ಮಡಿಕೇರಿ ಮಾ.29 NEWS DESK : ವಿಶ್ವ ಕನ್ನಡ ಸಾಂಸ್ಕೃತಿಕ ಹಾಗೂ ಕಲಾ ಸಂಸ್ಥೆ ವತಿಯಿಂದ ಬೆಂಗಳೂರಿನಲ್ಲಿ ನಡೆದ ರಾಜ್ಯ ಮಟ್ಟದ ಮಹಿಳಾ ಸಮಾವೇಶದಲ್ಲಿ ಮಡಿಕೇರಿಯ ಭರತ ನಾಟ್ಯ ಕಲಾವಿದೆ ಕಾವ್ಯಶ್ರೀ ಕಪಿಲ್ ಅವರಿಗೆ ಶಿವ ಶರಣೆ ನೀಲಾಂಬಿಕೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಇವರು ಪ್ರಸ್ತುತ ಬಾಲಭವನದಲ್ಲಿ ಭರತನಾಟ್ಯ ತರಗತಿ ನಡೆಸುತ್ತಿದ್ದಾರೆ.








