ಮಡಿಕೇರಿ ಏ.2 NEWS DESK : ಶಸ್ತ್ರಾಸ್ತ್ರಗಳ ಪರವಾನಗಿ ಹೊಂದಿರುವವರು ಲೋಕಸಭೆ ಚುನಾವಣೆ ಹಿನ್ನೆಲೆ ಬಂದೂಕುಗಳನ್ನು ಹತ್ತಿರದ ಪೊಲೀಸ್ ಠಾಣೆಗಳಿಗೆ ಒಪ್ಪಿಸುವಂತೆ ಪೊಲೀಸ್ ಇಲಾಖೆ ಈಗಾಗಲೇ ಸೂಚನೆ ನೀಡಿದೆ. ಸಂಭವನೀಯ ಕ್ರಿಮಿನಲ್ ಕೃತ್ಯಗಳನ್ನು ತಡೆಗಟ್ಟುವ ಸಲುವಾಗಿ ರಾಜ್ಯ ಚುನಾವಣಾ ಆಯೋಗದ ನಿರ್ದೇಶನದ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದೆ.
ಈ ಕುರಿತು ಮಾಹಿತಿ ನೀಡಿರುವ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರು ಸಾರ್ವಜನಿಕರು ಬಂದೂಕುಗಳನ್ನು ಮತ್ತು ಇತರ ಆಯುಧಗಳನ್ನು ಸಮೀಪದ ಪೋಲೀಸ್ ಠಾಣೆಯಲ್ಲಿ ಠೇವಣಿ ಮಾಡಬೇಕು. ಆದರೆ ಕಾಡಂಚಿನ, ಗುಡ್ಡಗಾಡು ಪ್ರದೇಶಗಳು, ಒಂಟಿ ಮನೆಗಳು ಮತ್ತು ಕಾಡು ಪ್ರಾಣಿಗಳ ಉಪಟಳ ಇರುವ ನಿವಾಸಿಗಳು, ಬ್ಯಾಂಕ್‌ಗಳು ಹಾಗೂ ಚಿನ್ನಾಭರಣ ಅಂಗಡಿಗಳ ಮಾಲೀಕರು ಜಿಲ್ಲಾಧಿಕಾರಿಗಳ ನೇತೃತ್ವದ ಜಿಲ್ಲಾ ಪರಿಶೀಲನಾ ಸಮಿತಿಗೆ ಅರ್ಜಿ ಸಲ್ಲಿಸಿ ವಿನಾಯಿತಿ ಪಡೆಯಬಹುದಾಗಿದೆ ಎಂದು ಹೇಳಿದರು.
ಬಂದೂಕಿನ ಅವಶ್ಯಕತೆ ಇರುವವರು ಅರ್ಜಿಯನ್ನು ಜಿಲ್ಲಾಧಿಕಾರಿಗಳ ಕಚೇರಿಗೆ ಸಲ್ಲಿಸಿದರೆ ಅಲ್ಲಿನ ಅಧಿಕಾರಿಗಳು ಪೋಲೀಸ್ ಇಲಾಖೆಯ ಅಭಿಪ್ರಾಯಕ್ಕೆ ಇಲಾಖೆಗೆ ರವಾನಿಸುತ್ತಾರೆ. ಅಂತಹ ಅರ್ಜಿಗಳಿಗೆ 24 ಗಂಟೆಗಳಲ್ಲಿಯೇ ಪೋಲೀಸ್ ನಿರಾಕ್ಷೇಪಣಾ ಪತ್ರವನ್ನು ನೀಡಲಾಗುತ್ತಿದೆ. ರೈತರು ಹೆಚ್ಚಿನ ತೊಡಕು, ವಿಳಂಬವಿಲ್ಲದೆ ಕೋವಿ ಇರಿಸಿಕೊಳ್ಳಲು ಅವಕಾಶ ಪಡೆಯಬಹುದು. ಈಗಾಗಲೇ ಜಿಲ್ಲೆಯಲ್ಲಿ ಪರಿಶೀಲನಾ ಸಮಿತಿಗೆ 33 ಅರ್ಜಿಗಳು ಸಲ್ಲಿಕೆ ಆಗಿದ್ದು, ಇದರಲ್ಲಿ 23 ಅರ್ಜಿದಾರರಿಗೆ ವಿನಾಯ್ತಿ ನೀಡಲಾಗಿದೆ, ಇತರ ಅರ್ಜಿಗಳು ಪ್ರಕ್ರಿಯೆಯಲ್ಲಿವೆ. ಜಮ್ಮಾ ಹಿಡುವಳಿದಾರರು ಬಂದೂಕು ಠೇವಣಿ ಮಾಡುವುದು ಕಡ್ಡಾಯ ಅಲ್ಲವಾದರೂ ಕ್ರಿಮಿನಲ್ ಮೊಕದ್ದಮೆ ಎದುರಿಸುತ್ತಿರುವವರು ಠೇವಣಿ ಮಾಡಬೇಕು ಎಂದರು.
