ಮಡಿಕೇರಿ ಮಾ.27 NEWS DESK : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಆಗಮನದ ಸಂದರ್ಭ ಕುಶಾಲನಗರ ಮತ್ತು ಮಡಿಕೇರಿಯಲ್ಲಿ ಚೋರರು ಕೈಚಳಕ ತೋರಿದ್ದಾರೆ. ಶಾಸಕರಾದಿಯಾಗಿ ಹಲವರ ಜೇಬು ಖಾಲಿಯಾದ ಪ್ರಕರಣ ಬೆಳಕಿಗೆ ಬಂದಿದೆ.
ಮಡಿಕೇರಿ ಕ್ಷೇತ್ರದ ಮಾಜಿ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್, ವಿರಾಜಪೇಟೆ ಕ್ಷೇತ್ರದ ಮಾಜಿ ಶಾಸಕ ಕೆ.ಜಿ.ಬೋಪಯ್ಯ ಸೇರಿದಂತೆ ಅನೇಕರ ಜೇಬಿನಲ್ಲಿದ್ದ ಸಾವಿರಾರು ರೂಪಾಯಿ ಕಳ್ಳತನ ಮಾಡಲಾಗಿದೆ. ಅಲ್ಲದೆ ಪರ್ಸ್‍ಗಳನ್ನು ಕೂಡ ಕದ್ದೊಯ್ಯಲಾಗಿದ್ದು, ಅಮೂಲ್ಯ ದಾಖಲೆಗಳನ್ನು ಕಳೆದುಕೊಂಡವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಪಕ್ಷದ ನಾಯಕರುಗಳೊಂದಿಗೆ ಕಾರ್ಯಕರ್ತರು ಸೆಲ್ಫಿ ತೆಗೆಸಿಕೊಳ್ಳುವ ಸಂದರ್ಭ ನೂಕುನುಗ್ಗಲು ಉಂಟು ಮಾಡಿ ಈ ಕೃತ್ಯ ಎಸಗಲಾಗಿದೆ ಎಂದು ಅಂದಾಜಿಸಲಾಗಿದೆ. ವಾಹನಗಳಲ್ಲಿ ಬಂದ ಅಪರಿಚಿತರು ಜೇಬುಗಳ್ಳತನ ಮಾಡಿದ್ದಾರೆ ಎಂದು ಶಂಕಿಸಲಾಗಿದೆ. ತಕ್ಷಣ ಕಳ್ಳರ ಬಂಧನಕ್ಕೆ ಕ್ರಮ ಕೈಗೊಳ್ಳುವಂತೆ ಮಾಜಿ ಶಾಸಕರುಗಳು ಒತ್ತಾಯಿಸಿದ್ದಾರೆ.










