ಮಡಿಕೇರಿ ಏ.2 NEWS DESK : ಕೊಡಗು ಜಿಲ್ಲೆಯಲ್ಲಿ ಮೇ 8 ರವರೆಗೆ ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ 5ನೇ ಸುತ್ತಿನ ಕಾಲುಬಾಯಿ ಜ್ವರ ಲಸಿಕಾ ಕಾರ್ಯಕ್ರಮ ನಡೆಯಲಿದೆ.
ದನ, ಎಮ್ಮೆ, ಆಡು/ ಕುರಿ ಹಂದಿ, ಸೇರಿದಂತೆ ಎಲ್ಲಾ ಸೀಳು ಗೊರಸಿನ ಪ್ರಾಣಿಗಳಲ್ಲಿ ಈ ರೋಗವು ಕಾಣಿಸಿಕೊಳ್ಳುವ ಸಾಧ್ಯತೆಯಿರುತ್ತದೆ. ಇದು ರೈತರಿಗೆ ಅಪಾರವಾದ ಅರ್ಥಿಕ ನಷ್ಟವನ್ನುಂಟು ಮಾಡುವ ರೋಗವಾಗಿರುತ್ತದೆ.
ಕಾಲುಬಾಯಿ ಜ್ವರವು ಒಂದು ವೈರಾಣು ರೋಗವಾಗಿದ್ದು ನಿರ್ದಿಷ್ಟ ಚಿಕಿತ್ಸೆ ಅಸಾಧ್ಯವಾಗಿರುತ್ತದೆ. ಕಾಲುಬಾಯಿ ರೋಗದಿಂದ ಗುಣಮುಖವಾದರೂ ಸಹ ಜಾನುವಾರುಗಳು ಬಿಸಿಲಿಗೆ ಏದುಸಿರು ಬಿಡುತ್ತವೆ. ಹೈನು ರಾಸುಗಳಲ್ಲಿ ಹಾಲಿನ ಇಳುವರಿ ಇಳಿಮುಖವಾಗಲಿದ್ದು ಗರ್ಭಪಾತ, ಗರ್ಭಕಟ್ಟುವಲ್ಲಿ ವಿಳಂಬ, ಎತ್ತು/ ಹೋರಿಗಳಲ್ಲಿ ಕೆಲಸ ಮಾಡುವ ಸಾಮರ್ಥ್ಯ ಕ್ಷೀಣಿಸಿ ತೀವ್ರ ಆರ್ಥಿಕ ನಷ್ಟವನ್ನುಂಟು ಮಾಡುತ್ತದೆ.
ಲಸಿಕೆ ಹಾಕಿಸುವುದೊಂದೇ ಕಾಲುಬಾಯಿ ರೋಗ ನಿಯಂತ್ರಿಸಲು ಇರುವ ಏಕೈಕ ಮಾರ್ಗವಾಗಿರುತ್ತದೆ. ಈ ರೋಗದ ವಿರುದ್ಧ ಪ್ರತಿ 6 ತಿಂಗಳಿಗೊಮ್ಮೆ ಲಸಿಕೆ ಹಾಕಿಸಿ, ರೋಗ ಬರದಂತೆ ತಡೆಗಟ್ಟಬಹುದಾಗಿದೆ. 20ನೇ ಜಾನುವಾರು ಗಣತಿಯಂತೆ ಜಿಲ್ಲೆಯಲ್ಲಿ ದನ ಹಾಗೂ ಎಮ್ಮೆಗಳ ಸಂಖ್ಯೆ 76,920 ಇದ್ದು, ಜಾನುವಾರುಗಳಿಗೆ ಲಸಿಕೆ ಹಾಕುವ ಗುರಿಯನ್ನು ಹೊಂದಲಾಗಿರುತ್ತದೆ. ಈಗಾಗಲೇ ಲಸಿಕಾ ಕಾರ್ಯಕ್ರಮಕ್ಕೆ ಎಲ್ಲಾ ಪೂರ್ವ ಸಿದ್ದತೆಯನ್ನು ಮಾಡಿಕೊಳಲಾಗಿದ್ದು 70 ಲಸಿಕಾ ದಾರರನ್ನೊಳಗೊಂಡ ಒಟ್ಟು 11 ತಂಡಗಳನ್ನು ರಚಿಸಲಾಗಿರುತ್ತದೆ. ಲಸಿಕಾದಾರರು ರೈತರ/ಜಾನುವಾರು ಮಾಲೀಕರ ಮನೆ ಮನೆಗೆ ತೆರಳಿ ಲಸಿಕೆ ಹಾಕಲಿದ್ದಾರೆ.
