ಸುಂಟಿಕೊಪ್ಪ ಮಾ.31 NEWS DESK : ಜಿಲ್ಲೆಯ ಕ್ರೈಸ್ತ ಬಾಂಧವರು ಈಸ್ಟರ್ ಹಬ್ಬವನ್ನು ಶ್ರದ್ಧಾಭಕ್ತಿಯಿಂದ ಆಚರಿಸಿದರು. ಸುಂಟಿಕೊಪ್ಪದ ಸಂತ ಅಂತೋಣಿ ದೇವಾಲಯದ ವತಿಯಿಂದ ಸಂತ ಮೇರಿ ಶಾಲಾ ಆವರಣದಲ್ಲಿ ವಿವಿಧ ಸಾಂಘ್ಯಗಳ ಮೂಲಕ ಬಲಿಪೂಜೆ ಹಾಗೂ ವಿಶೇಷ ಪ್ರಾರ್ಥನೆಯನ್ನು ಸಲ್ಲಿಸಿದರು. ಪರಸ್ಪರ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡ ಕ್ರೈಸ್ತರು ನಂತರ ಈಸ್ಟರ್ ಹಬ್ಬವನ್ನು ಸಡಗರ ಸಂಭ್ರಮದಿಂದ ಮನೆಗಳಲ್ಲಿ ಆಚರಿಸಿಕೊಂಡರು.
ಸಂತ ಅಂತೋಣಿ ದೇವಾಲಯದ ಧರ್ಮಗುರುಗಳಾದ ರೇ.ಪಾ.ಅರುಳ್ ಸೆಲ್ವಕುಮಾರ್ ಅವರು ಸಂದೇಶ ನೀಡಿ ಬೃಹತ್ ಮೇಣದ ಬತ್ತಿಯನ್ನು ಬೆಳಗಿದರು. ಯೇಸುವು ಸಮಾಧಿಯಿಂದ ಪುನರ್ ತ್ಥಾನಗೊಂಡಿರುವ ರೂಪಕ ದೃಶ್ಯದ ಅಂಗವಾಗಿ ಪ್ರಭು ಕ್ರಿಸ್ತರ ಪ್ರತಿಮೆಯನ್ನು ಪ್ರತಿಷ್ಠಾಪಿಸಿ ಬಲಿಪೂಜೆಯನ್ನು ಸಮರ್ಪಿಸಿದರು.
ಸಹಾಯಕ ಧರ್ಮಗುರುಗಳಾದ ರೇ.ಫಾ.ನವೀನ್‌ಕುಮಾರ್, ಸಂತ ಕ್ಲಾರ ಕನ್ಯಾಸ್ತ್ರೀ ಕಾನ್ವೆಂಟಿನ ಕನ್ಯಾಸ್ತ್ರೀಯರು ಗಾಯನ ವೃಂದದೊಂದಿಗೆ ನೂರಾರು ಸಂಖ್ಯೆಯಲ್ಲಿ ನೆರದಿದ್ದ ಭಕ್ತಾಧಿಗಳು ದೇವಾಲಯದಲ್ಲಿ ಪುನರ್‌ತ್ಥಾನದ ಆಡಂಬರ ಬಲಿಪೂಜೆ ಪ್ರಾರ್ಥನೆಯಲ್ಲಿ ತೊಡಗಿಸಿಕೊಂಡರು.
ಶಿಲುಬೆ ಏರಿದ ಯೇಸುಕ್ರಿಸ್ತರು 3ನೇ ದಿನ ಸಮಾಧಿಯಿಂದ ಪುನರುತ್ಥಾನಗೊಂಡಿರುವುದನ್ನು ಕ್ರಿಸ್ತರು “ಮರಣವನ್ನು ಜಯಿಸಿದ ಹಬ್ಬ” ಪಾಸ್ಕ ಕಾಲದ (ಈಸ್ಟರ್) ಹಬ್ಬವನ್ನಾಗಿ ಆಚರಿಸುವುದು ವಾಡಿಕೆ.
Breaking News
- *ಇಂದಿರಾ ನಗರ : ನೂತನ ಕಾಂಕ್ರೀಟ್ ರಸ್ತೆ ಉದ್ಘಾಟಿಸಿದ ಶಾಸಕ ಡಾ.ಮಂತರ್ ಗೌಡ*
- *ವೀರ ಸೇನಾನಿಗಳಿಗೆ ಅಪಮಾನ : ವ್ಯಾಲಿಡ್ಯೂ ಕೊಡವ ಕಲ್ಚರಲ್ ಅಸೋಸಿಯೇಷನ್ ಖಂಡನೆ*
- *ವೀರ ಸೇನಾನಿಗಳಿಗೆ ಅಗೌರವ : ಜಿಲ್ಲಾ ಬಿಜೆಪಿಯಿಂದ ಎಸ್ಪಿಗೆ ದೂರು*
- *ಮಡಿಕೇರಿಯಲ್ಲಿ ವಕೀಲರ ಸಂಘದಿಂದ ಪ್ರತಿಭಟನೆ*
- *ಜಿಲ್ಲಾ ಮಟ್ಟದ ಯುವಜನೋತ್ಸವ : ಹೆಸರು ನೋಂದಾಯಿಸಿಕೊಳ್ಳಲು ನ.28 ಕೊನೆ ದಿನ*
- *ನ.26 ರಂದು ಸಿಎನ್ಸಿಯಿಂದ ಕೊಡವ ನ್ಯಾಷನಲ್ ಡೇ ಮತ್ತು ಸಂವಿಧಾನ ದಿನಾಚರಣೆ*
- *ನ.24 ರಂದು ಕೊಡಗು ಜಿಲ್ಲಾ ಕಿವುಡರ ಸಂಘದ ಸಭೆ*
- *ಕುಶಾಲನಗರದಲ್ಲಿ ಅಕ್ಷರ ಜ್ಯೋತಿ ಯಾತ್ರೆಗೆ ಸ್ವಾಗತ : ಉತ್ತಮ ಸಂಸ್ಕಾರ, ಸದ್ಗುಣ ಬೆಳೆಸಿಕೊಳ್ಳಲು ಬಸವಕುಮಾರ್ ಪಾಟೀಲ್ ಕರೆ*
- *ನ.29 ರಂದು ಮೂರ್ನಾಡುವಿನಲ್ಲಿ 69ನೇ ಕನ್ನಡ ರಾಜ್ಯೋತ್ಸವದ ಸಂಭ್ರಮ*
- *ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಿಂದ ರಾಷ್ಟ್ರೀಯ ಅಪಸ್ಮಾರ (ಮೂರ್ಛೆರೋಗ) ದಿನಾಚರಣೆ*