ಮಡಿಕೇರಿ ಮಾ.31 NEWS DESK : ನಾಪೋಕ್ಲು ಕೊಡವ ಸಮಾಜದಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಸಮಾವೇಶದಲ್ಲಿ ಮೇಕೇರಿ ಗ್ರಾಮ ಪಂಚಾಯತ್ ಬಿಜೆಪಿ ಬೆಂಬಲಿತ ಸದಸ್ಯ ಹನೀಫ್ ಹಾಗೂ ಬೆಂಬಲಿಗರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು. ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ಶಾಸಕರಾದ ಎ.ಸ್.ಪೊನ್ನಣ್ಣ ಅವರು ಪಕ್ಷದ ಬಾವುಟ ನೀಡಿ ಪಕ್ಷಕ್ಕೆ ಸ್ವಾಗತಿಸಿದರು. ಸಚಿವರಾದ ಡಾ.H.C.ಮಹದೇವಪ್ಪ, ಕೆ.ವೆಂಕಟೇಶ, ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ, ಅಭ್ಯರ್ಥಿ ಎಂ.ಲಕ್ಷ್ಮಣ ಗೌಡ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ ಮತ್ತಿತರರು ಉಪಸ್ಥಿತರಿದ್ದರು.









