ನವದೆಹಲಿ ಮಾ.31 NEWS DESK : ದೇಶದ ಅತ್ಯುನ್ನತ ಗೌರವ ʼಭಾರತ ರತ್ನʼ ವನ್ನು ಬಿಜೆಪಿ ಪಕ್ಷದ ಹಿರಿಯ ನಾಯಕರು, ಮಾಜಿ ಉಪಪ್ರಧಾನಿಗಳಾದ ಎಲ್.ಕೆ.ಅಡ್ವಾಣಿ ಅವರಿಗೆ ಪ್ರದಾನ ಮಾಡಲಾಯಿತು. ಎಲ್. ಕೆ.ಅಡ್ವಾಣಿ ಅವರ ನಿವಾಸದಲ್ಲಿ ರಾಷ್ಟ್ರಪತಿಗಳಾದ ದ್ರೌಪದಿ ಮುರ್ಮು ಅವರು ಭಾರತ ರತ್ನ ನೀಡಿ ಗೌರವಿಸಿದರು. ಉಪರಾಷ್ಟ್ರಪತಿಗಳಾದ ಜಗದೀಪ್ ಧನ್ಕರ್, ಪ್ರಧಾನಿ ನರೇಂದ್ರ ಮೋದಿ ಹಾಗೂ ಪ್ರಮುಖರು ಈ ಸಂದರ್ಭ ಉಪಸ್ಥಿತರಿದ್ದರು.










