ಮಡಿಕೇರಿ ಏ.2 NEWS DESK : ಗಾಳಿಬೀಡು ವಲಯ ಕಾಂಗ್ರೆಸ್ನ ನೂತನ ಅಧ್ಯಕ್ಷರಾಗಿ ಸುಭಾಷ್ ಆಳ್ವ ಆಯ್ಕೆಯಾಗಿದ್ದಾರೆ.
ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಹಾಗೂ ಪಕ್ಷದ ಜಿಲ್ಲಾಧ್ಯಕ್ಷ ಧರ್ಮಜ ಉತ್ತಪ್ಪ ಅವರ ಶಿಫಾರಸ್ಸಿನ ಮೇರೆಗೆ ಮಡಿಕೇರಿ ಬ್ಲಾಕ್ ಅಧ್ಯಕ್ಷ ಹೆಚ್.ಎ.ಹಂಸ ಅವರ ನೇತೃತ್ವದಲ್ಲಿ ಆದೇಶ ಪತ್ರವನ್ನು ಸುಭಾಷ್ ಆಳ್ವ ಅವರಿಗೆ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಹಸ್ತಾಂತರಿಸಲಾಯಿತು.
ಈ ಸಂದರ್ಭ ಜಿಲ್ಲಾ ಗೌರವ ಕಾರ್ಯದರ್ಶಿ ವಿ.ಪಿ.ಸುರೇಶ್, ಸದಸ್ಯ ಪುಷ್ಪ ಪೂಣಚ್ಚ, ಬ್ಲಾಕ್ ಕಾಂಗ್ರೆಸ್ ಸಂಘಟನಾ ಕಾರ್ಯದರ್ಶಿ ಭಾರ್ಗವ್ ಚೆರಿಯಮನೆ, ಬ್ಲಾಕ್ ಸಂಘಟನಾ ಕಾರ್ಯದರ್ಶಿ ಎಂ.ಎಂ.ಹನೀಫ್, ಮಾಜಿ ಸೈನಿಕರ ಘಟಕದ ಜಿಲ್ಲಾಧ್ಯಕ್ಷ ಗಣೇಶ್ ಬೊಳ್ಳಿಯಂಡ ಮತ್ತಿತರರು ಉಪಸ್ಥಿತರಿದ್ದರು.









