ಉತ್ತರಾಖಂಡ ಮಾ.28 NEWS DESK : ಉತ್ತರಾಖಂಡದ ನಾನಕ್ ಮಟ್ಟಾ ಸಾಹಿಬ್ ಗುರುದ್ವಾರದ ಸಿಬ್ಬಂದಿಯನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಗುರುವಾರ ಮುಂಜಾನೆ ಬೈಕ್‌ನಲ್ಲಿ ಬಂದ ಇಬ್ಬರು ಮುಸುಕುಧಾರಿ ದುಷ್ಕರ್ಮಿಗಳು ದೇಗುಲದ ಆವರಣದಲ್ಲಿದ್ದ ಸಿಬ್ಬಂದಿ ಬಾಬಾ ತಾರ್ಸೆಮ್ ಸಿಂಗ್ ಎಂಬುವವರನ್ನು ಹತ್ಯೆ ಮಾಡಿ ಪರಾರಿಯಾಗಿದ್ದಾರೆ. ಬೆಳಿಗ್ಗೆ ಏಳು ಗಂಟೆಯ ಸುಮಾರಿಗೆ ಕೊಲೆ ನಡೆದಿದ್ದು ತನಿಖೆಗೆ ವಿಶೇಷ ತನಿಖಾ ತಂಡ ರಚಿಸಲಾಗಿದೆ. ಘಟನೆಯ ದೃಶ್ಯ ಅಲ್ಲಿನ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು ಇಬ್ಬರು ಮುಸುಕುಧಾರಿಗಳು ಬೈಕ್ ನಲ್ಲಿ ಬಂದು ಬಾಬಾ ತಾರ್ಸೆಮ್ ಸಿಂಗ್ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ.










