ಮಡಿಕೇರಿ ಮಾ.27 NEWS DESK : 2024 ರ ಲೋಕಸಭಾ ಸಾರ್ವತ್ರಿಕ ಚುನಾವಣೆಯ ಸ್ವೀಪ್ ಕಾರ್ಯಕ್ರಮದಡಿ ಪುರಸಭಾ ವ್ಯಾಪ್ತಿಯಲ್ಲಿ ಮತದಾನ ಮಾಡುವ ಬಗ್ಗೆ ಮತದಾರರಲ್ಲಿ ಜಾಗೃತಿ ಮೂಡಿಸಲು ಕುಶಾಲನಗರ ಪುರಸಭೆ ವತಿಯಿಂದ ಕುಶಾಲನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಮತದಾನದ ಬಗ್ಗೆ ಜಾಗೃತಿ ಮೂಡಿಸುವ ಬಗ್ಗೆ ಕಾರ್ಯಕ್ರಮ ನಡೆಯಿತು ಎಂದು ಕುಶಾಲನಗರ ಪುರಸಭೆ ಮುಖ್ಯಾಧಿಕಾರಿ ಕೃಷ್ಣಪ್ರಸಾದ್ ತಿಳಿಸಿದ್ದಾರೆ.









