ಮಡಿಕೇರಿ ಮಾ.29 NEWS DESK : ದಂಪತಿ ಸಾವಿನಲ್ಲೂ ಒಂದಾದ ಘಟನೆ ಕುಶಾಲನಗರದ ವೆಂಕಟೇಶ್ವರ ಬಡಾವಣೆಯಲ್ಲಿ ನಡೆದಿದೆ. ಸ್ಥಳೀಯ ನಿವಾಸಿ ವರ್ತಕ ಮಂಜುನಾಥ್ ಶೆಟ್ಟಿ ಅವರು ಮಾ.28 ರಂದು ಹೃದಯಾಘಾತದಿಂದ ನಿಧನ ಹೊಂದಿದರು. ಪತಿಯ ಸಾವಿನಿಂದ ಬಹಳಷ್ಟು ನೊಂದಿದ್ದ ಮಂಜುನಾಥ್ ಅವರ ಪತ್ನಿ ಲೀಲಾವತಿ ಅವರು ಸಂಜೆ ವೇಳೆ ಮನೆಯಲ್ಲಿ ಅಸ್ವಸ್ಥರಾದರು. ಖಾಸಗಿ ಆಸ್ಪತ್ರೆಗೆ ಕರೆದೊಯ್ದಾಗ ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದರು. ಬೆಳಿಗ್ಗೆ ಹೃದಯಾಘಾತಕ್ಕೊಳಗಾದ ಮಂಜುನಾಥ್ ಶೆಟ್ಟಿ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರು ಆಸ್ಪತ್ರೆಗೆ ಕರೆದೊಯ್ಯುವ ಸಂದರ್ಭ ಮಾರ್ಗ ಮಧ್ಯೆ ಮೃತಪಟ್ಟರು.
ಮೃತ ದಂಪತಿ ಓರ್ವ ಪುತ್ರ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ದಂಪತಿ ಸಾವಿನ ಬಗ್ಗೆ ಕುಟುಂಬದ ಸದಸ್ಯರು ಹಾಗೂ ಸ್ನೇಹಿತರು ದಿಗ್ಭ್ರಮೆ ವ್ಯಕ್ತಪಡಿಸಿದ್ದಾರೆ.










