ಸೋಮವಾರಪೇಟೆ ಏ.2 NEWS DESK : ಸೋಮವಾರಪೇಟೆಯ ಶ್ರೀ ಶಿವಕುಮಾರಸ್ವಾಮೀಜಿ ಜಯಂತ್ಯೋತ್ಸವ ಸಮಿತಿ ಹಾಗೂ ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ವತಿಯಿಂದ ಕಾಯಕ ಯೋಗಿ ಶ್ರೀ ಶಿವಕುಮಾರ ಸ್ವಾಮೀಜಿಗಳ117 ನೇಜನ್ಮ ದಿನಾಚರಣೆ ಅಂಗವಾಗಿ ಪಟ್ಟಣ ಪಂಚಾಯಿತಿ ಪೌರ ಕಾರ್ಮಿಕರಿಗೆ ಹಣ್ಣು ಹಂಪಲು ವಿತರಿಸಲಾಯಿತು. ಪಂಚಾಯಿತಿ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಯಂತ್ಯೋತ್ಸವ ಸಮಿತಿ ಅಧ್ಯಕ್ಷ ಎಸ್.ಮಹೇಶ್ ಮಾತನಾಡಿ, ನಡೆದಾಡುವ ದೇವರೆಂದೇ ಹೆಸರಾಗಿದ್ದ ಶಿವಕುಮಾರ ಸ್ವಾಮೀಜಿಗಳು ತ್ರಿವಿಧ ದಾಸೋಹಗಳ ಮೂಲಕ ಸಮಾಜದಲ್ಲಿ ಪೂಜ್ಯ ಸ್ಥಾನ ಅಲಂಕರಿಸಿದವರು. ಅವರ ಆದರ್ಶಗಳ ಪಾಲನೆಯೊಂದಿಗೆ ಸಂಸ್ಕಾರಯುತ ಸಮಾಜ ನಿರ್ಮಾಣಕ್ಕೆ ಮುಂದಾಗಬೇಕು ಎಂದರು. ಪ.ಪಂ. ಮುಖ್ಯಾಧಿಕಾರಿ ಲೋಕ್ಯಾ ನಾಯಕ್, ಆರೋಗ್ಯಾಧಿಕಾರಿ ಜಾಸಿಂ ಖಾನ್, ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ಮಹಿಳಾ ಘಟಕದ ಅಧ್ಯಕ್ಷೆ ಉಷಾರಾಣಿ, ಇಂದಿರಾ ಗಾಂಧಿ ಅಭಿಮಾನಿ ಸಂಘದ ಅಧ್ಯಕ್ಷ ನಾಗರಾಜ್, ಪೌರಕಾರ್ಮಿಕರ ಸಂಘದ ಅಧ್ಯಕ್ಷ ಮಂಜುನಾಥ್,ಮೋಟಾರು ಕೆಲಸಗಾರರ ಸಂಘದ ಉಪಾಧ್ಯಕ್ಷ ರಂಗಸ್ವಾಮಿ,ಪ್ರಮುಖರುಗಳಾದ ಡ್ಯಾನಿಯಲ್,ಮಂಜುಳಾ ಬಸವರಾಜ್ ಸೇರಿದಂತೆ ಇತರರು ಉಪಸ್ಥಿತರಿದ್ದರು.











