ಸೋಮವಾರಪೇಟೆ ಮಾ.29 NEWS DESK : ಕಾಫಿ ಮಂಡಳಿ ಮತ್ತು ಭುವನ ಮಂದಾರ ರೈತ ಉತ್ಪಾದಕ ಸಂಸ್ಥೆ ಸಹಯೋಗದೊಂದಿಗೆ ಈ ಕಾಮ್ ಕಮಾಡಿಟೀಸ್ ವತಿಯಿಂದ ಮಣ್ಣು ಪರೀಕ್ಷೆ ಕುರಿತು ಒಂದು ದಿನದ ಕಾರ್ಯಾಗಾರವನ್ನು ಮಹಿಳಾ ಸಮಾಜ ಸಭಾಂಗಣದಲ್ಲಿ ಈಚೆಗೆ ಆಯೋಜಿಸಲಾಗಿತ್ತು.
ಕಾರ್ಯಕ್ರಮದಲ್ಲಿ ಈ ಕಾಮ್ ಕಂಪನಿಯ ಮುಖ್ಯಸ್ಥರಾದ ಡಾ. ಚಂಗಲ ರಾಯಪ್ಪ ಅವರು ಸುಸ್ಥಿರ ಕಾಫಿ ಕೃಷಿಯಲ್ಲಿ ಮಣ್ಣಿನ ಮಹತ್ವದ ಬಗ್ಗೆ ಹಾಗೂ ಅಂತರರಾಷ್ಟ್ರಿಯ ಮಾರುಕಟ್ಟೆ ಯಲ್ಲಿ ಭಾರತೀಯ ಕಾಫಿಯ ಪ್ರಾಮುಖ್ಯತೆ ಬಗ್ಗೆ ಮಾಹಿತಿ ನೀಡಿದರು. ಕಾಫಿ ಮಂಡಳಿಯ ಉಪನಿರ್ದೇಶಕರಾದ ಡಾ. ಚಂದ್ರಶೇಖರ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಕಾಫಿ ಬೆಳೆಗಾರರಿಗೆ ಕಾಫಿ ಮಂಡಳಿಯಿAದ ಸಿಗುವ ಸೌಲಭ್ಯಗಳ ಬಗ್ಗೆ ವಿವರಿಸಿದರು.
ಭುವನ ಮಂದಾರ ರೈತ ಉತ್ಪಾದಕ ಕಂಪೆನಿಯ ಅಧ್ಯಕ್ಷ ಎಸ್.ಎಂ. ಡಿಸಿಲ್ವ ಮಾತನಾಡಿ, ಮಣ್ಣು ಪರೀಕ್ಷೆ ಮಾಡಿ, ವರದಿಯ ಆಧಾರದ ಮೇಲೆ ನಿಗದಿತ ಪ್ರಮಾಣದಲ್ಲಿ ರಾಸಯನಿಕ ಗೊಬ್ಬರ ಹಾಕಿದರೆ ಉತ್ತಮ ಇಳುವರಿ ಸಾಧ್ಯ. ಈ ಕ್ರಮದಿಂದ ಉತ್ಪಾದನಾ ವೆಚ್ಚವೂ ಕಡಿಮೆಯಾಗಲಿದೆ ಎಂದು ಅಭಿಪ್ರಾಯಿಸಿದರು. ಅವಕಾಶ ಸಿಕ್ಕಾಗ ಕಾಫಿ ಬೆಳೆಗಾರರು ಮಣ್ಣಿನ ಪರೀಕ್ಷೆ ಮಾಡಿಸಿಕೊಳ್ಳುವಂತೆ ಸಲಹೆ ನೀಡಿದರು.
