ಕುಶಾಲನಗರ ಮಾ.30 : ಕುಶಾಲನಗರ ಟೈಕೂನ್ ಸ್ಪೋರ್ಟ್ಸ್ ಕ್ಲಬ್ ಆಶ್ರಯದಲ್ಲಿ ಉಚಿತ ಹಾಕಿ ತರಬೇತಿ ಶಿಬಿರ ಏ.7 ರಿಂದ ಆರಂಭಗೊಳ್ಳಲಿದೆ ಎಂದು ಕ್ಲಬ್ ಕಾರ್ಯದರ್ಶಿ ಬಿ.ಟಿ.ಪೂರ್ಣೇಶ್ ತಿಳಿಸಿದ್ದಾರೆ.
ಕುಶಾಲನಗರ ಪತ್ರಿಕಾ ಭವನದಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದು, ಕಳೆದ ಹತ್ತು ವರ್ಷಗಳಿಂದ ಶಿಬಿರ ನಡೆಯುತ್ತಿದ್ದು, ಈ ಮೂಲಕ ತರಬೇತು ಪಡೆದ ವಿದ್ಯಾರ್ಥಿಗಳು ಕ್ರೀಡಾ ಶಾಲೆಗಳಿಗೆ ನೇಮಕಗೊಳ್ಳುತ್ತಿದ್ದಾರೆ. ಶಿಬಿರದಲ್ಲಿ ಹಾಕಿ, ಅಥ್ಲೆಟಿಕ್ಸ್ ಮತ್ತು ಈಜು ಬಗ್ಗೆ ತರಬೇತಿ ನೀಡಲಾಗುತ್ತದೆ. ನುರಿತ ತರಬೇತುದಾರರ ಮೂಲಕ ಹದಿನೈದು ದಿನಗಳ ಕಾಲ ಶಿಬಿರ ನಡೆಯಲಿದೆ ಎಂದು ತಿಳಿಸಿದ್ದಾರೆ.
ಎಂಟು ವರ್ಷದಿಂದ ಮೇಲ್ಪಟ್ಟವರು ಈ ಶಿಬಿರದಲ್ಲಿ ಪಾಲ್ಗೊಳ್ಳಬಹುದು. ಕುಶಾಲನಗರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮೈದಾನದಲ್ಲಿ ಶಿಬಿರ ನಡೆಯಲಿದೆ. ಬೆಳಗ್ಗೆ 6:30 ರಿಂದ 8 ಗಂಟೆ ತನಕ ಹಾಕಿ ನಂತರ ಅಥ್ಲೆಟಿಕ್ಸ್ ತರಬೇತಿ ನೀಡಲಾಗುವುದು.
ಈಜು ತರಬೇತಿಗೆ ಮಾತ್ರ ಖಾಸಗಿ ಈಜುಕೊಳ ಸೌಲಭ್ಯ ಹೊಂದಬೇಕಾದ ಕಾರಣ ಶಿಬಿರಾರ್ಥಿಗಳಿಗೆ ಕನಿಷ್ಠ ಶುಲ್ಕ ವಿಧಿಸಲಾಗುತ್ತದೆ ಎಂದರು.
ಕ್ರೀಡೆ ಮೂಲಕ ಮಕ್ಕಳ ದೈಹಿಕ ಮಾನಸಿಕ ಬೆಳವಣಿಗೆ ವೃದ್ಧಿಪಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಬಿ ಟಿ ಪೂರ್ಣೇಶ್,, ಚಂದ್ರಶೇಖರ ರೆಡ್ಡಿ, ತಾತ್ವಿಕ್ ಶೆಟ್ಟಿ, ಶ್ರೇಯಸ್ ಶೆಟ್ಟಿ, ಅರುಣ್ ,ಮಹೇಶ್, ನಂದ, ದಿನೇಶ್, ಸೌಮ್ಯ, ಚಂದ್ರಶೇಖರ್, ಕಿಶನ್ ಗೌಡ ಮತ್ತಿತರರು ತರಬೇತು ನೀಡಲಿದ್ದಾರೆ ಎಂದರು.
ಸರಕಾರಿ ಶಾಲೆಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳ ಬಗ್ಗೆ ತಮ್ಮ ಸಂಸ್ಥೆ ಹೆಚ್ಚಿನ ಗಮನ ಹರಿಸಲಿದ್ದು ಶಿಬಿರದಲ್ಲಿ ಪಾಲ್ಗೊಳ್ಳುವಂತೆ ಪೂರ್ಣೇಶ್ ಮನವಿ ಮಾಡಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 9449831426 ಅಥವಾ 9448647608 ಸಂಪರ್ಕಿಸುವಂತೆ ಕೋರಿದ್ದಾರೆ.
ಗೋಷ್ಠಿಯಲ್ಲಿ ಖಜಾಂಚಿ ಪ್ರಕಾಶ್ ಪಳಂಗಪ್ಪ, ಸಹ ಕಾರ್ಯದರ್ಶಿ ಚಂದ್ರಶೇಖರ್, ಸಂಸ್ಥೆಯ ನಿರ್ದೇಶಕರಾದ ಅರುಣ್, ಮಹೇಶ್ ಇದ್ದರು.
Breaking News
- *ಕೊಡವ ಮಕ್ಕಡ ಕೂಟದಿಂದ ದಾಖಲೆಯ 100ನೇ ಪುಸ್ತಕ “100ನೇ ಮೊಟ್ಟ್” ಬಿಡುಗಡೆ : ಭಾಷೆ, ಜಾತಿಯನ್ನು ಮೀರಿದ ಜ್ಞಾನ ಭಂಡಾರವೇ ಸಾಹಿತ್ಯ : ಬಾಚರಣಿಯಂಡ ಅಪ್ಪಣ್ಣ*
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*
- *ಕೊಡಗು ಕೃಷಿ ವಿಜ್ಞಾನ ವೇದಿಕೆಯ ಬೆಳ್ಳಿ ಮಹೋತ್ಸವ : ನ.26 ರಂದು ರೈತ ಮೇಳ*
- *ಡಿ.1 ರಂದು ಗಾಳಿಬೀಡುವಿನಲ್ಲಿ ಬಾಣೆ ಹಬ್ಬ*
- *ನ.26 ರಂದು ಮಡಿಕೇರಿಯಲ್ಲಿ ಜಿಕೀರ್, ಜಾರಿ ಮತ್ತು ನಾತೆ-ರಸುಲ್” ಗಾಯನ*