ಮಡಿಕೇರಿ ಏ.1 NEWS DESK : ಕೊಡವ ಲ್ಯಾಂಡ್ ಭೂ ರಾಜಕೀಯ ಸ್ವಾಯತ್ತತೆ ಮತ್ತು ಎಸ್‍ಟಿ ಟ್ಯಾಗ್ ಕುರಿತು ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ಬೇಡಿಕೆಗೆ ಪೂರಕವಾಗಿ ಆಯೋಗವನ್ನು ರಚಿಸಬೇಕೆಂದು ಖ್ಯಾತ ಅರ್ಥಶಾಸ್ತ್ರಜ್ಞ, ಕೇಂದ್ರದ ಮಾಜಿ ಸಚಿವ ಡಾ.ಸುಬ್ರಮಣಿಯನ್ ಸ್ವಾಮಿ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಇಂದು ಹೈಕೋರ್ಟ್ ನಲ್ಲಿ ನಡೆಯಿತು.
ವಿಚಾರಣೆಯನ್ನು ಜೂ.5 ಕ್ಕೆ ಮುಂದೂಡಿದ ನ್ಯಾಯಾಲಯ ಸಿಎನ್‍ಸಿ ಬೇಡಿಕೆಯ ಕುರಿತು ಅಫಿಡವಿಟ್ ಸಲ್ಲಿಸುವಂತೆ ಡಾ.ಸುಬ್ರಮಣಿಯನ್ ಸ್ವಾಮಿ ಅವರಿಗೆ ಸೂಚಿಸಿತು. ಅಲ್ಲದೆ ಆಕ್ಷೇಪಣೆಗಳನ್ನು ಸಲ್ಲಿಸಲು ಅವಕಾಶ ನೀಡಿದೆ.
ವಕೀಲರಾದ ಸತ್ಯ ಸಬರ್ವಾಲ್ ಹಾಗೂ ಎಂ.ಎಸ್.ನಾರಾಯಣ ಕಿರಣ್ ಸಿಎನ್‍ಸಿ ಪರ ವಾದ ಮಂಡಿಸಿದರು. ಕೊಡವರಿಗೆ ನೀಡಿದ ಭರವಸೆಗಳನ್ನು ಸರಕಾರ ಈಡೇರಿಸುತ್ತಿಲ್ಲ ಮತ್ತು ಅಸಡ್ಡೆ ತೋರುತ್ತಿದೆ ಎಂದು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ನಿಲಯ್ ಬಿಪಿನ್ ಚಂದ್ರ ಅಂಜಾರಿಯಾ ಹಾಗೂ ನ್ಯಾಯಮೂರ್ತಿ ಕ್ರಿಶಾ ದೀಕ್ಷಿತ್ ಅವರ ಮುಂದೆ ವಕೀಲರು ಪ್ರತಿಪಾದಿಸಿದರು.
ಕೇಂದ್ರದ ಗೃಹ ಇಲಾಖೆ, ಕಾನೂನು ಇಲಾಖೆ ಮತ್ತು ಕರ್ನಾಟಕ ರಾಜ್ಯ ಸರಕಾರವನ್ನು ಪ್ರತಿವಾದಿಗಳನ್ನಾಗಿ ಮಾಡಲಾಗಿದೆ.
ಅರ್ಜಿದಾರರಾದ ಸಿಎನ್‍ಸಿ ಅಧ್ಯಕ್ಷ ಎನ್.ಯು.ನಾಚಪ್ಪ, ವಿಹೆಚ್‍ಎಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಜಗದೀಶ್ ಶೆಟ್ಟಿ, ರಾಜ್ಯಾಧ್ಯಕ್ಷ ನಿಖುಂಜ್ ಶಾ, ಲೆಫ್ಟಿನೆಂಟ್ ಕರ್ನಲ್ ಬಿ.ಎಂ.ಪಾರ್ವತಿ, ಶ್ರೇಯಾ ನಾಚಪ್ಪ, ಸಿಎನ್‍ಸಿಯ ಪ್ರಮುಖರಾದ ಚಂಬಂಡ ಜನತ್, ಮಂದಪಂಡ ಮನೋಜ್, ಕಿರಿಯಮಾಡ ಶರಿನ್, ವಿಎಚ್‍ಎಸ್ ಸದಸ್ಯರಾದ ನಟರಾಜ್ ಹಾಗೂ ರವಿಶಂಕರ್ ಈ ಸಂದರ್ಭ ಉಪಸ್ಥಿತರಿದ್ದರು.
Breaking News
- *ಕೊಡವ ಮಕ್ಕಡ ಕೂಟದಿಂದ ದಾಖಲೆಯ 100ನೇ ಪುಸ್ತಕ “100ನೇ ಮೊಟ್ಟ್” ಬಿಡುಗಡೆ : ಭಾಷೆ, ಜಾತಿಯನ್ನು ಮೀರಿದ ಜ್ಞಾನ ಭಂಡಾರವೇ ಸಾಹಿತ್ಯ : ಬಾಚರಣಿಯಂಡ ಅಪ್ಪಣ್ಣ*
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*
- *ಕೊಡಗು ಕೃಷಿ ವಿಜ್ಞಾನ ವೇದಿಕೆಯ ಬೆಳ್ಳಿ ಮಹೋತ್ಸವ : ನ.26 ರಂದು ರೈತ ಮೇಳ*
- *ಡಿ.1 ರಂದು ಗಾಳಿಬೀಡುವಿನಲ್ಲಿ ಬಾಣೆ ಹಬ್ಬ*
- *ನ.26 ರಂದು ಮಡಿಕೇರಿಯಲ್ಲಿ ಜಿಕೀರ್, ಜಾರಿ ಮತ್ತು ನಾತೆ-ರಸುಲ್” ಗಾಯನ*