ನಾಪೋಕ್ಲು ಮಾ.29 NEWS DESK : ಬಲ್ಲಮಾವಟಿ ಗ್ರಾಮದ ಶ್ರೀ ಭಗವತಿ ದೇವರ ವಾರ್ಷಿಕ ಉತ್ಸವ ನಾಲ್ಕು ದಿನಗಳ ಕಾಲ ಶ್ರದ್ಧಾಭಕ್ತಿಯಿಂದ ಜರುಗಿತು.
ಉತ್ಸವದ ಅಂಗವಾಗಿ ಎತ್ತು ಪೋರಾಟ , ತೆಂಗಿನಕಾಯಿಗೆ ಗುಂಡು ಹೊಡೆಯುವುದು, ದೇವರ ಜಳಕ, ಕಳಶ ಪೂಜೆ ಸೇರಿದಂತೆ ವಿವಿಧ ಪೂಜಾ ಕೈಕರ್ಯಗಳು ನಡೆಯಿತು.
ಮಹಾಪೂಜೆ ನಂತರ ನೆರೆದಿದ್ದ ಭಕ್ತಾಧಿಗಳಿಗೆ ತೀರ್ಥ ಪ್ರಸಾದ ಹಾಗೂ ಅನ್ನದಾನ ನಡೆಯಿತು.
ದೇವರ ಜಳಕದ ಬಳಿಕ ರಾತ್ರಿ ದೇವರ ನೃತ್ಯಬಲಿ ನಡೆಯಿತು. ಹೆಚ್ಚಿನ ಸಂಖ್ಯೆಯ ಗ್ರಾಮಸ್ಥರು ಪಾಲ್ಗೊಂಡಿದ್ದರು. ಕಳಶ ಪೂಜೆಯೊಂದಿಗೆ ಉತ್ಸವಕ್ಕೆ ತೆರೆ ಎಳೆಯಲಾಯಿತು.
ದೇವಾಲಯದ ತಕ್ಕ ಮುಖ್ಯಸ್ಥರು ಆಡಳಿತ ಮಂಡಳಿ ಅಧ್ಯಕ್ಷರಾ, ಸದಸ್ಯರು. ಹಾಗೂ
ಅಧಿಕ ಸಂಖ್ಯೆಯ ಭಕ್ತಾದಿಗಳು ಉತ್ಸವದಲ್ಲಿ ಪಾಲ್ಗೊಂಡಿದ್ದರು.
ವರದಿ : ದುಗ್ಗಳ ಸದಾನಂದ.