ಕಳೆದ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಪ್ರತಾಪ್ ಸಿಂಹ ಅವರು ಸುಮಾರು 1.30 ಲಕ್ಷ ಮತಗಳ ಅಂತರದಿAದ ಗೆಲುವು ಸಾಧಿಸಿದ್ದರು. ಈ ಬಾರಿ ಯದುವೀರ್ ಅವರು 2ಲಕ್ಷ ಮತಗಳ ಅಂತರದಿAದ ಗೆಲುವು ಸಾಧಿಸಲಿದ್ದಾರೆ. ಕೊಡಗು ಜಿಲ್ಲೆಯಲ್ಲಿ ಕಳೆದ ಬಾರಿ 85 ಸಾವಿರ ಮತಗಳ ಅಂತರವಿತ್ತು, ಈ ಬಾರಿ 1ಲಕ್ಷಕ್ಕೂ ಅಧಿಕ ಗೆಲುವಿನ ಮತಗಳನ್ನು ನೀಡಲಿದ್ದೇವೆ ಎಂದು ತಿಳಿಸಿದರು.
ಪ್ರಧಾನಿ ನರೇಂದ್ರ ಮೋದಿ ಅವರ ಅಭಿವೃದ್ಧಿ ಕಾರ್ಯಗಳನ್ನು ಜನ ಮೆಚ್ಚಿದ್ದಾರೆ. ಜಿಲ್ಲೆಯಲ್ಲಿ ಬಿಜೆಪಿ ಅಭ್ಯರ್ಥಿ ಯದುವೀರ್ ಅವರು ಪ್ರವಾಸ ಮಾಡಿದ ಸಂದರ್ಭ ಕಾರ್ಯಕರ್ತರು ಹಾಗೂ ಸಾರ್ವಜನಿಕರಿಂದ ಅಭೂತಪೂರ್ವ ಸ್ವಾಗತ ದೊರೆತ್ತಿದೆ. ಗೆಲ್ಲಿಸುವ ಭರವಸೆಯೂ ನೀಡಿದ್ದಾರೆ. ಯದುವೀರ್ ಅವರು ರಾಜ ವಂಶಸ್ಥ, ಯಾರ ಕೈಗೂ ಸಿಗುವುದಿಲ್ಲ ಎಂದು ಕೆಲವರು ಅಪಪ್ರಚಾರ ಮಾಡುತ್ತಿದ್ದಾರೆ. ಆದರೆ ಯದುವೀರ್ ಅವರು ಅತ್ಯಂತ ಸರಳ ಜೀವಿ ಮತ್ತು ಅಭಿವೃದ್ಧಿಪರ ಚಿಂತನೆ ಇರುವ ವ್ಯಕ್ತಿ ಎನ್ನುವುದು ಈಗಾಗಲೇ ಸಾಬೀತಾಗಿದೆ ಎಂದು ಹೇಳಿದರು.
ಚುನಾವಣೆಯಲ್ಲಿ ಸ್ಪರ್ಧೆ ಸಹಜವಾಗಿರುತ್ತದೆ, ಪ್ರತಿಸ್ಪರ್ಧಿಯನ್ನು ನಿರ್ಲಕ್ಷಿಸಿ ನಾವು ಮೈಮರೆಯುವುದಿಲ್ಲ, ಯದುವೀರ್ ಅವರ ಗೆಲುವಿಗಾಗಿ ನಿರಂತರ ಶ್ರಮ ವಹಿಸುತ್ತೇವೆ. ಈಗಾಗಲೇ ಬೂತ್ ಮಟ್ಟದಿಂದ ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ವರೆಗೂ ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿ ಕಾರ್ಯನಿರ್ವಹಿಸುತ್ತಿದೆ ಎಂದರು.
ಕಳೆದ 10 ತಿಂಗಳ ಅಭಿವೃದ್ಧಿ ಕಾರ್ಯಗಳೇ ಲೋಕಸಭಾ ಚುನಾವಣೆಯಲ್ಲಿ ನಮಗೆ ಶ್ರೀರಕ್ಷೆಯಾಗಲಿದೆ ಎಂದು ಕಾಂಗ್ರೆಸ್ಸಿಗರು ಹೇಳಿಕೊಳ್ಳುತ್ತಿದ್ದಾರೆ. ಆದರೆ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆದಿಲ್ಲ ಮತ್ತು ಈ ಹಿಂದಿನ ಸರಕಾರದ ಅನುದಾನದ ಕಾಮಗಾರಿಗಳು ಎನ್ನುವುದು ಜನರಿಗೆ ಈಗಾಗಲೇ ಅರ್ಥವಾಗಿದೆ. ನೂತನ ಶಾಸಕರುಗಳು ಯಾವುದೇ ಅಭಿವೃದ್ಧಿ ಕಾರ್ಯಗಳನ್ನು ಮಾಡದಿರುವುದು ಮತ್ತು ಈ ಹಿಂದಿನ ಬಿಜೆಪಿ ಶಾಸಕರುಗಳು ಮಾಡಿರುವ ಅಭಿವೃದ್ಧಿ ಕಾರ್ಯಗಳು ಬಿಜೆಪಿಗೆ ಶ್ರೀರಕ್ಷಯಾಗಲಿದೆ ಎಂದು ರವಿ ಕಾಳಪ್ಪ ತಿಳಿಸಿದರು.