ಲಸಿಕೆಯು ಸಂಪೂರ್ಣವಾಗಿ ಉಚಿತವಾಗಿದ್ದು, ಯಾವುದೇ ರೀತಿಯ ಶುಲ್ಕವಿರುವುದಿಲ್ಲ. ಇದೊಂದು ರಾಷ್ಟ್ರೀಯ ಕಾರ್ಯಕ್ರಮವಾಗಿದ್ದು, ಲಸಿಕಾದಾರರು ಜಾನುವಾರು ಮಾಲೀಕರ ಮನೆಗಳಿಗೆ ಬಂದಾಗ ಸಹಕಾರ ನೀಡಿ 4 ತಿಂಗಳ ಮೇಲ್ಪಟ್ಟ ಎಲಾ ್ಲದನ/ ಎಮ್ಮೆಗಳಿಗೆ ಲಸಿಕೆ ಹಾಕಿಸುವಂತೆ ಕೋರಿದೆ.
ಹೆಚ್ಚಿನ ಮಾಹಿತಿಗೆ ಸಹಾಯಕ ನಿರ್ದೇಶಕರು ಪಶುಆಸ್ಪತ್ರೆ ಮಡಿಕೇರಿ 9448647276, ಸಹಾಯಕ ನಿರ್ದೇಶಕರು ಪಶುಆಸ್ಪತ್ರೆ ಸೋಮವಾರಪೇಟೆ 9448597496, ಸಹಾಯಕ ನಿರ್ದೇಶಕರು ಪಶುಆಸ್ಪತ್ರೆ ವಿರಾಜಪೇಟೆ 9141093996, ಸಹಾಯಕ ನಿರ್ದೇಶಕರು ಪಶುಆಸ್ಪತ್ರೆ ಕುಶಾಲನಗರ 9448422269 ಹಾಗೂ ಸಹಾಯಕ ನಿರ್ದೇಶಕರು ಪಶುಆಸ್ಪತ್ರೆ ಪೊನ್ನಂಪೇಟೆ 9449081343 ಪಶುವೈದ್ಯಕೀಯ ಸಂಸ್ಥೆಯನ್ನು ಸಂಪರ್ಕಿಸಬಹುದು ಎಂದು ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.
Breaking News
- *ಬಾಳುಗೋಡುವಿನಲ್ಲಿ ಸಂಭ್ರಮದ ಕೊಡವ ನಮ್ಮೆ : ಕೊಡವ ಸಂಸ್ಕೃತಿ, ಪರಂಪರೆಗಳ ಉಳಿವಿಗೆ ಶ್ರಮಿಸಿ : ಶಾಸಕ ಎ.ಎಸ್.ಪೊನ್ನಣ್ಣ*
- *ವಿರಾಜಪೇಟೆಯಲ್ಲಿ ಶಾಸಕರಿಂದ ಕೃಷಿ ಯಂತ್ರೋಪಕರಣ ವಿತರಣೆ*
- *ಮಡಿಕೇರಿ : ನ್ಯುಮೋನಿಯಾ ಯಶಸ್ವಿಯಾಗಿ ಕೊನೆಗೊಳಿಸಲು ಸಾಮಾಜಿಕ ಜಾಗೃತಿ ಅಭಿಯಾನ*
- *ಕೊಡಗು : ಪ್ರಧಾನಮಂತ್ರಿ 15 ಅಂಶದ ಕಾರ್ಯಕ್ರಮ ಪ್ರಗತಿ ಸಾಧಿಸಿ : ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚನೆ*
- *ಕೊಡಗು : ಶಿಶು ಮರಣ ತಡೆಯಲು ಹೆಚ್ಚಿನ ಜಾಗೃತಿ ಮೂಡಿಸಿ : ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಸೂಚನೆ*
- *ಮಡಿಕೇರಿಯ ಹೃದಯ ಭಾಗದಲ್ಲಿ ವಾಣಿಜ್ಯ ಸಂಕೀರ್ಣ ಮಾರಾಟಕ್ಕಿದೆ*
- *ನ.30 ರಂದು ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಕೊಡಗು ಜಿಲ್ಲಾ ಪ್ರವಾಸ*
- *ಜಾರ್ಖಂಡ್ನ 14ನೇ ಮುಖ್ಯಮಂತ್ರಿಯಾಗಿ ಹೇಮಂತ್ ಸೊರೆನ್ ಪ್ರಮಾಣ ವಚನ ಸ್ವೀಕಾರ*
- *ಮೂರು ಕರುಗಳಿಗೆ ಜನ್ಮ ನೀಡಿದ ಸೀಮೆ ಹಸು*
- *TO LET / ಬಾಡಿಗೆಗೆ*