ಕುಶಾಲನಗರ ಮಾ.28 NEWS DESK : ಕಾವೇರಿ ಕಾಲಿಂಗ್ ಸಂಸ್ಥೆಯ ಆಶ್ರಯದಲ್ಲಿ ಶಿವಮೊಗ್ಗದ ಯುವಕನೊಬ್ಬ ತಲಕಾವೇರಿಯಿಂದ ಪೂಂಪ್ ಹಾರ್ ತನಕ ಪಾದಯಾತ್ರೆ ಹಮ್ಮಿಕೊಂಡಿದ್ದು ಕುಶಾಲನಗರದಲ್ಲಿ ಕಾವೇರಿ ನದಿ ಸ್ವಚ್ಛತಾ ಅಭಿಯಾನ ವತಿಯಿಂದ ಆತ್ಮೀಯವಾಗಿ ಬರಮಾಡಿಕೊಳ್ಳಲಾಯಿತು. ನದಿ ಜಲಮೂಲಗಳ ಮಹತ್ವದ ಬಗ್ಗೆ ವಿದ್ಯಾರ್ಥಿಗಳಿಗೆ ಸಾರ್ವಜನಿಕರಿಗೆ ಅರಿವು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಶಿವಮೊಗ್ಗ ಮೂಲದ ಯುವಕ ಶ್ರೇಯಸ್ ಕಳೆದ ಎರಡು ದಿನಗಳ ಹಿಂದೆ ಶ್ರೀ ಕ್ಷೇತ್ರ ತಲಕಾವೇರಿಯಿಂದ ಪಾದಯಾತ್ರೆ ಪ್ರಾರಂಭಿಸಿದ್ದು, ಎರಡು ತಿಂಗಳುಗಳ ಕಾಲ ಯಾತ್ರೆ ಮುಂದುವರಿಸುವುದಾಗಿ ತಿಳಿಸಿದ್ದಾರೆ. ಕುಶಾಲನಗರಕ್ಕೆ ಆಗಮಿಸಿದ ಸಂದರ್ಭ ಕಾವೇರಿ ನದಿ ಸ್ವಚ್ಛತಾ ಆಂದೋಲನ ಪ್ರಮುಖರಾದ ಎಂ ಎನ್ ಚಂದ್ರಮೋಹನ್, ಡಿ ಆರ್ ಸೋಮಶೇಖರ್ ಪ್ರದೀಪ್ ಕುಮಾರ್, ಸ್ಥಳೀಯ ಪತ್ರಕರ್ತರಾದ ವಿನೋದ್ ಜಯಪ್ರಕಾಶ್ ,ಶಂಶುದ್ದೀನ್ ಅವರುಗಳು ಗಣಪತಿ ದೇವಾಲಯದ ಬಳಿ ಬರಮಾಡಿಕೊಂಡರು.