ರಾಜ್ಯದಲ್ಲಿ ಕಡಿಮೆ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದರೆ ಸರಕಾರ ಪತನವಾಗುತ್ತದೆ ಎನ್ನುವ ಆತಂಕದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದ್ದಾರೆ. ಇದೇ ಕಾರಣಕ್ಕೆ ಮೈಸೂರು- ಕೊಡಗು ಕ್ಷೇತ್ರ ಸೇರಿದಂತೆ 20 ಕ್ಕೂ ಹೆಚ್ಚು ಕ್ಷೇತ್ರಗಳನ್ನು ಗೆಲ್ಲುವ ಪ್ರಯತ್ನದಲ್ಲಿದ್ದಾರೆ. ಆದರೆ ಸಿದ್ದರಾಮಯ್ಯ ಅವರ ಈ ಪ್ರಯತ್ನ ಫಲ ನೀಡುವುದಿಲ್ಲ ಎಂದು ಭವಿಷ್ಯ ನುಡಿದರು.
::: ಏ.3 ರಂದು ನಾಮಪತ್ರ ಸಲ್ಲಿಕೆ :::
ಬಿಜೆಪಿ ಅಭ್ಯರ್ಥಿ ಯದುವೀರ್ ಅವರು ಏ.3 ರಂದು ನಾಮಪತ್ರ ಸಲ್ಲಿಸಲಿದ್ದು, ಕೊಡಗು ಜಿಲ್ಲೆಯಿಂದ ಸಾವಿರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಮೈಸೂರಿಗೆ ತೆರಳಲಿದ್ದಾರೆ ಎಂದರು.
::: ಬೃಹತ್ ಸಮಾವೇಶ :::
ನಗರದ ಕ್ರಿಸ್ಟಲ್ ಕೋರ್ಟ್ ಸಭಾಂಗಣದಲ್ಲಿ ಮಾ.27 ರಂದು ಬಿಜೆಪಿ ಕಾರ್ಯಕರ್ತರ ಬೃಹತ್ ಸಮಾವೇಶ ನಡೆಯಲಿದ್ದು, ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಕೊಡಗು ಉಸ್ತುವಾರಿ ಅಶ್ವತ್ಥ್ ನಾರಾಯಣ ಗೌಡ, ಅಭ್ಯರ್ಥಿ ಯದುವೀರ್, ಮಾಜಿ ಶಾಸಕ ರಾಮದಾಸ್, ಸಂಚಾಲಕ ರವಿ ಶಂಕರ್, ಸಂಸದ ಪ್ರತಾಪ್ ಸಿಂಹ, ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ, ಮಾಜಿ ಶಾಸಕರುಗಳಾದ ಕೆ.ಜಿ.ಬೋಪಯ್ಯ, ಎಂ.ಪಿ.ಅಪ್ಪಚ್ಚು ರಂಜನ್, ಬಿಜೆಪಿಯ ಎಲ್ಲಾ ಚುನಾಯಿತ ಪ್ರತಿನಿಧಿಗಳು, ಮಾಜಿ ಪ್ರತಿನಿಧಿಗಳು, ಪಕ್ಷದ ಎಲ್ಲಾ ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ನಾಲ್ಕು ಸಾವಿರಕ್ಕೂ ಅಧಿಕ ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ ಎಂದು ನಾಪಂಡ ರವಿ ಕಾಳಪ್ಪ ಮಾಹಿತಿ ನೀಡಿದರು. ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಮಹೇಶ್ ಜೈನಿ, ವಿ.ಕೆ.ಲೋಕೇಶ್, ಜಿಲ್ಲಾ ವಕ್ತಾರರಾದ ಸುಬ್ರಮಣ್ಯ ಉಪಾಧ್ಯಾಯ,  ಅರುಣ್ ಕುಮಾರ್ ಹಾಗೂ ನಗರಾಧ್ಯಕ್ಷ ಉಮೇಶ್ ಸುಬ್ರಮಣಿ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಜಮೀನು ತೆರವು ಕಾರ್ಯಾಚರಣೆ : ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಮಸಗೋಡು ಗ್ರಾಮಸ್ಥರ ಅಸಮಾಧಾನ*

