ಮಡಿಕೇರಿ ಮಾ.29 NEWS DESK : ಪ್ರತಿಷ್ಠೆಯ ಕಣವಾಗಿರುವ ಮೈಸೂರು- ಕೊಡಗು ಲೋಕಸಭಾ ಕ್ಷೇತ್ರವನ್ನು ಗೆಲ್ಲುವ ಗುರಿ ಹೊಂದಿರುವ ಕಾಂಗ್ರೆಸ್ ಪ್ರಚಾರ ಕಾರ್ಯವನ್ನು ಬಿರುಸುಗೊಳಿಸಿರುವ ಕಾಂಗ್ರೆಸ್ ಮಾ.31 ರಂದು ವಿರಾಜಪೇಟೆ, ನಾಪೋಕ್ಲು ಮತ್ತು ಕುಶಾಲನಗರದಲ್ಲಿ ಬೃಹತ್ ಸಮಾವೇಶವನ್ನು ಆಯೋಜಿಸಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ ತಿಳಿಸಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು ತಮ್ಮ ಅಧ್ಯಕ್ಷತೆಯಲ್ಲಿ ವಿರಾಜಪೇಟೆ ಕೊಡವ ಸಮಾಜದಲ್ಲಿ ಬೆಳಿಗ್ಗೆ 10.30 ಗಂಟೆಗೆ, ನಾಪೋಕ್ಲು ಕೊಡವ ಸಮಾಜದಲ್ಲಿ ಮಧ್ಯಾಹ್ನ 1.30 ಕ್ಕೆ ಮತ್ತು ಕುಶಾಲನಗರದ ಕಾರು ನಿಲ್ದಾಣದಲ್ಲಿ ಸಂಜೆ 5 ಗಂಟೆಗೆ ಸಮಾವೇಶ ನಡೆಯಲಿದೆ ಎಂದು ಹೇಳಿದ್ದಾರೆ.
ಸಮಾವೇಶದಲ್ಲಿ ಕೊಡಗು-ಮೈಸೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಗೌಡ, ಜಿಲ್ಲಾ ಉಸ್ತುವಾರಿ ಸಚಿವ ಎನ್.ಭೋಸರಾಜು, ಕೆಪಿಸಿಸಿ ಕಾರ್ಯಾಧ್ಯಕ್ಷರು, ಶಾಸಕರು ಹಾಗೂ ಕೊಡಗು- ಮೈಸೂರು ಲೋಕಸಭಾ ಕ್ಷೇತ್ರದ ಉಸ್ತುವಾರಿ ತನ್ವೀರ್ ಸೇಠ್, ಸಚಿವರುಗಳಾದ ಎಚ್.ಸಿ.ಮಹದೇವಪ್ಪ ಹಾಗೂ, ವೆಂಕಟೇಶ್, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ, ಮಡಿಕೇರಿ ಶಾಸಕ ಡಾ.ಮಂತರ್ ಗೌಡ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳು, ಮಾಜಿ ಶಾಸಕರುಗಳು, ಮುಂಚೂಣಿ ಘಟಕಗಳ ಅಧ್ಯಕ್ಷರು, ಡಿಸಿಸಿ ಪದಾಧಿಕಾರಿಗಳು, ಎಲ್ಲಾ ಚುನಾಯಿತ ಜನಪ್ರತಿನಿಧಿಗಳು, ಬೂತ್ ಅಧ್ಯಕ್ಷರುಗಳು, ವಲಯ ಕಾಂಗ್ರೆಸ್ ಅಧ್ಯಕ್ಷರುಗಳು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳು, ಪದಾಧಿಕಾರಿಗಳು ಹಾಗೂ ಸಾವಿರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ.
ಜಿಲ್ಲೆಯಾದ್ಯಂತ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಗೌಡ ಅವರಿಗೆ ಉತ್ತಮ ಜನಬೆಂಬಲ ದೊರೆಯುತ್ತಿದ್ದು, ವಿಧಾನಸಭಾ ಚುನಾವಣೆಯಲ್ಲಿ ಎರಡು ಕ್ಷೇತ್ರಗಳನ್ನು ಗೆದ್ದಂತೆ ಈ ಬಾರಿ ಲೋಕಸಭಾ ಕ್ಷೇತ್ರವನ್ನು ಕೂಡ ಗೆಲ್ಲುವುದಾಗಿ ಧರ್ಮಜ ಉತ್ತಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಇಬ್ಬರು ಶಾಸಕರು ಕಾಂಗ್ರೆಸ್ಸಿಗರೇ ಆಗಿರುವುದರಿಂದ, ಸಂಸದರು ಕೂಡ ಕಾಂಗ್ರೆಸ್ಸಿಗರೇ ಆದರೆ ಜಿಲ್ಲೆಯಲ್ಲಿ ಹೆಚ್ಚು ಹೆಚ್ಚು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಸಾಧ್ಯವಾಗುತ್ತದೆ. ಈ ಬಗ್ಗೆ ಜನರಿಗೂ ಅರಿವಿದ್ದು, ಅತ್ಯಧಿಕ ಮತಗಳ ಅಂತರದಿಂದ ಲಕ್ಷ್ಮಣ್ ಗೌಡ ಅವರು ಗೆಲುವು ಸಾಧಿಸಲಿದ್ದಾರೆ ಎಂದು ಅಭಿಪ್ರಾಯಪಟ್ಟಿದ್ದಾರೆ.
Breaking News
- *ಜಯ ಹೇ ಕರ್ನಾಟಕ ಮಾತೆ ಗೀತೆಗೆ 100 ವರ್ಷ : ಕೊಡಗಿನಲ್ಲಿ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳು*
- *ಕೊಡವ ನ್ಯಾಷನಲ್ ಡೇ ಹಿನ್ನೆಲೆ : ದೇವಟ್ ಪರಂಬುವಿನಲ್ಲಿ ಸಿಎನ್ಸಿ ಪ್ರಾರ್ಥನೆ*
- *ವೀರ ಸೇನಾನಿಗಳಿಗೆ ಅಗೌರವ : ಮಡಿಕೇರಿ ತಾಲ್ಲೂಕು ಒಕ್ಕಲಿಗರ ಸಂಘ ಖಂಡನೆ*
- *ಕೊಡವ ಮಕ್ಕಡ ಕೂಟದಿಂದ ದಾಖಲೆಯ 100ನೇ ಪುಸ್ತಕ “100ನೇ ಮೊಟ್ಟ್” ಬಿಡುಗಡೆ : ಭಾಷೆ, ಜಾತಿಯನ್ನು ಮೀರಿದ ಜ್ಞಾನ ಭಂಡಾರವೇ ಸಾಹಿತ್ಯ : ಬಾಚರಣಿಯಂಡ ಅಪ್ಪಣ್ಣ*
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*