ಕುಶಾಲನಗರ ಮಾ.28 NEWS DESK : ಮಡಿಕೇರಿ ಕ್ಷೇತ್ರ ಶಾಸಕ ಡಾ.ಮಂತರ್ ಗೌಡ ಅವರು ಕುಶಾಲನಗರ ಪುರಸಭೆ ನಾಮ ನಿರ್ದೇಶಿತ ಸದಸ್ಯರಾದ ಬಿ.ಎ.ಅಬ್ದುಲ್ ಖಾದರ್ ಅವರ ಮನೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. ಕಳೆದ ಕೆಲವು ಸಮಯಗಳಿಂದ ಅನಾರೋಗ್ಯದಿಂದ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿರುವ ಕಾಂಗ್ರೆಸ್ ಹಿರಿಯ ಮುಖಂಡ ಅಬ್ದುಲ್ ಖಾದರ್ ಅವರ ಆರೋಗ್ಯ ವಿಚಾರಿಸಿ ನಂತರ ಪುರಸಭೆಗೆ ನೂತನವಾಗಿ ಸದಸ್ಯರಾಗಿ ಆಯ್ಕೆಗೊಂಡಿರುವ ಖಾದರ್ ಅವರನ್ನು ಶಾಲು ಹೊಂದಿಸಿ ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭ ನಗರ ಕಾಂಗ್ರೆಸ್ ಅಧ್ಯಕ್ಷರಾದ ಪ್ರಮೋದ್ ಮುತ್ತಪ್ಪ, ಉಪಾಧ್ಯಕ್ಷರಾದ ಜೋಸೆಫ್ ವಿಕ್ಟರ್ ಸೋನ್ಸ್, ಕೆಪಿಸಿಸಿ ಸದಸ್ಯರಾದ ಮಂಜುನಾಥ ಗುಂಡುರಾವ್, ಹಾಜು ಇದ್ದರು.









