ಕುಶಾಲನಗರ ಮಾ.31 NEWS DESK : ಕೊಡಗು ಜಿಲ್ಲಾ ಬ್ಯೂಟಿಷಿಯನ್ ಅಸೋಸಿಯೇಷನ್ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ.
ಜಿಲ್ಲಾಧ್ಯಕ್ಷರಾಗಿ ಕುಶಾಲನಗರದ ಆರ್.ಲೋಕೇಶ್, ಮಡಿಕೇರಿ ತಾಲ್ಲೂಕು ಅಧ್ಯಕ್ಷರಾಗಿ ಪವಿತ್ರ ಹಾಗೂ ಕುಶಾಲನಗರ ತಾಲೂಕು ಅಧ್ಯಕ್ಷರಾಗಿ ನಾಗಮಣಿ ನೇಮಕಗೊಂಡರು.
ಲುಕ್ಸ್ ಬ್ಯೂಟಿ ಕೇರ್ ವತಿಯಿಂದ ಕುಶಾಲನಗರದಲ್ಲಿ ನಡೆದ ತರಬೇತಿ ಶಿಬಿರದಲ್ಲಿ ಸಂಘದ ಸ್ಥಾಪಕಾಧ್ಯಕ್ಷರಾದ ವನಿತಾ ಚಂದ್ರಮೋಹನ್ ಅವರ ಸಮ್ಮುಖದಲ್ಲಿ ಶಿಬಿರಾರ್ಥಿಗಳಿಗೆ ಪ್ರಮಾಣಪತ್ರ ವಿತರಿಸಲಾಯಿತು.










