ಮಡಿಕೆರಿ ಮಾ.30 NEWS DESK : ಗುಂಡೇಟಿಗೆ ವ್ಯಕ್ತಿಯೊಬ್ಬರು ಬಲಿಯಾಗಿ ಯುವಕನೊಬ್ಬ ಗಂಭೀರವಾಗಿ ಗಾಯಗೊಂಡಿರುವ ಘಟನೆ ಪೊನ್ನಂಪೇಟೆ ತಾಲ್ಲೂಕಿನ ಬೇಗೂರು ಗ್ರಾಮದಲ್ಲಿ ನಡೆದಿದೆ.
ಅರುವತ್ತೋಕ್ಲು ಗ್ರಾ.ಪಂ ಮಾಜಿ ಅಧ್ಯಕ್ಷ ಮಲ್ಲಂಡ ಪ್ರಕಾಶ್ (57) ಗುಂಡೇಟಿಗೆ ಬಲಿಯಾದ ದುರ್ದೈವಿಯಾಗಿದ್ದಾರೆ. ಇವರ ಪುತ್ರ ಧ್ಯಾನ್ ಗೂ ಗುಂಡೇಟು ತಗುಲಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ಪ್ರಕಾಶ್ ಅವರ ಸಹೋದರ ಸುಬ್ರಮಣಿ ಎಂಬುವವರು ಬೇಗೂರು ಗ್ರಾಮದ ತೋಟದಲ್ಲಿ ಗುಂಡು ಹಾರಿಸಿದ್ದಾರೆ ಎಂದು ಆರೋಪಿಸಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.










