ಮಡಿಕೇರಿ ಮಾ.28 NEWS DESK : ಕೊಡಗು- ದಕ್ಷಿಣ ಕನ್ನಡ ಗಡಿಯ ಕೂಜಿಮಲೆಯಲ್ಲಿ ಅಪರಿಚಿತ ಮಹಿಳೆಯೊಬ್ಬಳು ಕಾಣಿಸಿಕೊಂಡಿದ್ದು, ಮತ್ತೆ ಶಂಕಿತ ನಕ್ಸಲರು ಬಂದಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಮಾ.16ರಂದು ನಾಲ್ವರು ಶಂಕಿತ ನಕ್ಸಲರು ಕೂಜಿಮಲೆ ಎಸ್ಟೇಟ್ ನ ಅಂಗಡಿಗೆ ಭೇಟಿ ನೀಡಿ ದಿನಸಿ ಸಾಮಾಗ್ರಿ ಖರೀದಿಸಿ ಅರಣ್ಯ ಪ್ರದೇಶದಲ್ಲಿ ನುಸುಳಿದ್ದರು. ಇದೇ ನಾಲ್ವರ ತಂಡ ಕಡಬ ತಾಲ್ಲೂಕಿನ ಸುಬ್ರಹ್ಮಣ್ಯ ಗ್ರಾ.ಪಂ ವ್ಯಾಪ್ತಿಯ ಐನೆಕಿದು ಗ್ರಾಮದ ಅರಣ್ಯದಂಚಿನಲ್ಲಿ ಮಾ.23ರಂದು ಕಾಣಿಸಿಕೊಂಡಿದ್ದರು. ಅಲ್ಲದೆ ಮನೆಯೊಂದಕ್ಕೆ ಭೇಟಿ ಕೂಡ ನೀಡಿದ್ದರು.
ಈ ಪ್ರದೇಶದಲ್ಲಿ ನಕ್ಸಲ್ ನಿಗ್ರಹ ದಳ ಕೂಂಬಿAಗ್ ಕಾರ್ಯಾಚರಣೆಯನ್ನು ತೀವ್ರಗೊಳಿಸಿತ್ತು. ಆದರೆ ಇದೀಗ ಮತ್ತೆ ಮಾ.27 ರಂದು ಕೂಜಿಮಲೆಯಲ್ಲಿ ಅಪರಿಚಿತ ಮಹಿಳೆ ತೆರಳಿರುವುದನ್ನು ಸ್ಥಳೀಯರು ನೋಡಿದ್ದಾರೆ ಎಂದು ಹೇಳಲಾಗಿದೆ. ಗ್ರಾಮಸ್ಥರು ಆತಂಕ ವ್ಯಕ್ತಪಡಿಸಿರುವ ಹಿನ್ನೆಲೆ ನಕ್ಸಲ್ ನಿಗ್ರಹ ದಳ ಇದೇ ಪ್ರದೇಶದಲ್ಲಿ ಕಾರ್ಯಾಚರಣೆ ತೀವ್ರಗೊಳಿಸಿದ್ದು, ಇಲ್ಲಿಯವರೆಗೆ ಶಂಕಿತ ನಕ್ಸಲರು ಪತ್ತೆಯಾಗಿಲ್ಲ.
Breaking News
- *ವೀರ ಸೇನಾನಿಗಳಿಗೆ ಅಗೌರವ : ಕಿಡಿಗೇಡಿಯನ್ನು ಬಂಧಿಸಲು ನಾಪೋಕ್ಲು ಕೊಡವ ಸಮಾಜ ಒತ್ತಾಯ*
- *ಇಂದಿರಾ ನಗರ : ನೂತನ ಕಾಂಕ್ರೀಟ್ ರಸ್ತೆ ಉದ್ಘಾಟಿಸಿದ ಶಾಸಕ ಡಾ.ಮಂತರ್ ಗೌಡ*
- *ವೀರ ಸೇನಾನಿಗಳಿಗೆ ಅಪಮಾನ : ವ್ಯಾಲಿಡ್ಯೂ ಕೊಡವ ಕಲ್ಚರಲ್ ಅಸೋಸಿಯೇಷನ್ ಖಂಡನೆ*
- *ವೀರ ಸೇನಾನಿಗಳಿಗೆ ಅಗೌರವ : ಜಿಲ್ಲಾ ಬಿಜೆಪಿಯಿಂದ ಎಸ್ಪಿಗೆ ದೂರು*
- *ಮಡಿಕೇರಿಯಲ್ಲಿ ವಕೀಲರ ಸಂಘದಿಂದ ಪ್ರತಿಭಟನೆ*
- *ಜಿಲ್ಲಾ ಮಟ್ಟದ ಯುವಜನೋತ್ಸವ : ಹೆಸರು ನೋಂದಾಯಿಸಿಕೊಳ್ಳಲು ನ.28 ಕೊನೆ ದಿನ*
- *ನ.26 ರಂದು ಸಿಎನ್‌ಸಿಯಿಂದ ಕೊಡವ ನ್ಯಾಷನಲ್ ಡೇ ಮತ್ತು ಸಂವಿಧಾನ ದಿನಾಚರಣೆ*
- *ನ.24 ರಂದು ಕೊಡಗು ಜಿಲ್ಲಾ ಕಿವುಡರ ಸಂಘದ ಸಭೆ*
- *ಕುಶಾಲನಗರದಲ್ಲಿ ಅಕ್ಷರ ಜ್ಯೋತಿ ಯಾತ್ರೆಗೆ ಸ್ವಾಗತ : ಉತ್ತಮ ಸಂಸ್ಕಾರ, ಸದ್ಗುಣ ಬೆಳೆಸಿಕೊಳ್ಳಲು ಬಸವಕುಮಾರ್ ಪಾಟೀಲ್ ಕರೆ*
- *ನ.29 ರಂದು ಮೂರ್ನಾಡುವಿನಲ್ಲಿ 69ನೇ ಕನ್ನಡ ರಾಜ್ಯೋತ್ಸವದ ಸಂಭ್ರಮ*