ಮಡಿಕೇರಿ ಮಾ.30 NEWS DESK : ಲೋಕಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆ ಮತದಾರರಲ್ಲಿ ಮತದಾನದ ಮಹತ್ವ ಕುರಿತು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಜಿಲ್ಲೆಯಾದ್ಯಂತ ಹಲವು ಕಾರ್ಯಕ್ರಮಗಳು ನಡೆಯುತ್ತಿವೆ.
ಆ ನಿಟ್ಟಿನಲ್ಲಿ ಈಗಾಗಲೇ ರಂಗೋಲಿ ಸ್ಪರ್ಧೆ ಆರಂಭವಾಗಿದ್ದು, ಮಡಿಕೇರಿ ಮತ್ತು ಸೋಮವಾರಪೇಟೆ ತಾಲ್ಲೂಕು ವ್ಯಾಪ್ತಿಯಲ್ಲಿ ಪೂರ್ಣಗೊಂಡಿದೆ. ಹಲವು ಯುವಜನರು ರಂಗೋಲಿ ಸ್ಪರ್ಧೆಯಲ್ಲಿ ಪಾಲ್ಗೊಂಡು ಮತದಾನದ ಮಹತ್ವ ಕುರಿತು ಜಾಗೃತಿ ಮೂಡಿಸಿದ್ದಾರೆ. ರಂಗೋಲಿ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ಮತ್ತು ಪ್ರಶಸ್ತಿ ಪತ್ರ ನೀಡಲಾಗಿದೆ. ಸೋಮವಾರಪೇಟೆ ಪಟ್ಟಣ ಹಾಗೂ ತಾಲ್ಲೂಕಿನಾದ್ಯಂತ ರಂಗೋಲಿ ಸ್ಪರ್ಧೆ ನಡೆದಿದೆ.
ಇದೇ ಏ.26 ರಂದು ನಡೆಯುವ ಮತದಾನದಂದು 18 ವರ್ಷ ಪೂರ್ಣಗೊಂಡವರೆಲ್ಲರೂ ಮತಹಕ್ಕು ಚಲಾಯಿಸಬೇಕು. ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇದೆಯೇ ಎಂಬುದನ್ನು ಖಾತರಿಪಡಿಸಿಕೊಳ್ಳಬೇಕು. ಮನೆಯಿಂದ ಮತಗಟ್ಟೆಗೆ ಬನ್ನಿ, ತಮ್ಮ ಹಕ್ಕು ಚಲಾಯಿಸಿ, ತಪ್ಪದೇ ಮತದಾನ ಮಾಡಿ ಎಂಬ ಘೋಷ ವಾಕ್ಯಗಳು ರಂಗೋಲಿ ಸ್ಪರ್ಧೆಯಲ್ಲಿ ಕಂಡುಬಂದವು.
ಮಾ.31 ರಂದು ಕಾರು ರ್ಯಾಲಿ: ಕೊಡಗು ಜಿಲ್ಲಾ ಸ್ವೀಪ್ ಸಮಿತಿ ಹಾಗೂ ರೋಟರಿಯನ್ ಕೆ.ವಿಶ್ವನಾಥ ಶೆಣೈ ಅವರ ಸಂಯುಕ್ತಾಶ್ರಯದಲ್ಲಿ ಮತದಾನದ ಮಹತ್ವ ಕುರಿತು ಜಾಗೃತಿ ಅಭಿಯಾನವು ಮಾ.31 ರಂದು ಬೆಳಗ್ಗೆ 7 ಗಂಟೆಗೆ ನಗರದ ರಾಜಾಸೀಟು ಮುಂಭಾಗದಲ್ಲಿ ಕಾರು ರ್ಯಾಲಿ ಮತ್ತು ಬೀದಿನಾಟಕ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ದೊರೆಯಲಿದೆ.
ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ವೆಂಕಟ್ ರಾಜಾ, ಜಿ.ಪಂ.ಸಿಇಒ ಹಾಗೂ ಸ್ವೀಪ್ ಸಮಿತಿ ಅಧ್ಯಕ್ಷರಾದ ವರ್ಣಿತ್ ನೇಗಿ, ವಿವಿಧ ಇಲಾಖೆ ಅಧಿಕಾರಿಗಳು ಇತರರು ಪಾಲ್ಗೊಳ್ಳಲಿದ್ದಾರೆ ಎಂದು ಸ್ವೀಪ್ ಸಮಿತಿ ನೋಡಲ್ ಅಧಿಕಾರಿ ಶೇಖರ್ ತಿಳಿಸಿದ್ದಾರೆ.
Breaking News
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*
- *ಕೊಡಗು ಕೃಷಿ ವಿಜ್ಞಾನ ವೇದಿಕೆಯ ಬೆಳ್ಳಿ ಮಹೋತ್ಸವ : ನ.26 ರಂದು ರೈತ ಮೇಳ*
- *ಡಿ.1 ರಂದು ಗಾಳಿಬೀಡುವಿನಲ್ಲಿ ಬಾಣೆ ಹಬ್ಬ*
- *ನ.26 ರಂದು ಮಡಿಕೇರಿಯಲ್ಲಿ ಜಿಕೀರ್, ಜಾರಿ ಮತ್ತು ನಾತೆ-ರಸುಲ್” ಗಾಯನ*
- *ವಿಶ್ವಾಸ್ ವೆಂಕಟ್ ಗೆ ಟೇಬಲ್ ಟೆನ್ನಿಸ್ ನಲ್ಲಿ ರನ್ನರ್ ಪ್ರಶಸ್ತಿ*