ಸುಂಟಿಕೊಪ್ಪ ಮಾ.30 NEWS DESK : ಸುಂಟಿಕೊಪ್ಪ ಸಂತ ಅಂತೋಣಿ ದೇವಾಲಯದಲ್ಲಿ ಪವಿತ್ರ ಗುರುವಾರದ ಸಂಜೆ ಕಡೆಯ ಭೋಜನ ಮತ್ತು ಶುಭ ಶುಕ್ರವಾರ (ಗುಡ್‍ಫ್ರೈಡೆ)ದ ಅಂಗವಾಗಿ ವಿಶೇಷ ಬಲಿಪೂಜೆ ನಡೆಯಿತು.
ಸಂತ ಮೇರಿ ಶಾಲಾವರಣದಲ್ಲಿ ಪ್ರಾರ್ಥನಾ ಕೂಟವನ್ನು ದೇವಾಲಯದ ಧರ್ಮಗುರುಗಳಾದ ಫಾಧರ್ ಅರುಳ್ ಸೇಲ್ವಕುಮಾರ್ ಹಾಗೂ ಸಹಾಯಕ ಗುರುಗಳಾದ ನವೀನ್ ಕುಮಾರ್ ನೇರವೇರಿಸಿದರು. ನೂರಾರು ಸಂಖ್ಯೆಯಲ್ಲಿ ನೇರೆದಿದ್ದ ಕ್ರೈಸ್ತ ಭಾಂದವರು ಶ್ರದ್ಧಾಭಕ್ತಿಯಿಂದ ಪ್ರಾರ್ಥನಾ ಕೂಟದಲ್ಲಿ ಪಾಲ್ಗೊಂಡಿದ್ದರು.
ದೇವಾಲಯದ ಧರ್ಮಗುರುಗಳಾದ ವಂ.ಫಾ.ಅರುಳ್‍ಸೇಲ್ವಕುಮಾರ್, ಸಹಾಯಕ ಧರ್ಮಗುರುಗಳಾದ ನವೀನ್‍ಕುಮಾರ್ ಅವರು ದೇವಾಲಯದ ಕ್ರೈಸ್ತಭಾಂದವರ ಪಾದಗಳನ್ನು ತೊಳೆಯುವ ಮೂಲಕ ಆಚರಣೆಯನ್ನು ನೇರವೇರಿಸುವ ಮೂಲಕ ನೆನಪಿಸಿದರು. ನಂತರ ಮಧ್ಯರಾತ್ರಿಯವರೆಗೆ ವಿಶೇಷ ಪ್ರಾರ್ಥನೆ ದ್ಯಾನಗಳಲ್ಲಿ ಕ್ರೈಸ್ತಭಾಂದವರು ತೊಡಗಿಸಿಕೊಂಡಿದ್ದರು.
ಶುಭಶುಕ್ರವಾರದ ಅಂಗವಾಗಿ ಧೇವಾಲಯದಲ್ಲಿ ಕ್ರೈಸ್ತಾ ಭಾಂದವರು ಸಂತಮೇರಿ ಶಾಲಾ ಸಭಾಂಗಣದಲ್ಲಿ ವಿಶೇಷ ಪ್ರಾರ್ಥನೆ ಮಾಡುವ ಪ್ರಾರ್ಥನಕೂಟದಲ್ಲಿ ಪ್ರಸುತ್ತ ಪಡಿಸಲಾಗಿದ್ದು, ವಿಶೇಷ ಪ್ರಾರ್ಥನೆಯಲ್ಲಿ ಶೃದ್ಧಾ ಭಕ್ತಿಯಿಂದ ತೊಡಗಿಸಿಕೊಂಡರು.
ದೇವಾಲಯದಿಂದ ಆರಂಭಗೊಂಡ ಶಿಲುಬೆಯಾದಿಯಲ್ಲಿ ಸಂತ ಅಂತೋಣಿ ಶಾಲಾವರಣದಿಂದ ಆರಂಭಗೊಂಡು ಸಂತಮೇರಿ ಕ್ರಿಸ್ತ ಶಿಲುಬೆಯಾತನೆಯನ್ನು ಸ್ಮರಿಸುತ್ತಾ ಪ್ರಾರ್ಥನೆ ಹಾಗೂ ಆರಾಧನೆಯಲ್ಲಿ ನೂರಾರು ಸಂಖ್ಯೆಯಲ್ಲಿ ಆಗಮಿಸಿದ್ದ ಭಕ್ತಾಧಿಗಳು ತೊಂಡಗಿಸಿಕೊಂಡರು.
Breaking News
- *ಜಯ ಹೇ ಕರ್ನಾಟಕ ಮಾತೆ ಗೀತೆಗೆ 100 ವರ್ಷ : ಕೊಡಗಿನಲ್ಲಿ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳು*
- *ಕೊಡವ ನ್ಯಾಷನಲ್ ಡೇ ಹಿನ್ನೆಲೆ : ದೇವಟ್ ಪರಂಬುವಿನಲ್ಲಿ ಸಿಎನ್ಸಿ ಪ್ರಾರ್ಥನೆ*
- *ವೀರ ಸೇನಾನಿಗಳಿಗೆ ಅಗೌರವ : ಮಡಿಕೇರಿ ತಾಲ್ಲೂಕು ಒಕ್ಕಲಿಗರ ಸಂಘ ಖಂಡನೆ*
- *ಕೊಡವ ಮಕ್ಕಡ ಕೂಟದಿಂದ ದಾಖಲೆಯ 100ನೇ ಪುಸ್ತಕ “100ನೇ ಮೊಟ್ಟ್” ಬಿಡುಗಡೆ : ಭಾಷೆ, ಜಾತಿಯನ್ನು ಮೀರಿದ ಜ್ಞಾನ ಭಂಡಾರವೇ ಸಾಹಿತ್ಯ : ಬಾಚರಣಿಯಂಡ ಅಪ್ಪಣ್ಣ*
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*