ಮಡಿಕೇರಿ ಮಾ.27 NEWS DESK : ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪ ಅವರು ಇಂದು ಮೈಸೂರು ಚಾಮುಂಡಿ ಬೆಟ್ಟಕ್ಕೆ ತೆರಳಿ ತಾಯಿ ಚಾಮುಂಡೇಶ್ವರಿಯ ದರ್ಶನ ಪಡೆದರು. ಬಳಿಕ ಗೋ ಮಾತೆಗೆ ನೀರುಣಿಸುವ ಮೂಲಕ ನಾಡಿನೆಲ್ಲೆಡೆ ಉಂಟಾಗಿರುವ ಕುಡಿಯುವ ನೀರಿನ ಸಮಸ್ಯೆ ನೀಗಿಸುವಂತೆ ಪ್ರಾರ್ಥಿಸಿ, ರೈತರಿಗೆ ಸಾಂಕೇತಿಕವಾಗಿ ನೇಗಿಲು ನೀಡಿ ಗೌರವಿಸಿದರು. ಈ ಸಂದರ್ಭ ರಾಜ್ಯ ಉಪಾಧ್ಯಕ್ಷ ಎನ್.ಮಹೇಶ್, ಒಬಿಸಿ ಮೋರ್ಚಾ ರಾಜ್ಯ ಅಧ್ಯಕ್ಷ ಆರ್.ರಘು ಕೌಟಿಲ್ಯ, ಶಾಸಕ ಟಿ.ಎಸ್.ಶ್ರೀವತ್ಸ, ಮಾಜಿ ಸಚಿವ ಎಸ್.ಎ.ರಾಮದಾಸ್, ಚಾಮರಾಜನಗರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್.ಬಾಲರಾಜ್, ಮೈಸೂರು ಜಿಲ್ಲಾ ಅಧ್ಯಕ್ಷ ಎಲ್.ನಾಗೇಂದ್ರ ಹಾಗೂ ಪ್ರಮುಖರು ಉಪಸ್ಥಿತರಿದ್ದರು.