ಮಾರ್ಚ್ 18, 2026

*ಎಸ್‌ಎಸ್‌ಎಲ್‌ಸಿ ಪರೀಕ್ಷೆ ಇಂದಿನಿಂದ ಶುರು: 8.65 ಲಕ್ಷ ವಿದ್ಯಾರ್ಥಿಗಳಿಗೆ ಅಗ್ನಿಪರೀಕ್ಷೆ; ಪರೀಕ್ಷಾ ಕೇಂದ್ರಗಳ ಸುತ್ತ 144 ನಿಷೇಧಾಜ್ಞೆ ಜಾರಿ!*

ಮಾರ್ಚ್ 18, 2026

*ಕೊಡಗಿನಲ್ಲಿ ವನ್ಯಜೀವಿ ಉಪಟಳ : ಅರಣ್ಯ ಸಚಿವರಿಂದ ಮಹತ್ವದ ಸಭೆ : ಶಾಸಕದ್ವಯರು ಭಾಗಿ*

ಮಾರ್ಚ್ 18, 2026

*ಎಸ್‌ಎಸ್‌ಎಲ್‌ಸಿ ಪರೀಕ್ಷೆ ಇಂದಿನಿಂದ ಶುರು: 8.65 ಲಕ್ಷ ವಿದ್ಯಾರ್ಥಿಗಳಿಗೆ ಅಗ್ನಿಪರೀಕ್ಷೆ; ಪರೀಕ್ಷಾ ಕೇಂದ್ರಗಳ ಸುತ್ತ 144 ನಿಷೇಧಾಜ್ಞೆ ಜಾರಿ!*

ಮಾರ್ಚ್ 18, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ

ಬೆಂಗಳೂರು, ಮಾರ್ಚ್ 18, 2026: ಕರ್ನಾಟಕದ ಶೈಕ್ಷಣಿಕ ಇತಿಹಾಸದ ಪ್ರಮುಖ ಘಟ್ಟವಾದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಇಂದು ಬುಧವಾರದಿಂದ ಆರಂಭವಾಗಿವೆ. ಏಪ್ರಿಲ್…

*ಕೊಡಗಿನಲ್ಲಿ ವನ್ಯಜೀವಿ ಉಪಟಳ : ಅರಣ್ಯ ಸಚಿವರಿಂದ ಮಹತ್ವದ ಸಭೆ : ಶಾಸಕದ್ವಯರು ಭಾಗಿ*

ಮಾರ್ಚ್ 18, 2026

*ಏ.2 ರಂದು ಸೋಮವಾರಪೇಟೆ ತಾ.ಪಂ.ಕೆಡಿಪಿ ಸಭೆ*

ಮಾರ್ಚ್ 17, 2026

*ವಿರಾಜಪೇಟೆಯ ಮಲೆ ಮಹದೇಶ್ವರ ದೇವಾಲಯದ ವಾರ್ಷಿಕ ಉತ್ಸವ*

ಮಾರ್ಚ್ 17, 2026

*ಮಾ.15 ರಂದು ಮೂರ್ನಾಡು ಗೌಡ ಮಹಿಳಾ ಒಕ್ಕೂಟದಿಂದ ಮಹಿಳಾ ದಿನಾಚರಣೆ*

ಮಾರ್ಚ್ 17, 2026

*ವಿರಾಜಪೇಟೆ ಶ್ರೀ ಮುತ್ತಪ್ಪ ದೇವಾಲಯದ ತೆರೆ ಮಹೋತ್ಸವಕ್ಕೆ ಚಾಲನೆ*

ಮಾರ್ಚ್ 17, 2026

*ಫಾಸ್ಟ್ ಪುಡ್(ಚಾಟ್ಸ್ ಸೆಂಟರ್) ತಯಾರಿಕೆ ತರಬೇತಿಗೆ ಅರ್ಜಿ ಆಹ್ವಾನ*

ಮಾರ್ಚ್ 17, 2026

*ಕೋಟ್ಪಾ ಕಾಯ್ದೆ ಉಲ್ಲಂಘನೆ : 1800 ರೂ.ದಂಡ*

ಮಾರ್ಚ್ 17, 2026

*ಸ್ವ-ಉದ್ಯೋಗ ತರಬೇತಿಗೆ ಅರ್ಜಿ ಆಹ್ವಾನ*

ಮಾರ್ಚ್ 17, 2026

*ಅಡುಗೆ ಅನಿಲದ ಕೊರತೆ : ಕೇಂದ್ರ ವಿರುದ್ಧ ಕುಶಾಲನಗರದಲ್ಲಿ ಪ್ರತಿಭಟನೆ*

ಮಾರ್ಚ್ 17, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.