ನಾಪೋಕ್ಲು ಮಾ.29 NEWS DESK : ನವಕೊಡಗಿಗೆ ಭದ್ರ ಬುನಾದಿಯೊಂದಿಗೆ ಕೊಡಗಿನಲ್ಲಿ ವೀರಶೈವ ಧರ್ಮ ಪಸರಿಸಲು ಹಾಲೇರಿ ರಾಜರ ಕೊಡುಗೆ ಅಪಾರ ಎಂದು ಭಾಗಮಂಡಲ ಕಾವೇರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ವಿ.ವಿ.ಶಿವಪ್ಪ ತಿಳಿಸಿದರು.
ಸುವರ್ಣ ಕರ್ನಾಟಕ ೫೦ ರ ಸಂಭ್ರಮ, ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಮಡಿಕೇರಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ನಾಪೋಕ್ಲು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ನಾಪೋಕ್ಲು ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತಿನ ಸಂಯುಕ್ತ ಆಶ್ರಯದಲ್ಲಿ ಸ್ಥಳೀಯ( ನಾಪೋಕ್ಲು) ಸರ್ಕಾರಿ ಪ್ರಥಮ ದರ್ಜೆ ಕಾಲೇಜು ನಲ್ಲಿ ದಿ. ಶಾಂತಮಲ್ಲ ಸ್ವಾಮಿಗಳ ದತ್ತಿ ಮತ್ತು ದಿ. ಎಂ.ಜಿ.ಪದ್ಮನಾಭ ಕಾಮತ್ ದತ್ತಿ ಉಪನ್ಯಾಸ ಕಾರ್ಯಕ್ರಮದಲ್ಲಿ “ಕೊಡಗಿನ ವೀರಶೈವ ಅರಸರು” ಎಂಬ ವಿಷಯದ ಕುರಿತು ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು.
ಇಂದಿನ ನೂತನ ಕೊಡಗಿಗೆ ವೀರಶೈವ ದೊರೆಗಳಾದ ಹಾಲೇರಿ ದೊರೆಗಳ ಕೊಡುಗೆ ಅಪಾರ ಎಂದು ಹೇಳಿದರು.
ಕೊಡಗು ಜಿಲ್ಲೆಯಲ್ಲಿ ಸಾಹಿತ್ಯ, ಸಂಸ್ಕೃತಿ ಕಾರ್ಯಗಳಿಗೆ ದುಡಿದ ಉದ್ಯಮಿಗಳ ಕುರಿತಾದ ದತ್ತಿ ಉಪನ್ಯಾಸದಲ್ಲಿ ಮಾತನಾಡಿದ ರೇವತಿ ರಮೇಶ್, ಕನ್ನಡ ಸಾಹಿತ್ಯ ಬೆಳವಣಿಗೆಗೆ ಸಾಹಿತಿಗಳಷ್ಟೇ ಕೊಡುಗೆ ಉದ್ಯಮಿಗಳು ಮತ್ತು ಇತರ ಕ್ಷೇತ್ರದ ಸಾಹಿತ್ಯ ಆರಾಧಕರ ಕೊಡುಗೆಗಳು ಎಂದು ಕೆಲವು ಕೊಡುಗೆಗಳನ್ನು ನೆನೆದರು.
ಕಾರ್ಯಕ್ರಮದ ಪ್ರಾಸ್ತಾವಿಕ ಮಾತುಗಳನ್ನಾಡಿದ ಮಡಿಕೇರಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಕಡ್ಲೇರ ತುಳಸಿ ಮೋಹನ್ ಕಾರ್ಯಕ್ರಮ ಆಯೋಜನೆಯ ಉದ್ದೇಶದ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಿದರು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ನಾಪೋಕ್ಲು ಕಾಲೇಜಿನ ಪ್ರಾಂಶುಪಾಲರಾದ ಡಾ. ಕಾವೇರಿ ಪ್ರಕಾಶ್ , ಕನ್ನಡ ಸಾಹಿತ್ಯ ಬೆಳವಣಿಗೆಗೆ ಇಂತಹ ಕಾರ್ಯಕ್ರಮಗಳು ಪೂರಕವಾಗುತ್ತವೆ ಹಾಗೂ ಹೊಸ ಪೀಳಿಗೆಗೆ ಕನ್ನಡದ ಒಲವನ್ನು ಹೆಚ್ಚಿಸಲು ಸಹಾಯಕವಾಗುತ್ತದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಐಕ್ಯುಎಸಿ ಸಂಚಾಲಕ ನಂದೀಶ್, ಕಾಲೇಜು ಅಭಿವೃದ್ದಿ ಸಮಿತಿಯ ಸದಸ್ಯರಾದ ಪದ್ಮಾವತಿ ಹಾಗೂ ದೇವಯ್ಯ ಕಾಲೇಜಿನ ಉಪನ್ಯಾಸಕರು ವಿದ್ಯಾರ್ಥಿಗಳು ಭಾಗವಹಿಸಿದರು.
ಉಪನ್ಯಾಸಕರಾದ ರಂಗಸ್ವಾಮಿ ಸ್ವಾಗತಿಸಿದರು. ವಿದ್ಯಾರ್ಥಿಗಳಾದ ಸುಕ್ರುಮಣಿ, ಲುಕಿಮಣಿ ಪ್ರಾರ್ಥಿಸಿದರು. ಕನ್ನಡ ಉಪನ್ಯಾಸಕಿ ಹರಿಣಿ ನಿರೂಪಿಸಿದರು. ದ್ವಿತೀಯ ಬಿಎ ವಿದ್ಯಾರ್ಥಿನಿ ರಂಜಿತಾ ವಂದಿಸಿದರು.
ನಾಪೋಕ್ಲು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ನಲ್ಲಿ ಹಮ್ಮಿಕೊಳ್ಳಾಗಿದ್ದ ದಿ. ಶಾಂತಮಲ್ಲ ಸ್ವಾಮಿಗಳ ದತ್ತಿ ಮತ್ತು ದಿ. ಎಂ ಜಿ ಪದ್ಮನಾಭ ಕಾಮತ್ ದತ್ತಿ ಉಪನ್ಯಾಸ ಕಾರ್ಯಕ್ರಮದಲ್ಲಿ ಭಾಗಮಂಡಲ ಕಾವೇರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ವಿ.ವಿ.ಶಿವಪ್ಪ ಮಾತನಾಡಿದರು.
ವರದಿ : ದುಗ್ಗಳ ಸದಾನಂದ.