ಸುಂಟಿಕೊಪ್ಪ ಮಾ.26 NEWS DESK : ಸಹೋದರ ಮರದಿಂದ ಬಿದ್ದು ಮೃತಪಟ್ಟ ಏಳೇ ತಿಂಗಳಿನಲ್ಲಿ ವ್ಯಕ್ತಿಯೊಬ್ಬರು ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಸುಂಟಿಕೊಪ್ಪದ ಕಾನ್‌ಬೈಲ್ ಬೈಚನಹಳ್ಳಿ (ನೆಟ್ಲಿ‘ಬಿ’) ಯಲ್ಲಿ ನಡೆದಿದೆ.
ಇಲ್ಲಿನ ನಿವಾಸಿ ಸಂಜೀವ ಪೂಜಾರಿ ಅವರ ಪುತ್ರ ಮನು ಪೂಜಾರಿ ಎಂಬುವವರೇ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಇವರ ಸಹೋದರ, ಮಾಜಿ ಶಾಸಕ ಎಂ.ಪಿ.ಅಪ್ಪಚ್ಚುರಂಜನ್ ಅವರ ಬಳಿ ಗನ್‌ಮ್ಯಾನ್ ಆಗಿದ್ದ ಲೋಕೇಶ್ ಪೂಜಾರಿ ಅವರು 7 ತಿಂಗಳ ಹಿಂದೆಯಷ್ಟೇ ಮರದಿಂದ ಬಿದ್ದು ಮೃತಪಟ್ಟಿದ್ದರು.
ಮೃತ ಮನು ಮೃತರು ತಂದೆ, ತಾಯಿ, ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಕೇವಳ ಏಳೇ ತಿಂಗಳಿನಲ್ಲಿ ಇಬ್ಬರು ಪುತ್ರರನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಸುಂಟಿಕೊಪ್ಪ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.










