ಮಡಿಕೇರಿ ಮಾ.31 NEWS DESK : ಜಿಲ್ಲೆಯ ವಿವಿಧ ಸಮಸ್ಯೆಗಳ ವಿರುದ್ಧ ಜನಪರವಾಗಿ ನಿರಂತರ ಹೋರಾಟಗಳನ್ನು ನಡೆಸಿಕೊಂಡು ಬರುತ್ತಿದ್ದ ಕೊಡಗು ರಕ್ಷಣಾ ವೇದಿಕೆಯ ಅಧ್ಯಕ್ಷ, ವಕೀಲ ಅಚ್ಚಾಂಡಿರ ಪವನ್ ಪೆಮ್ಮಯ್ಯ ಅವರು ಇಂದು ತಮ್ಮ ಅಪಾರ ಬೆಂಬಲಿಗರೊಂದಿಗೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.
ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ಶಾಸಕ ಎ.ಎಸ್.ಪೊನ್ನಣ್ಣ ಅವರ ವಿರಾಜಪೇಟೆಯ ಗೃಹ ಕಚೇರಿ ಸಮೀಪ ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಪವನ್ ಪೆಮ್ಮಯ್ಯ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.
ಪೊನ್ನಣ್ಣ ಅವರು ಪವನ್ ಪೆಮ್ಮಯ್ಯ ಹಾಗೂ ಬೆಂಬಲಿಗರಿಗೆ ಕಾಂಗ್ರೆಸ್ ಧ್ವಜ ನೀಡಿ, ಶಲ್ಯ ತೊಡಿಸಿ ಪಕ್ಷಕ್ಕೆ ಬರ ಮಾಡಿಕೊಂಡರು.
ನAತರ ಮಾತನಾಡಿದ ಶಾಸಕರು, ಜನರೊಂದಿಗೆ ಸರಳವಾಗಿ ಬೆರೆಯಬಲ್ಲ, ಜನರ ಕೈಗೆ ಸುಲಭವಾಗಿ ಸಿಗಬಲ್ಲ, ಜನರ ಸಮಸ್ಯೆಯನ್ನು ಆಲಿಸುವ ಶಕ್ತಿ, ಕಾಳಜಿ ಹೊಂದಿರುವ ವ್ಯಕ್ತಿ ಜನ ಪ್ರತಿನಿಧಿಯಾಗುವುದು ಮತ್ತು ನಾಯಕನಾಗುವುದು ಉತ್ತಮ ಎಂದು ಅಭಿಪ್ರಾಯಪಟ್ಟರು.
ಯುವ ಸಮೂಹ ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚು ಶಕ್ತಿ ತುಂಬುತ್ತಿದ್ದು, ಲೋಕಸಭಾ ಚುನಾವಣೆಯಲ್ಲಿ ಮೈಸೂರು- ಕೊಡಗು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಅವರು ಗೆಲುವು ಸಾಧಿಸುವುದು ಖಚಿತವೆಂದು ವಿಶ್ವಾಸ ವ್ಯಕ್ತಪಡಿಸಿದರು.
ಕಾಂಗ್ರೆಸ್ ಗೆ ಸೇರ್ಪಡೆಯಾಗಿ ಮಾತನಾಡಿದ ಪವನ್ ಪೆಮ್ಮಯ್ಯ ಅವರು ಜಿಲ್ಲೆಯ ಇಬ್ಬರು ಕಾಂಗ್ರೆಸ್ ಶಾಸಕರ ಪಾರದರ್ಶಕ ಆಡಳಿತ ಮತ್ತು ಅಭಿವೃದ್ಧಿಯ ವೇಗವನ್ನು ಕಂಡು ಬೆರಗಾಗಿದ್ದೇನೆ, ಜಿಲ್ಲೆಯ ಜ್ವಲಂತ ಸಮಸ್ಯೆಗಳಿಗೆ ಇವರಿಬ್ಬರಿಂದ ಶೀಘ್ರ ಪರಿಹಾರ ದೊರೆಯುತ್ತದೆ ಎನ್ನುವ ವಿಶ್ವಾಸದೊಂದಿಗೆ ಕಾಂಗ್ರೆಸ್ ಪಕ್ಷಕ್ಕೆ ಸೇರಿದ್ದೇನೆ. ಕೊಡಗು ರಕ್ಷಣಾ ವೇದಿಕೆಯಲ್ಲಿದ್ದ ಎಲ್ಲಾ ನನ್ನ ಬೆಂಬಲಿಗರು ಪಕ್ಷವನ್ನು ಸೇರಿದ್ದಾರೆ. ಕಾಂಗ್ರೆಸ್ ಪಕ್ಷದ ಜನಪರ ಸಿದ್ಧಾಂತ ನಮಗೆ ಮೆಚ್ಚುಗೆಯಾಗಿದೆ. ಮುಂದಿನ ದಿನಗಳಲ್ಲಿ ಪಕ್ಷ ಸಂಘಟನೆಯಲ್ಲಿ ನಾವುಗಳು ಸಂಪೂರ್ಣವಾಗಿ ತೊಡಗಿಸಿಕೊಳ್ಳುತ್ತೇವೆ ಎಂದರು.
