ಮಡಿಕೇರಿ ಮಾ.29 NEWS DESK : ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಸಚಿವ ಶಿವರಾಜ ತಂಗಡಗಿ ನೀಡಿರುವ ಹೇಳಿಕೆಯನ್ನು ಖಂಡಿಸಿ, ಕೊಡಗು ಜಿಲ್ಲಾ ಬಿಜೆಪಿ ಯುವ ಮೋರ್ಚಾ ನಗರದ ಜನರಲ್ ಕೆ.ಎಸ್.ತಿಮ್ಮಯ್ಯ ವೃತ್ತದಲ್ಲಿ ಪ್ರತಿಭಟನೆ ನಡೆಸಿತು.
ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ ಹಾಗೂ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಮಹೇಶ್ ತಿಮ್ಮಯ್ಯ ಅವರ ನೇತೃತ್ವದಲ್ಲಿ ಶುಕ್ರವಾರ ಜ.ತಿಮ್ಮಯ್ಯ ವೃತ್ತದಲ್ಲಿ ಸೇರಿದ ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಸಚಿವ ಶಿವರಾಜ ತಂಗಡಗಿ ವಿರುದ್ಧ ಘೋಷಣೆಗಳನ್ನು ಕೂಗಿ ತಮ್ಮ ತೀವ್ರ ಆಕ್ರೋಶ ವ್ಯಕಪಡಿಸಿದರು.
ಮಹೇಶ್ ತಿಮ್ಮಯ್ಯ ಮಾತನಾಡಿ, ವಿಶ್ವ ಮಟ್ಟದಲ್ಲಿ ಗೌರವಕ್ಕೆ ಪಾತ್ರರಾಗಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಬಗ್ಗೆ ರಾಜ್ಯದ ಕನ್ನಡ ಮತ್ತು ಸಂಸ್ಕøತಿ ಇಲಾಖಾ ಸಚಿವÀ ಶಿವರಾಜ ತಂಗಡಗಿ ಅವರು ‘ಮೋದಿ ಎಂದು ಹೇಳುವವರ ಕಪಾಳಕ್ಕೆ ಹೊಡೆಯಿರಿ’ ಎನ್ನುವ ಅವಹೇಳನಕಾರಿ ಹೇಳಿಕೆಯನ್ನು ನೀಡಿದ್ದಾರೆ, ಇದನ್ನು ಪಕ್ಷ ತೀವ್ರವಾಗಿ ಖಂಡಿಸುವುದಾಗಿ ಹೇಳಿದರು.
ಈ ರಾಷ್ಟ್ರದ ಹೆಮ್ಮೆಯ ಪ್ರಧಾನಿ ‘ಮೋದಿ’ ಅವರ ಪರವಾಗಿ ಘೋಷಣೆಗಳನ್ನು ಮೊಳಗಿಸಿರುವ ನಮ್ಮ ಕಪಾಳಕ್ಕೆ ತಾಕತ್ತಿದ್ದರೆ ಹೊಡೆಯಿರಿ. ಅದಕ್ಕೆ ತಕ್ಕ ಪ್ರತಿಕ್ರಿಯೆನ್ನು ನೀಡುವುದಾಗಿ ತಿಳಿಸಿದÀರು.
ಇದೇ ರೀತಿ ಮೋದಿ ವಿರುದ್ಧ ನಾಲಿಗೆಯನ್ನು ಹರಿಬಿಟ್ಟಲ್ಲಿ ರಾಜ್ಯದಾದ್ಯಂತ ಶಿವರಾಜ ತಂಗಡಗಿ ಅವರು ಹೋದೆಡೆಯಲ್ಲೆಲ್ಲ ಬಿಜೆಪಿ ಯುವ ಮೋರ್ಚಾದಿಂದ ಘೇರಾವೋ ಹಾಕಲಾಗುವುದೆಂದು ಎಚ್ಚರಿಕೆ ನೀಡಿದರು.
ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ ಮಾತನಾಡಿ, ಸಚಿವ ಶಿವರಾಜ ತಂಗಡಗಿ ಅವರ ಹೇಳಿಕೆ, ಕಾಂಗ್ರೆಸ್ ಸಂಸ್ಕøತಿಯನ್ನು ತೋರಿಸುತ್ತದೆ. ಲೋಕಸಭಾ ಚುನಾವಣೆಯ ಹಿನ್ನೆಲೆ ಕಾಂಗ್ರೆಸ್ ಈ ರೀತಿಯ ಹೇಳಿಕೆಗಳನ್ನು ನೀಡುತ್ತಿದೆ ಆರೋಪಿಸಿದರು.
ಲೋಕಸಭಾ ಚುನಾವಣೆಯಲ್ಲಿ ರಾಜ್ಯದ ಯಾವ ಕ್ಷೇತ್ರದಲ್ಲು ಕಾಂಗ್ರೆಸ್ ಗೆಲುವು ಪಡೆಯಲು ಸಾಧ್ಯವಿಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ. ಇದನ್ನು ಸಹಿಸಿಕೊಳ್ಳಲಾಗದೆ ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡಲಾಗುತ್ತಿದೆ. ಇದೇ ರೀತಿ ಹೇಳಿಕೆ ನೀಡುವುದನ್ನು ಮುಂದುವರಿಸಿದಲ್ಲಿ ತೀವ್ರ ಪ್ರತಿಭಟನೆಗೆ ಮುಂದಾಗಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಕಾಂಗ್ರೆಸ್ ನಾಯಕರ ಇಂತಹ ಧೋರಣೆ ಮತ್ತು ವರ್ತನೆಗಳಿಗೆ ರಾಜ್ಯದ ಜನತೆ ತಕ್ಕ ಉತ್ತರವನ್ನು ಲೋಕಸಭಾ ಚುನಾವಣೆಯಲ್ಲಿ ನೀಡಲಿದ್ದು, ಎಲ್ಲಾ 28 ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಎಂದರು.
ಪ್ರತಿಭಟನೆಯಲ್ಲಿ ಮಾಜಿ ಎಂಎಲ್‍ಸಿ ಸುನಿಲ್ ಸುಬ್ರಮಣಿ, ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷ ರಾಬಿನ್ ದೇವಯ್ಯ, ಪ್ರಧಾನ ಕಾರ್ಯದರ್ಶಿಗಳಾದ ಮಹೇಶ್ ಜೈನಿ, ಅರುಣ್ ಕುಮಾರ್, ಉಪಾಧ್ಯಕ್ಷರಾದ ಜಗದೀಶ್, ಮನು ಮಂಜುನಾಥ್, ನಗರಾಧ್ಯಕ್ಷ ಉಮೇಶ್ ಸುಬ್ರಮಣಿ, ಎಸ್‍ಸಿ ಘಟಕದ ಅಧ್ಯಕ್ಷ ಪಿ.ಎಂ.ರವಿ, ನಗರಸಭಾ ಸದಸ್ಯರು ಸೇರಿದಂತೆ ಕಾರ್ಯಕರ್ತರು ಪಾಲ್ಗೊಂಡಿದ್ದರು.