ಮಡಿಕೇರಿ ಮಾ.31 NEWS DESK : ಕಳೆದ ಹತ್ತು ವರ್ಷಗಳಲ್ಲಿ ಬಿಜೆಪಿ ನೇತೃತ್ವದ ಕೇಂದ್ರ ಸರಕಾರ ವಿಶ್ವವೇ ಬೆಚ್ಚಿ ಬೀಳುವ ರೀತಿಯಲ್ಲಿ ಭ್ರಷ್ಟಾಚಾರ ನಡೆಸಿದ್ದು, ದೇಶವನ್ನು 25 ವರ್ಷಗಳಷ್ಟು ಹಿಂದಕ್ಕೆ ಕೊಂಡೊಯ್ಯಿದಿದೆ ಎಂದು ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ಆರೋಪಿಸಿದ್ದಾರೆ.
ವಿರಾಜಪೇಟೆ ಕೊಡವ ಸಮಾಜದಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದ ಅವರು ಸುಳ್ಳಿನ ರಾಜಕಾರಣ ಮಾಡುತ್ತಿರುವ ಬಿಜೆಪಿಯಿಂದ ದೇಶದಲ್ಲಿ ನಿರುದ್ಯೋಗ ಸಮಸ್ಯೆ ಉಲ್ಬಣಗೊಂಡಿದೆ ಮತ್ತು ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಟೀಕಿಸಿದರು.
ರಾಜ್ಯದ ಕಾಂಗ್ರೆಸ್ ಸರಕಾರ ಜನಪರ ಆಡಳಿತ ನಡೆಸುತ್ತಿದೆ. ಈ ಬಾರಿ ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯನ್ನಾಗಿ ಒಬ್ಬ ಸಾಮಾನ್ಯ ಕಾರ್ಯಕರ್ತ ಮತ್ತು ಪ್ರಾಮಾಣಿಕ ವ್ಯಕ್ತಿಯಾಗಿರುವ ಎಂ.ಲಕ್ಷ್ಮಣ್ ಗೌಡ ಅವರನ್ನು ಕಣಕ್ಕಿಳಿಸಲಾಗಿದೆ. ಇವರನ್ನು ಗೆಲ್ಲಿಸುವ ಮೂಲಕ ಅಭಿವೃದ್ಧಿಗೆ ಪಣತೊಡಿ ಎಂದು ಯತೀಂದ್ರ ಕರೆ ನೀಡಿದರು.
ಸಮಾಜ ಕಲ್ಯಾಣ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಮಾತನಾಡಿ ಕೊಡಗಿನ ಜನ ಸುಸಂಸ್ಕೃತರು, ಸಜ್ಜನರು, ವಿವೇಕವಂತರು. ಪ್ರಜಾಪ್ರಭುತ್ವಕ್ಕೆ ಗೌರವ ನೀಡುವ ಮತ್ತು ಸಂವಿಧಾನವನ್ನು ಪಾಲಿಸುವ ನಿಟ್ಟಿನಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂ.ಲಕ್ಷಣ್ ಅವರನ್ನು ಗೆಲ್ಲಿಸುವ ಮೂಲಕ ಶಾಸಕರಾದ ಎ.ಎಸ್.ಪೊನ್ನಣ್ಣ ಹಾಗೂ ಡಾ.ಮಂತರ್ ಗೌಡ ಅವರ ಕೈ ಬಲಪಡಿಸುವಂತೆ ಮನವಿ ಮಾಡಿದರು.
ಪಶುಸಂಗೋಪನಾ ಇಲಾಖೆ ಸಚಿವ ಕೆ.ವೆಂಕಟೇಶ್ ಮಾತನಾಡಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ ಅವರು ರಾಜ್ಯದಲ್ಲಿಯೇ ಪ್ರಭಾವಿ ವ್ಯಕ್ತಿಯಾಗಿದ್ದಾರೆ. ಅವರ ಮಾತನ್ನು ಮುಖ್ಯಮಂತ್ರಿಗಳು ಹಾಗೂ ಉಪ ಮುಖ್ಯಮಂತ್ರಿಗಳು ಕೇಳುವ ಮಟ್ಟಿಗೆ ವ್ಯಕ್ತಿತ್ವವನ್ನು ರೂಪಿಸಿಕೊಂಡಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷö್ಮಣ್ ಅವರನ್ನು ಗೆಲ್ಲಿಸುವ ಮೂಲಕ ಇಬ್ಬರು ಶಾಸಕರ ಕೈಯನ್ನು ಮತ್ತಷ್ಟು ಬಲ ಪಡಿಸಿ ಗೌರವ ಹೆಚ್ಚಿಸಿ ಎಂದರು.
ಅಭ್ಯರ್ಥಿ ಎಂ.ಲಕ್ಷಣ್ ಗೌಡ ಮಾತನಾಡಿ ಕೊಡಗಿನ ಜ್ವಲಂತ ಸಮಸ್ಯೆಗಳ ಬಗ್ಗೆ ನನಗೆ ಅರಿವಿದೆ, ಇಬ್ಬರು ಶಾಸಕರ ಸಲಹೆ, ಸೂಚನೆಗಳನ್ನು ಆಧರಿಸಿ ಅಭಿವೃದ್ಧಿ ಕಾರ್ಯಗಳಿಗೆ ಒತ್ತು ನೀಡುತ್ತೇನೆ. ಕೊಡವ ಭಾಷೆಯನ್ನು 8ನೇ ಶೆಡ್ಯೂಲ್ ಗೆ ಸೇರಿಸಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳುತ್ತೇನೆ ಎಂದು ಭರವಸೆ ನೀಡಿದರು.
ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ಮಾತನಾಡಿ ಕೊಡಗು- ಮೈಸೂರು ಕ್ಷೇತ್ರದಲ್ಲಿ ನಡೆಯುತ್ತಿರುವುದು ಕೇವಲ ಲೋಕಸಭಾ ಚುನಾವಣೆಲ್ಲ. ಬದಲಿಗೆ ಸತ್ಯ ಮತ್ತು ಸುಳ್ಳಿನ ನಡುವಿನ ಕದನವಾಗಿದೆ ಎಂದರು.
ಕಳೆದ ಹತ್ತು ತಿಂಗಳಿನಲ್ಲಿ ಕ್ಷೇತ್ರದಲ್ಲಿ 250 ಕೋಟಿ ರೂ.ಗಳ ಅಭಿವೃದ್ಧಿ ಕಾರ್ಯ ನಡೆದಿದೆ. ಇಂತಹ ಅಭಿವೃದ್ಧಿ ಕಾರ್ಯಗಳು ನಿರಂತರವಾಗಿ ನಡೆಯಬೇಕು ಎಂದರೆ ಎಂ.ಲಕ್ಷಣ್ ಅವರನ್ನು ಅತ್ಯಧಿಕ ಮತಗಳಿಂದ ಆಯ್ಕೆ ಮಾಡಿ ಲೋಕಸಭೆಗೆ ಕಳುಹಿಸಿ ಎಂದು ಮನವಿ ಮಾಡಿದರು.
ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ ಅವರು ಸಮಾವೇಶದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಡಾ.ಪುಷ್ಪಾ ಅಮರನಾಥ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಂಜಿ ಪೂಣಚ್ಚ, ವಿಧಾನ ಪರಿಷತ್ ಮಾಜಿ ಸದಸ್ಯರುಗಳಾದ ವೀಣಾ ಅಚ್ಚಯ್ಯ, ಅರುಣ್ ಮಾಚಯ್ಯ, ಪಕ್ಷದ ಮುಖಂಡ ಡಾ.ಶುಶ್ರುತ್ ಗೌಡ ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು.
ವಿವಿಧ ಸಂಘಟನೆಗಳ ಮುಖಂಡರು ಇದೇ ಸಂದರ್ಭ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.
Breaking News
- *ಕೊಡಗು : ಡಿ.1 ರಿಂದ ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ ಪ್ರಕ್ರಿಯೆ ಆರಂಭ : ಜಿಲ್ಲಾಧಿಕಾರಿ ವೆಂಕಟ್ ರಾಜಾ*
- *ಪಡಿತರ ಚೀಟಿ ಪರಿಷ್ಕರಣೆ : ಅರ್ಹ ಬಿಪಿಎಲ್ ಕಾರ್ಡ್ ರದ್ದುಗೊಳಿಸುವುದಿಲ್ಲ : ಸಚಿವ ಮುನಿಯಪ್ಪ*
- *ಕೊಡಗು ಬ್ಲಡ್ ಡೋನಸ್೯ ಸಂಸ್ಥೆಯ 7ನೇ ವಾಷಿ೯ಕೋತ್ಸವ : ಜೀವ ಉಳಿಸುವ ರಕ್ತದಾನಿಗಳೇ ನಿಜವಾದ ಹೀರೋಗಳು : ಅನಿಲ್ ಹೆಚ್.ಟಿ.*
- *ದಿವ್ಯಜ್ಯೋತಿ ಪತ್ತಿನ ಸಹಕಾರ ಸಂಘದ ಚುನಾವಣೆ : ಜಾನ್ಸನ್ ಪಿಂಟೋ ಸೇರಿ ಹಲವರು ಕಣದಲ್ಲಿ*
- *ಕಲ್ಲು ಬಾಯ್ಸ್ ಲೈಕ್ಸ್ ಫ್ಯಾಶನ್ ಫುಟ್ಬಾಲ್ ಕಪ್ : ನಿಯೋನ್ ಎಫ್.ಸಿ ಅಮ್ಮತ್ತಿ ಚಾಂಪಿಯನ್*
- *ಗ್ರಾ.ಪಂ ಉಪಚುನಾವಣೆ : ಕೊಡಗಿನ ವಿವಿಧೆಡೆ ಮದ್ಯ ಮಾರಾಟ ನಿಷೇಧ*
- *ನಂದಿನಿ ವಿವಿಧ ಶ್ರೇಣಿಯ ಹಾಲು ಬಿಡುಗಡೆ : ದೇಶದ ಹಾಲು ಉತ್ಪಾದನೆಯಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ : ಮುಖ್ಯಮಂತ್ರಿ ಸಿದ್ದರಾಮಯ್ಯ*
- *ಕಟ್ಟೆಹಾಡಿ ಅರಣ್ಯ ಹಕ್ಕು ಸಮಿತಿ ರಚನೆ : ಆದಿವಾಸಿಗಳನ್ನು ಒಕ್ಕಲೆಬ್ಬಿಸದಂತೆ ಆಗ್ರಹ*
- *ನ.29 ರಂದು ವಾಲ್ನೂರು-ತ್ಯಾಗತ್ತೂರು ಗ್ರಾಮ ಸಭೆ*
- *ಕೊಡಗು : ಗ್ರಾ.ಪಂ.ಉಪಚುನಾವಣೆ : ವಿವಿಧ ಸಂತೆ, ಜಾತ್ರೆಗಳ ನಿಷೇಧ*