ಮಡಿಕೇರಿ ಮಾ.31 NEWS DESK : ಜಿಲ್ಲಾಡಳಿತ ವತಿಯಿಂದ ಪದ್ಮಭೂಷಣ, ವೀರಸೇನಾನಿ ಜನರಲ್ ಕೆ.ಎಸ್.ತಿಮ್ಮಯ್ಯ ಅವರ 118 ನೇ ಜನ್ಮ ದಿನಾಚರಣೆಯು ನಗರದ ಜನರಲ್ ತಿಮ್ಮಯ್ಯ ಸ್ಮಾರಕ ಭವನ(ಸನ್ನಿಸೈಡ್)ದಲ್ಲಿ ಭಾನುವಾರ ನಡೆಯಿತು.
ನಗರದ ಜನರಲ್ ತಿಮ್ಮಯ್ಯ ಸ್ಮಾರಕ ಭವನದಲ್ಲಿ ಏರ್ಪಡಿಸಲಾಗಿದ್ದ ಸರಳ ಕಾರ್ಯಕ್ರಮದಲ್ಲಿ ಜನರಲ್ ತಿಮ್ಮಯ್ಯ ಅವರ ಭಾವಚಿತ್ರಕ್ಕೆ ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿ.ಪಂ.ಸಿಇಒ ವರ್ಣಿತ್ ನೇಗಿ, ಸುಬೇದಾರ್ ಗೌಡಂಡ ತಿಮ್ಮಯ್ಯ ಅವರು ಪುಷ್ಪಾರ್ಚನೆ ಮಾಡಿ, ಗೌರವ ನಮನ ಸಲ್ಲಿಸಿದರು.
ವಿದ್ಯಾರ್ಥಿನಿ ಶ್ರೀಷ ಮಾತನಾಡಿ ಭಾರತೀಯ ಸೇನಾ ಕ್ಷೇತ್ರಕ್ಕೆ ಜನರಲ್ ತಿಮ್ಮಯ್ಯ ಅವರ ಕೊಡುಗೆ ಅಪಾರ ಎಂದು ಹೇಳಿದರು. ರಾಷ್ಟ್ರದ ಮಹಾದಂಡ ನಾಯಕರಾಗಿ ಸೇನಾ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದಾರೆ ಎಂದು ತಿಳಿಸಿದರು. ಜನರಲ್ ತಿಮ್ಮಯ್ಯ ಅವರು ರಾಷ್ಟ್ರಕಂಡ ಮಹಾನ್ ವೀರ ಸೇನಾನಿಯಾಗಿದ್ದು, ಜನರಲ್ ತಿಮ್ಮಯ್ಯ ಅವರ ಸೇನಾ ಕ್ಷೇತ್ರದಲ್ಲಿನ ಅಪ್ರತಿಮ ಸಾಧನೆ, ಛಲ, ಸಾಮರ್ಥ್ಯ ಮತ್ತು ಪ್ರಬುದ್ಧತೆಯನ್ನು ಪ್ರತಿಯೊಬ್ಬರೂ ತಿಳಿದುಕೊಳ್ಳುವಂತಾಗಬೇಕು ಎಂದು ವಿವರಿಸಿದರು. ಜಿ.ಪಂ.ಸಿಇಒ ವರ್ಣಿತ್ ನೇಗಿ, ಪೊಲೀಸ್ ಇನ್ಸ್ಪೆಕ್ಟರ್ ಮಂಜುನಾಥ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಚಿನ್ನಸ್ವಾಮಿ, ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಅಭಿಮಾನಿ ಬಳಗದ ಮುನೀರ್ ಮಾಚರ್ ಮತ್ತಿತರರು ಇದ್ದರು.
Breaking News
- *ಕೊಡಗು : ಡಿ.1 ರಿಂದ ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ ಪ್ರಕ್ರಿಯೆ ಆರಂಭ : ಜಿಲ್ಲಾಧಿಕಾರಿ ವೆಂಕಟ್ ರಾಜಾ*
- *ಪಡಿತರ ಚೀಟಿ ಪರಿಷ್ಕರಣೆ : ಅರ್ಹ ಬಿಪಿಎಲ್ ಕಾರ್ಡ್ ರದ್ದುಗೊಳಿಸುವುದಿಲ್ಲ : ಸಚಿವ ಮುನಿಯಪ್ಪ*
- *ಕೊಡಗು ಬ್ಲಡ್ ಡೋನಸ್೯ ಸಂಸ್ಥೆಯ 7ನೇ ವಾಷಿ೯ಕೋತ್ಸವ : ಜೀವ ಉಳಿಸುವ ರಕ್ತದಾನಿಗಳೇ ನಿಜವಾದ ಹೀರೋಗಳು : ಅನಿಲ್ ಹೆಚ್.ಟಿ.*
- *ದಿವ್ಯಜ್ಯೋತಿ ಪತ್ತಿನ ಸಹಕಾರ ಸಂಘದ ಚುನಾವಣೆ : ಜಾನ್ಸನ್ ಪಿಂಟೋ ಸೇರಿ ಹಲವರು ಕಣದಲ್ಲಿ*
- *ಕಲ್ಲು ಬಾಯ್ಸ್ ಲೈಕ್ಸ್ ಫ್ಯಾಶನ್ ಫುಟ್ಬಾಲ್ ಕಪ್ : ನಿಯೋನ್ ಎಫ್.ಸಿ ಅಮ್ಮತ್ತಿ ಚಾಂಪಿಯನ್*
- *ಗ್ರಾ.ಪಂ ಉಪಚುನಾವಣೆ : ಕೊಡಗಿನ ವಿವಿಧೆಡೆ ಮದ್ಯ ಮಾರಾಟ ನಿಷೇಧ*
- *ನಂದಿನಿ ವಿವಿಧ ಶ್ರೇಣಿಯ ಹಾಲು ಬಿಡುಗಡೆ : ದೇಶದ ಹಾಲು ಉತ್ಪಾದನೆಯಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ : ಮುಖ್ಯಮಂತ್ರಿ ಸಿದ್ದರಾಮಯ್ಯ*
- *ಕಟ್ಟೆಹಾಡಿ ಅರಣ್ಯ ಹಕ್ಕು ಸಮಿತಿ ರಚನೆ : ಆದಿವಾಸಿಗಳನ್ನು ಒಕ್ಕಲೆಬ್ಬಿಸದಂತೆ ಆಗ್ರಹ*
- *ನ.29 ರಂದು ವಾಲ್ನೂರು-ತ್ಯಾಗತ್ತೂರು ಗ್ರಾಮ ಸಭೆ*
- *ಕೊಡಗು : ಗ್ರಾ.ಪಂ.ಉಪಚುನಾವಣೆ : ವಿವಿಧ ಸಂತೆ, ಜಾತ್ರೆಗಳ ನಿಷೇಧ*