Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡಗಿನಲ್ಲಿ ಮೋಡಬಿತ್ತನೆ ಬೇಡ ಬಿಜೆಪಿ ಕೃಷಿಮೋರ್ಚಾ ಒತ್ತಾಯ*
  • *ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*
  • *ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*
  • *ಎಸ್‍ಐಆರ್ ಪ್ರಕ್ರಿಯೆ, ಸೆ.23 ರ ವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಅವಕಾಶ : ಕರಡು ಮತದಾರರ ಪಟ್ಟಿ : ಜಿಲ್ಲೆಯಲ್ಲಿ 4,05,803 ಮಂದಿ ಮತದಾರರು : ಡಿಸಿ ಮಾಹಿತಿ *
  • *ಪೊನ್ನಾಡ್ ರೈತ ಉತ್ಪಾದಕ ಸಂಸ್ಥೆ(ಎಫ್‌ಪಿಓ)ಗೆ ಮಾರುಕಟ್ಟೆ ವಿಭಾಗದಲ್ಲಿ ರಾಜ್ಯ ಮಟ್ಟದ ಶ್ರೇಷ್ಠತಾ ಪ್ರಶಸ್ತಿ*
  • *ಪೂಂಪುಹಾರ್ ವರೆಗೆ 16ನೇ ವರ್ಷದ ಕಾವೇರಿ ಜಾಗೃತಿ ರಥಯಾತ್ರೆ : ಅ.26ರಿಂದ ತಲಕಾವೇರಿಯಿಂದ ಆರಂಭ*
  • *ಕಟ್ಟೆಮಾಡು ಸಕಾ೯ರಿ ಶಾಲೆಯಲ್ಲಿ ಹಿರಿಯ ಜೀವಿಗಳಿಗೆ ಗೌರವ ನಮನ*
  • *ಬುಡಕಟ್ಟು ಸಾಂಸ್ಕೃತಿಕ ಕಾರ್ಯಕ್ರಮ, ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ : ಸಂಸ್ಕೃತಿ ಉಳಿಸಿ ಬೆಳೆಸುವಲ್ಲಿ ಯುವಜನರ ಪಾತ್ರ ಮಹತ್ವದ್ದು : ಶಾಸಕ ಎ.ಎಸ್.ಪೊನ್ನಣ್ಣ*
  • *ಹಿರಿಯ ಜೀವಿಗಳಿಗೆ  ಮರಗೋಡು ಸಕಾ೯ರಿ ಶಾಲೆಯಲ್ಲಿ ಗೌರವ ನಮನ*
  • *ಪಾರಾಣೆಯ ಸಕಾ೯ರಿ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ಗೌರವ ಸಲ್ಲಿಕೆ ; ಕನ್ನಡದಲ್ಲಿ ಓದಿಯೂ ಉತ್ತಮ ಹುದ್ದೆಗೇರಲು ಸಾಧ್ಯ – ಕೆ.ಎ.ಉಮ್ಮರ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿ : ಲಿಂಗ ಪತ್ತೆ ನಿಷೇಧ ಕಾಯ್ದೆ ಕುರಿತು ಆರೋಗ್ಯ ಇಲಾಖೆಯ ಕಾರ್ಯಕರ್ತರಿಗೆ ಕಾರ್ಯಾಗಾರ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿ : ಲಿಂಗ ಪತ್ತೆ ನಿಷೇಧ ಕಾಯ್ದೆ ಕುರಿತು ಆರೋಗ್ಯ ಇಲಾಖೆಯ ಕಾರ್ಯಕರ್ತರಿಗೆ ಕಾರ್ಯಾಗಾರ*

ಏಪ್ರಿಲ್ 2, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಏ.2 NEWS DESK : 2023-24 ನೇ ಸಾಲಿನ ಮಿಶನ್ ಶಕ್ತಿ ಯೋಜನೆಯಯಡಿ “ಬೇಟಿ ಬಚವೊ-ಬೇಟಿ ಪಡಾವೊ” ಜಿಲ್ಲಾ ಮಟ್ಟದ ಕಾರ್ಯಕ್ರಮದ ಅಂಗವಾಗಿ ಮಡಿಕೇರಿಯಲ್ಲಿ ಗರ್ಭಪೂರ್ವ ಮತ್ತು ಪ್ರಸವಪೂರ್ವ ಪತ್ತೆ ತಂತ್ರ ವಿಧಾನಗಳು (ಲಿಂಗ ಆಯ್ಕೆ ನಿಷೇಧ) ಕಾಯ್ದೆ 1994ರ ಬಗ್ಗೆ ಅಂಗನವಾಡಿ ಕಾರ್ಯಕರ್ತೆಯರಿಗೆ, ಆಶಾಕಾರ್ಯಕರ್ತೆಯರಿಗೆ, ಹಿರಿಯ ಮಹಿಳಾ ಆರೋಗ್ಯ ಸಹಾಯಕಿಯರಿಗೆ ಜಾಗೃತಿ ಕಾರ್ಯಾಗಾರ ನಡೆಯಿತು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಹಯೋಗದೊಂದಿಗೆ ನಗರದ ಗಾಂಧಿ ಭವನದಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಹಿರಿಯ ಸಿವಿಲ್ ನ್ಯಾಯಾದೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕೆ.ಪ್ರಸಾದ್, ಮಗು ಹುಟ್ಟುವಾಗಲೇ ಬದುಕುವ ಹಕ್ಕನ್ನು ಸಂವಿದಾನಿಕವಾಗಿ ಪಡೆದುಕೊಂಡು ಬಂದಿದೆ. ಮಗು ಜನಿಸುವ ಮುನ್ನ ಹಾಗೂ ಜನಿಸಿದ ನಂತರವು ಮಗುವಿನ ರಕ್ಷಣೆಗೆ ಹಲವು ಕಾನೂನುಗಳಿದ್ದು, ಮಗು ಜನಿಸುವ ಮೊದಲೆ ಭ್ರೂಣ ಲಿಂಗ ಪತ್ತೆ ಮಾಡುವುದು ಕಾನೂಬಾಹಿರ ಅಪರಾಧವಾಗಿದೆ ಎಂದು ಹೇಳಿದರು.