::: ರೌಡಿ ಶೀಟರ್ ಗಳ ಪಟ್ಟಿ :::
ಈಗಾಗಲೇ ಜಿಲ್ಲೆಯಲ್ಲಿ ಹೆಚ್ಚು ಕ್ರಿಮಿನಲ್ ಮೊಕದ್ದಮೆಗಳನ್ನು ಎದುರಿಸುತ್ತಿರುವವರ ಮತ್ತು ರೌಡಿ ಶೀಟರ್ ಗಳ ಪಟ್ಟಿ ಮಾಡುವಂತೆ ಆಯಾ ಠಾಣಾಧಿಕಾರಿಗಳಿಗೆ ಸೂಚನೆ ನೀಡಲಾಗಿದ್ದು, ಅವರಿಂದ ಚುನಾವಣಾ ಸಂದರ್ಭದಲ್ಲಿ ಯಾವುದೇ ರೀತಿಯ ಕ್ರಿಮಿನಲ್ ಚಟುವಟಿಕೆಯಲ್ಲಿ ಭಾಗವಹಿಸದಿರುವ ಕುರಿತು ಇಂಡೆಮ್ನಿಟಿ ಬಾಂಡ್ ಪಡೆಯಲಾಗುವುದು ಎಂದು ಎಸ್‌ಪಿ ತಿಳಿಸಿದರು.
ವಿಶೇಷವಾಗಿ ಪಶ್ಚಿಮ ಘಟ್ಟಗಳ ವ್ಯಾಪ್ತಿಯ ಮಲೆನಾಡು ಪ್ರದೇಶದ ರೈತರು ಹಾಗೂ ಬೆಳೆಗಾರರು ರಾಜ್ಯದಲ್ಲಿ ಗರಿಷ್ಠ ಸಂಖ್ಯೆಯ ಆಯುಧಗಳನ್ನು ಹೊಂದಿದ್ದಾರೆ. ಕೊಡಗು ಜಿಲ್ಲೆಯಲ್ಲಿ ಒಟ್ಟು 4067 ಬಂದೂಕು ಪರವಾನಗಿದಾರರು ಇದ್ದಾರೆ. ನೆರೆಯ ಚಿಕ್ಕಮಗಳೂರು ಜಿಲ್ಲೆ ರಾಜ್ಯದಲ್ಲಿ ಅತ್ಯಂತ ಹೆಚ್ಚು ಅಂದರೆ ಸುಮಾರು 8924 ಬಂದೂಕು ಪರವಾನಗಿದಾರರನ್ನು ಹೊಂದಿದೆ. ಹಾಸನ ಜಿಲ್ಲೆಯಲ್ಲಿ ಸುಮಾರು 5212 ಬಂದೂಕು ಮತ್ತು ಶಿವಮೊಗ್ಗ ಜಿಲ್ಲೆಯಲ್ಲಿ 4951 ಬಂದೂಕು ಮಾಲೀಕರು ಇದ್ದಾರೆ. (ವರದಿ : ಕೋವರ್ ಕೊಲ್ಲಿ ಇಂದ್ರೇಶ್)
Breaking News
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*
- *ಕೊಡಗು ಕೃಷಿ ವಿಜ್ಞಾನ ವೇದಿಕೆಯ ಬೆಳ್ಳಿ ಮಹೋತ್ಸವ : ನ.26 ರಂದು ರೈತ ಮೇಳ*
- *ಡಿ.1 ರಂದು ಗಾಳಿಬೀಡುವಿನಲ್ಲಿ ಬಾಣೆ ಹಬ್ಬ*
- *ನ.26 ರಂದು ಮಡಿಕೇರಿಯಲ್ಲಿ ಜಿಕೀರ್, ಜಾರಿ ಮತ್ತು ನಾತೆ-ರಸುಲ್” ಗಾಯನ*
- *ವಿಶ್ವಾಸ್ ವೆಂಕಟ್ ಗೆ ಟೇಬಲ್ ಟೆನ್ನಿಸ್ ನಲ್ಲಿ ರನ್ನರ್ ಪ್ರಶಸ್ತಿ*