ಮಡಿಕೇರಿ ಮಾ.30 NEWS DESK : ನಾಪೋಕ್ಲುವಿನ ಕೆಪಿಎಸ್ ಶಾಲೆಯ ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿರುವ 24ನೇ ವರ್ಷದ ಕೊಡವ ಕೌಟುಂಬಿಕ ಕುಂಡ್ಯೋಳಂಡ ಹಾಕಿ ಹಬ್ಬದಲ್ಲಿ ಜಿಲ್ಲಾಧಿಕಾರಿ ವೆಂಕಟರಾಜ ಅವರು ಸ್ಟಿಕ್ ಹಿಡಿದು ಆಡುವ ಮೂಲಕ ಕ್ರೀಡಾಸ್ಫೂರ್ತಿ ಮೆರೆದರು.
ಮೂಲತಃ ರಾಜಸ್ಥಾನ ರಾಜ್ಯದವರಾದ ಕೊಡಗು ಜಿಲ್ಲಾಧಿಕಾರಿ ವೆಂಕಟರಾಜ ಅವರು, ಕುಂಡ್ಯೋಳಂಡ ಹಾಕಿ ಪಂದ್ಯಾಟದ ಪ್ರದರ್ಶನ ಪಂದ್ಯದಲ್ಲಿ ‘ಕೂರ್ಗ್ ಇಲವೆನ್’ ತಂಡವನ್ನು ಪ್ರತಿನಿಧಿಸಿ ‘ಫಾರ್ವಡ್’ ಆಟಗಾರರಾಗಿ ತಮ್ಮ ಕ್ರೀಡಾ ಸ್ಪೂರ್ತಿ ಪ್ರದರ್ಶಿಸಿದರು. ಕುಂಡ್ಯೋಳಂಡ ಹಾಕಿ ಪಂದ್ಯಾವಳಿಯ ಪ್ರದರ್ಶನ ಪಂದ್ಯದಲ್ಲಿ ಮೊದಲಾರ್ಧದವರೆಗೂ ಮೈದಾನದಲ್ಲಿ ಉಳಿದಿದ್ದ ಜಿಲ್ಲಾಧಿಕಾರಿ ವೆಂಕಟರಾಜ ಅವರು 3 ಬಾರಿ ಗೋಲ್ ಬಾರಿಸುವ ಪ್ರಯತ್ನವನ್ನೂ ನಡೆಸುವ ಮೂಲಕ ಕ್ರೀಡಾ ಸಾಮರ್ಥ್ಯ ತೋರಿದರು. ಜಿಲ್ಲಾಧಿಕಾರಿಗಳೇ ಖುದ್ದಾಗಿ ಸ್ಟಿಕ್ ಹಿಡಿದು ಮೈದಾನಕ್ಕೆ ಇಳಿದದ್ದು, ವೀಕ್ಷಕರ ಮೆಚ್ಚುಗೆಗೆ ಪಾತ್ರವಾಯಿತು.
ಕಳೆದ 24 ವರ್ಷಗಳಿಂದ ಕೊಡಗಿನ ವಿವಿಧ ಕಡೆಗಳಲ್ಲಿ ಕೊಡವ ಕುಟುಂಬಗಳ ನಡುವೆ ಕೌಟುಂಬಿಕ ಹಾಕಿ ಪಂದ್ಯಾವಳಿಗಳು ನಡೆಯುತ್ತಿದೆ. ಪ್ರತಿ ವರ್ಷವೂ ಒಂದೊಂದು ಕುಟುಂಬಗಳು ಪಂದ್ಯಾವಳಿಗಳನ್ನೂ ಆಯೋಜಿಸುತ್ತವೆ. ಆದರೆ ಕೊಡಗಿನ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಜಿಲ್ಲಾಧಿಕಾರಿಗಳು ಕ್ರೀಡಾ ಸಮವಸ್ತ್ರ ತೊಟ್ಟು ಮೈದಾನಕ್ಕೆ ಇಳಿದು ಆಟವಾಡುವ ಮೂಲಕ ಹೊಸ ದಾಖಲೆಯನ್ನು ಸೃಷ್ಟಿಸಿದರು.
ಭಾರತೀಯ ಆಡಳಿತ ಸೇವೆಗೆ(ಐಎಎಸ್) ಸೇರ್ಪಡೆಯಾಗುವ ಮುನ್ನವೇ 17ರ ವಯೋಮಿತಿಯ ಒಳಗಿನ ಹಾಕಿ ಕ್ರೀಡೆಯಲ್ಲಿ ರಾಜಸ್ಥಾನ ತಂಡವನ್ನು ಪ್ರತಿನಿಧಿಸಿದ್ದ ಜಿಲ್ಲಾಧಿಕಾರಿ ವೆಂಕಟರಾಜ್ ಅವರು 19ರ ವಯೋಮಾನದ ಹಾಕಿ ಕ್ರೀಡಾ ಕೂಟದಲ್ಲಿ ದೇಶವನ್ನು ಪ್ರತಿನಿಧಿಸಿದ್ದರು.
Breaking News
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*
- *ಕೊಡಗು ಕೃಷಿ ವಿಜ್ಞಾನ ವೇದಿಕೆಯ ಬೆಳ್ಳಿ ಮಹೋತ್ಸವ : ನ.26 ರಂದು ರೈತ ಮೇಳ*
- *ಡಿ.1 ರಂದು ಗಾಳಿಬೀಡುವಿನಲ್ಲಿ ಬಾಣೆ ಹಬ್ಬ*
- *ನ.26 ರಂದು ಮಡಿಕೇರಿಯಲ್ಲಿ ಜಿಕೀರ್, ಜಾರಿ ಮತ್ತು ನಾತೆ-ರಸುಲ್” ಗಾಯನ*
- *ವಿಶ್ವಾಸ್ ವೆಂಕಟ್ ಗೆ ಟೇಬಲ್ ಟೆನ್ನಿಸ್ ನಲ್ಲಿ ರನ್ನರ್ ಪ್ರಶಸ್ತಿ*