ಮಡಿಕೇರಿ ಮಾ.27 NEWS DESK : ಲೋಕಸಭಾ ಚುನಾವಣೆಯಲ್ಲಿ ಕೊಡಗು- ಮೈಸೂರು ಕ್ಷೇತ್ರದ ಭಾಗವಾದ ಮೈಸೂರಿಗೆ ಪ್ರಧಾನಿ ನರೇಂದ್ರಮೋದಿ ಅವರು ಮತ್ತು ಕೊಡಗು ಜಿಲ್ಲೆಗೆ ಉತ್ತರ ಪ್ರದೇಶದ ಮಖ್ಯಮಂತ್ರಿ ಯೋಗಿ ಆದಿತ್ಯ ನಾಥ್ ಅವರು ಆಗಮಿಸಿ ಪ್ರಚಾರ ಕಾರ್ಯ ನಡೆಸಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಮಡಿಕೇರಿಯಲ್ಲಿ ತಿಳಿಸಿದ್ದಾರೆ.
ಕ್ಷೇತ್ರದ ಅಭ್ಯರ್ಥಿ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಮಾತನಾಡಿ, ಕಾವೇರಿಯ ನಾಡಿನಲ್ಲಿ ಸ್ಪರ್ಧಿಸುವ ಅಪೂರ್ವ ಅವಕಾಶ ತನಗೆ ದೊರೆತಿದೆ. ಇಲ್ಲಿನ ಕಾರ್ಯಕರ್ತರೊಂದಿಗೆ ತಾನಿರುವುದಾಗಿ ಸ್ಪಷ್ಟಪಡಿಸಿ, ಅಭಿವೃದ್ಧಿ ಕಾರ್ಯಗಳಿಗೆ ಸಂಬಂಧಿಸಿದಂತೆ ಮಡಿಕೇರಿ ಮತ್ತು ಮೈಸೂರಿನ ತನ್ನ ಕಚೇರಿಗಳಲ್ಲಿ ಕಾರ್ಯಕರ್ತರು ತನ್ನನ್ನು ಯಾವತ್ತೂ ಭೇಟಿಯಾಗಬಹುದೆಂದು ತಿಳಿಸಿ, ಮುಂದಿನ ಏ.3 ಕ್ಕೆ ಈ ಕ್ಷೇತ್ರದಿಂದ ಸ್ಪರ್ಧಿಸಲು ನಾಮಪತ್ರ ಸಲ್ಲಿಸುತ್ತಿರುವುದಾಗಿ ಹೇಳಿದರು.











