ಮಡಿಕೇರಿ ಮಾ.27 NEWS DESK : ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ಮಡಿಕೇರಿ ತಾಲ್ಲೂಕು ಘಟಕದ ಅಧ್ಯಕ್ಷರನ್ನಾಗಿ ಗಾಳಿಬೀಡು ನವೋದಯ ವಿದ್ಯಾಲಯದ ಕನ್ನಡ ಶಿಕ್ಷಕ ಮಾರುತಿ ದಾಸಣ್ಣನವರ್ ಅವರನ್ನು ನೇಮಕ ಮಾಡಲಾಗಿದೆ.
ಶರಣ ಸಾಹಿತ್ಯ ಚಟುವಟಿಕೆಗಳನ್ನು ತಾಲ್ಲೂಕಿನಾದ್ಯಂತ ಹೆಚ್ಚಾಗಿ ಪ್ರಚಾರ ಪಡಿಸುವ ಮೂಲಕ ಜನಸಾಮಾನ್ಯರಲ್ಲಿ ವಚನ ಸಾಹಿತ್ಯದ ಅರಿವು ಮೂಡಿಸಬೇಕಿದೆ ಎಂದು ಜಿಲ್ಲಾ ಶಸಾಪ ಅಧ್ಯಕ್ಷ ಕೆ.ಎಸ್.ಮೂರ್ತಿ ತಿಳಿಸಿದ್ದಾರೆ.









