ಸೋಮವಾರಪೇಟೆ NEWS DESK : ಶರಣ ಸಾಹಿತ್ಯ ಪರಿಷತ್ತಿನ ಸೋಮವಾರಪೇಟೆ ತಾಲ್ಲೂಕು ಘಟಕದ ಅಧ್ಯಕ್ಷರನ್ನಾಗಿ ಪಟ್ಟಣದ ಹಿರಿಯ ವಕೀಲ ಹಾಗೂ ಕಾಫಿ ಬೆಳೆಗಾರ ಎ.ಎಸ್.ಮಹೇಶ್ ಅವರನ್ನು ನೇಮಕ ಮಾಡಲಾಗಿದೆ.
ತಾಲ್ಲೂಕಿನಾದ್ಯಂತ ಶರಣ ಸಾಹಿತ್ಯ ಚಟುವಟಿಕೆಗಳನ್ನು ಸಕ್ರಿಯಗೊಳಿಸುವ ಜೊತೆಗೆ ಪರಿಷತ್ತಿಗೆ ಹೆಚ್ಚಿನ ಸಂಖ್ಯೆಯಲ್ಲಿ ಸದಸ್ಯರನ್ನು ನೊಂದಾಯಿಸುವ ಮೂಲಕ ಪರಿಷತ್ತನ್ನು ಕಟ್ಟಿ ಬೆಳೆಸುವ ಪಣ ತೊಡಬೇಕೆಂದು ಜಿಲ್ಲಾ ಶಸಾಪ ಅಧ್ಯಕ್ಷ ಕೆ.ಎಸ್.ಮೂರ್ತಿ ಪ್ರಕಟಣೆಯಲ್ಲಿ ಕೋರಿದ್ದಾರೆ.









