ನಾಪೋಕ್ಲು ಏ.1 NEWS DESK : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಇಲಾಖೆ ಹಾಗೂ ಜಿಲ್ಲಾ ಏಡ್ಸ್ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಘಟಕದ ಸಹಯೋಗದೊಂದಿಗೆ ಮೂರ್ನಾಡು ಪ್ರಥಮ ದರ್ಜೆ ಕಾಲೇಜಿನಲ್ಲಿ ಏಡ್ಸ್ ಜಾಗೃತಿ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಡಾ. ರೇಖಾ ಚಿಣ್ಣಪ್ಪ ಮಾತನಾಡಿ, ಯುವಜನರು ಈ ರೋಗಗಳಿಗೆ ಹೆಚ್ಚಾಗಿ ಬಲಿಯಾಗುತ್ತಿದ್ದಾರೆ. ಶಾಲಾ-ಕಾಲೇಜು ಹಂತದಲ್ಲಿ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಿದರೆ ಹೆಚ್ಚು ಸೂಕ್ತ ಎಂದು ಅಭಿಪ್ರಾಯಪಟ್ಟರು.
ಕಾರ್ಯಕ್ರಮದಲ್ಲಿ ಜಾಗೃತಿ ಕುರಿತಾಗಿ ಎನ್ಎಸ್ಎಸ್ ಅಧಿಕಾರಿ ಕಲ್ಪನಾ, ದ್ವಿತೀಯ ಬಿ.ಕಾಂನ ವಿದ್ಯಾರ್ಥಿಗಳಾದ ಹರ್ಷಿತ ಹಾಗೂ ಅರ್ಜುನ್ ಮಾತನಾಡಿದರು.
ಕಾರ್ಯಕ್ರಮದ ಅಂಗವಾಗಿ ಏಡ್ಸ್ ಕುರಿತಾದ ಪೋಸ್ಟರ್ ಮೇಕಿಂಗ್ ಸ್ಪರ್ಧೆ ಹಾಗೂ ಪ್ರಬಂಧ ಸ್ಪರ್ಧೆ ನಡೆದು ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಾದ ಹಸೀನ ಸ್ವಾಗತಿಸಿದರು. ಸಫಾನ ನಿರೂಪಣೆ ಮಾಡಿದರು. ರಾಶಿದ ವಂದಿಸಿದರು.
ವರದಿ : ದುಗ್ಗಳ ಸದಾನಂದ.