ಸುಂಟಿಕೊಪ್ಪ,ಮಾ.27 NEWS DESK : ಭಾರತೀಯ ಜನತಾ ಪಾರ್ಟಿಯ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರಿಗೆ ಸುಂಟಿಕೊಪ್ಪ ಬಿಜೆಪಿ ಕಾರ್ಯಕರ್ತರಿಂದ ಭವ್ಯ ಸ್ವಾಗತ ಕೋರಿದರು.
ಪಟ್ಟಣದ ರಾಷ್ಟ್ರೀಯ ಹೆದ್ದಾರಿ ಕನ್ನಡ ವೃತ್ತದ ಬಳಿಯಲ್ಲಿ ಸುಂಟಿಕೊಪ್ಪ ನಗರ ಬಿಜೆಪಿ ಅಧ್ಯಕ್ಷ ಧನುಕಾವೇರಪ್ಪ ಮತ್ತು ಸುಂಟಿಕೊಪ್ಪ ಗ್ರಾ.ಪಂ. ಅಧ್ಯಕ್ಷ ಹಾಗೂ ಸೋಮವಾರಪೇಟೆ ಮಂಡಳ ಒಬಿಸಿ ಅಧ್ಯಕ್ಷ ಪಿ.ಆರ್.ಸುನಿಲ್‍ಕುಮಾರ್ ಸೇರಿದಂತೆ ನೂರಾರು ಕಾರ್ಯಕರ್ತರು ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರಿಗೆ ಮಾಲಾರ್ಪಣೆ ಮಾಡಿ ಸ್ವಾಗತಿಸಿದರು.
ಇದೇ ಸಂದರ್ಭ ಪಟಾಕಿ ಸಿಡಿಸಿ, ಪ್ರಧಾನಿ ನರೇಂದ್ರಮೋದಿ, ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಬಿಜೆಪಿ ಪಕ್ಷದ ಹಿರಿಯ ಮುಖಂಡ ಬಿ.ಎಸ್.ಯಡಿಯೂರಪ್ಪ ಅವರಿಗೆ ಕಾರ್ಯಕರ್ತರು ಜೈಕಾರ ಕೂಗಿದರು.
ನಾಕೂರು ಶಿರಂಗಾಲ ಗ್ರಾ.ಪಂ.ಅಧ್ಯಕ್ಷ ಮಂದೋಡಿ ಜಗನ್ನಾಥ್, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಬ್ಯಾಂಕಿನ ಮಾಜಿ ಉಪಾಧ್ಯಕ್ಷ ಡಾ.ಶಶಿಕಾಂತರೈ, ತಾಲೂಕು ಪಂಚಾಯಿತಿ ಮಾಜಿ ಉಪಾಧ್ಯಕ್ಷ ಶಂಕರನಾರಾಯಣ, ಶಕ್ತಿ ಕೇಂದ್ರದ ಮಾಜಿ ಅಧ್ಯಕ್ಷ ಬಿ.ಕೆ.ಪ್ರಶಾಂತ್, ವಾಸು, ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ವಿಘ್ನೇಶ್, ಸುಂಟಿಕೊಪ್ಪ ಗ್ರಾ.ಪಂ.ಸದಸ್ಯ ಬಿ.ಎಂ.ಸುರೇಶ್, ಗ್ರಾ.ಪಂ ಮಾಜಿ ಅಧ್ಯಕ್ಷರುಗಳಾದ ಬಿ.ಐ.ಭವಾನಿ, ತಾ.ಪಂ.ಸದಸ್ಯೆ ಓಡಿಯಪ್ಪನ ವಿಮಲಾವತಿ, ಗ್ರಾ.ಪಂ ಮಾಜಿ ಉಪಾಧ್ಯಕ್ಷ ಬಿ.ಕೆ.ಮೋಹನ್, 7ನೇ ಹೊಸಕೋಟೆ ಗ್ರಾ.ಪಂ ಮಾಜಿ ಅಧ್ಯಕ್ಷ ರಮೇಶ್ ಸೇರಿದಂತೆ ಪಕ್ಷದ ಕಾರ್ಯಕರ್ತರು ಇದ್ದರು.