ಕಾಫಿ ಮಂಡಳಿಯ ಮಣ್ಣು ವಿಜ್ಞಾನಿ ಡಾ. ಎಸ್.ಎ. ನದಾಫ್ ಅವರು ಮಾತನಾಡಿ, ಆಮ್ಲೀಯ ಮಣ್ಣನ್ನು ಸರಿಪಡಿಸಿಕೊಳ್ಳಲು ಬೇಕಾಗುವ ಕ್ರಮಗಳ ಬಗ್ಗೆ ವಿವರಿಸಿದರು ಹಾಗೂ ಬೆಳೆಗಾರರು ತಂದ ಮಣ್ಣನ್ನು ಪರೀಕ್ಷೆ ನಡೆಸಿ, ಸುಣ್ಣವನ್ನು ಶಿಫಾರಸ್ಸು ಮಾಡಿ ವರದಿಯನ್ನು ಸ್ಥಳದಲ್ಲಿ ನೀಡಿದರು. ಇ-ಕಾಮ್ ಸಂಸ್ಥೆಯ ತಾರಾ ಕಾರ್ಯಕ್ರಮವನ್ನು ನಿರ್ವಹಿಸಿದರು.
Breaking News
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡಿ : ತೇಲಪಂಡ ಶಿವಕುಮಾರ್ ನಾಣಯ್ಯ ಒತ್ತಾಯ*
- *ಸುಂಟಿಕೊಪ್ಪ ನಾಡು ಪ್ರೌಢಶಾಲೆಯ ಅಭಿವೃದ್ಧಿಗೆ ದೇಣಿಗೆ ನೀಡಿದ ಹರಪಳ್ಳಿ ರವೀಂದ್ರ*
- *ಕೂಡಿಗೆಯಲ್ಲಿ ಕನ್ನಡ ರಾಜ್ಯೋತ್ಸವ ಸಂಭ್ರಮ : ಆಟೋ ಚಾಲಕರು ಕನ್ನಡ ನಾಡು-ನುಡಿಯ ರಾಯಭಾರಿಗಳು : ವಿ.ಪಿ.ಶಶಿಧರ್ ಬಣ್ಣನೆ*
- *ಗೋಣಿಕೊಪ್ಪ : ಮನಸ್ಸು ಮತ್ತು ಮನೆಯಿಂದಲೇ ಭ್ರಷ್ಟಾಚಾರ ಪ್ರಾರಂಭ : ಡಾ.ಕೆ.ಬಸವರಾಜು*
- *ಶಾಸಕ ಎ.ಎಸ್.ಪೊನ್ನಣ್ಣ ರಿಗೆ ವಿಧಾನಸಭಾಧ್ಯಕ್ಷರ ಕಚೇರಿಯಿಂದ ಕೊಡುಗೆ*
- *ಜಿಲ್ಲಾ ಮಟ್ಟದ ಚಾಂಪಿಯನ್ಶಿಪ್ನಲ್ಲಿ ನಾಟ್ಯಾಂಜಲಿ ನೃತ್ಯ ಸಂಸ್ಥೆಯ ವಿದ್ಯಾರ್ಥಿಗಳ ಸಾಧನೆ*
- *ವೀರ ಸೇನಾನಿಗಳಿಗೆ ಅಗೌರವ : ನಿವೃತ್ತ(ಮಾಜಿ) ಯೋಧರ ಒಕ್ಕೂಟ ಅರೆ ಸೇನಾಪಡೆ ಖಂಡನೆ : ಆರೋಪಿಯ ಗಡಿಪಾರಿಗೆ ಆಗ್ರಹ*
- *ದಿವ್ಯಜ್ಯೋತಿ ಪತ್ತಿನ ಸಹಕಾರ ಸಂಘದ ಚುನಾವಣೆ ಫಲಿತಾಂಶ*
- *ನ.29ರಂದು ಕೊಡಗು ಜಿಲ್ಲಾ ನಿವೃತ್ತ(ಮಾಜಿ) ಯೋಧರ ಒಕ್ಕೂಟ ಅರೆ ಸೇನಾಪಡೆಯ 12ನೇ ವಾರ್ಷಿಕ ಮಹಾಸಭೆ*
- *ನ.30 ರಂದು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಜನಪದ ನೃತ್ಯ ಮತ್ತು ಟಿ.ಪಿ.ರಮೇಶ್ ದತ್ತಿ ಪ್ರಶಸ್ತಿ ಪ್ರದಾನ ಸಮಾರಂಭ*