ಕಳೆದ 10 ವರ್ಷಗಳಿಂದ ಕೊರವೇ ಸಂಘಟನೆ ಮೂಲಕ ಜಿಲ್ಲೆಯ ಸಮಸ್ಯೆಗಳ ವಿರುದ್ಧ ಹೋರಾಟವನ್ನು ನಡೆಸಿಕೊಂಡು ಬಂದಿದ್ದೇವೆ. ಮುಂದೆ ಸರಕಾರ ಮತ್ತು ಇಬ್ಬರು ಶಾಸಕರ ಸಹಕಾರದೊಂದಿಗೆ ಸಮಸ್ಯೆಗಳಿಗೆ ಪರಿಹಾರ ಪಡೆಯುತ್ತೇವೆ, ಜನರ ನೋವಿಗೆ ಸ್ಪಂದಿಸುವ ಕಾರ್ಯವನ್ನು ಮುಂದುವರೆಸುತ್ತೇವೆ ಎಂದು ಪವನ್ ಪೆಮ್ಮಯ್ಯ ಹೇಳಿದರು.
ಕಾಂಗ್ರೆಸ್ ಜಿಲ್ಲಾಧ್ಯಕ್ಷ ಧರ್ಮಜ ಉತ್ತಪ್ಪ, ಮೈಸೂರು- ಕೊಡಗು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಗೌಡ, ವಿಧಾನ ಪರಿಷತ್ ಮಾಜಿ ಸದಸ್ಯರಾದ ವೀಣಾ ಅಚ್ಚಯ್ಯ, ಸಿ.ಎಸ್.ಅರುಣ್ ಮಾಚಯ್ಯ ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು.
Breaking News
- *ವೀರ ಸೇನಾನಿಗಳಿಗೆ ಅಗೌರವ : ಕಿಡಿಗೇಡಿಯನ್ನು ಬಂಧಿಸಲು ನಾಪೋಕ್ಲು ಕೊಡವ ಸಮಾಜ ಒತ್ತಾಯ*
- *ಇಂದಿರಾ ನಗರ : ನೂತನ ಕಾಂಕ್ರೀಟ್ ರಸ್ತೆ ಉದ್ಘಾಟಿಸಿದ ಶಾಸಕ ಡಾ.ಮಂತರ್ ಗೌಡ*
- *ವೀರ ಸೇನಾನಿಗಳಿಗೆ ಅಪಮಾನ : ವ್ಯಾಲಿಡ್ಯೂ ಕೊಡವ ಕಲ್ಚರಲ್ ಅಸೋಸಿಯೇಷನ್ ಖಂಡನೆ*
- *ವೀರ ಸೇನಾನಿಗಳಿಗೆ ಅಗೌರವ : ಜಿಲ್ಲಾ ಬಿಜೆಪಿಯಿಂದ ಎಸ್ಪಿಗೆ ದೂರು*
- *ಮಡಿಕೇರಿಯಲ್ಲಿ ವಕೀಲರ ಸಂಘದಿಂದ ಪ್ರತಿಭಟನೆ*
- *ಜಿಲ್ಲಾ ಮಟ್ಟದ ಯುವಜನೋತ್ಸವ : ಹೆಸರು ನೋಂದಾಯಿಸಿಕೊಳ್ಳಲು ನ.28 ಕೊನೆ ದಿನ*
- *ನ.26 ರಂದು ಸಿಎನ್ಸಿಯಿಂದ ಕೊಡವ ನ್ಯಾಷನಲ್ ಡೇ ಮತ್ತು ಸಂವಿಧಾನ ದಿನಾಚರಣೆ*
- *ನ.24 ರಂದು ಕೊಡಗು ಜಿಲ್ಲಾ ಕಿವುಡರ ಸಂಘದ ಸಭೆ*
- *ಕುಶಾಲನಗರದಲ್ಲಿ ಅಕ್ಷರ ಜ್ಯೋತಿ ಯಾತ್ರೆಗೆ ಸ್ವಾಗತ : ಉತ್ತಮ ಸಂಸ್ಕಾರ, ಸದ್ಗುಣ ಬೆಳೆಸಿಕೊಳ್ಳಲು ಬಸವಕುಮಾರ್ ಪಾಟೀಲ್ ಕರೆ*
- *ನ.29 ರಂದು ಮೂರ್ನಾಡುವಿನಲ್ಲಿ 69ನೇ ಕನ್ನಡ ರಾಜ್ಯೋತ್ಸವದ ಸಂಭ್ರಮ*