ಮಡಿಕೇರಿ ಮಾ.31 NEWS DESK : ಕಾಡಾನೆ ದಾಳಿಯಿಂದ ವ್ಯಕ್ತಿಯೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ವಿರಾಜಪೇಟೆ ಹೊರವಲಯದ ಅರಮೇರಿ ಗ್ರಾಮದಲ್ಲಿ ನಡೆದಿದೆ.
ಸ್ಥಳೀಯ ನಿವಾಸಿ ನಟೇಶ್ ಕಾಳಪ್ಪ (50) ಎಂಬುವವರೇ ಕಾಡಾನೆ ದಾಳಿಯಿಂದ ತೀವ್ರವಾಗಿ ಗಾಯಗೊಂಡವರಾಗಿದ್ದು, ಮಡಿಕೇರಿಯ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಾಡಾನೆ ಹಾವಳಿ ಕುರಿತು ಗ್ರಾಮಸ್ಥರು ಆತಂಕ ವ್ಯಕ್ತಪಡಿಸಿದ್ದು, ಸೂಕ್ತ ಕ್ರಮ ಕೈಗೊಳ್ಳುವಂತೆ ಅರಣ್ಯ ಇಲಾಖೆಯನ್ನು ಒತ್ತಾಯಿಸಿದ್ದಾರೆ. ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.