ಮಗುವಿನ ಸರ್ವತೋಮುಖ ಬೆಳವಣಿಗೆಗೆ ಪೋಷಕರು ಮಾನಸಿಕ ಹಾಗೂ ಶೈಕ್ಷಣಿಕವಾಗಿ ಸಹಕರಿಸಬೇಕು. ಅಲ್ಲದೆ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವುದರ ಜೊತೆಗೆ ಅವರ ರಕ್ಷಣೆ ಪ್ರತಿಯೊಬ್ಬ ಪೋಷಕರ ಕರ್ತವ್ಯವಾಗಿದೆ ಎಂದು ತಿಳಿಸಿದರು.
ಕೌಟುಂಬಿಕ ದೌರ್ಜನ್ಯ ಕಾಯ್ದೆ ಮತ್ತು ಮಗುವಿಗೆ ಶೋಷಣೆಯ ವಿರುದ್ದದ ಹಕ್ಕಿನಿಂದ ಮಹಿಳೆ ತನ್ನನ್ನು ತಾನು ರಕ್ಷಿಸಿಕೊಳ್ಳಲು ಸಹಕಾರಿಯಾಗಿದೆ ಎಂದು ಹೇಳಿದರು.
ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ನಂಜುಂಡಯ್ಯ ಮಾತನಾಡಿ, ಲಿಂಗ ಪತ್ತೆ ನಿಷೇಧ ಕಾಯ್ದೆ ಇದು ಪ್ರತಿಯೊಬ್ಬರ ಜವಾಬ್ದಾರಿ ಹಾಗೂ ಪಾಲೂದಾರಿಕೆಯಾಗಿದೆ ಇದನ್ನು ಸಮಾಜದಲ್ಲಿರುವ ಮಗು ಹುಟ್ಟುವಾಗಲೇ ತನ್ನ ಹಕ್ಕನ್ನು ಪಡೆದುಕೊಂಡಿದ್ದು ಅದನ್ನು ರಕ್ಷಿಸುವುದು ಕೂಡ ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದರು.
ಸಮಾಜದಲ್ಲಿ ಮುನ್ನಲೇಯಲ್ಲಿರುವ ಕಾರ್ಯಕರ್ತೆಯರು ಸ್ವಸ್ಥ್ಯ ಸಮಾಜದ ನಿರ್ಮಾಣಕ್ಕೆ ಕೈಜೊಡಿಸಬೇಕೆಂದು ಸಲಹೆ ನೀಡಿದರು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ. ಆನಂದ್ ಮಾತನಾಡಿ, ಮೊದಲಿಗೆ ಗರ್ಭಪೂರ್ವ ಮತ್ತು ಪ್ರಸವಪೂರ್ವ ಪತ್ತೆ ತಂತ್ರ ವಿಧಾನಗಳು(ಲಿಂಗ ಆಯ್ಕೆ ನಿಷೇಧ) ಕಾಯ್ದೆ 1994ರ ಬಗ್ಗೆ ಕಾರ್ಯಕರ್ತೆಯರಿಗೆ ವಿಡಿಯೋ ತುಣುಕನ್ನು ಪ್ರದರ್ಶಿಸಿ ಜಾಗೃತಿ ಮೂಡಿಸಿದರು.
ಕಾರಣ ಸಾಕಷ್ಟು ಹೆಣ್ಣುಮಕ್ಕಳು ಕಳೆದುಹೋಗುತ್ತಿದ್ದುದರಿಂದ 1988 ರಲ್ಲಿ ಮೊದಲಿಗೆ ಮಹರಾಷ್ಟ್ರರದಲ್ಲಿ ಜಾರಿಗೆ ತರಲಾಯಿತು. ಮಗು ಹುಟ್ಟುವಾಗಲೇ ಕಾಣೆಯಾಗುವುದು, ಹೆಣ್ಣು ಎಂದು ತಿಳಿದ ಕೂಡಲೇ ಗರ್ಭಪಾತ ಮಾಡಿಸಿಕೊಳ್ಳುತ್ತಿರುವುದು ಹೆಣ್ಣು ಮಕ್ಕಳ ಸಂಖ್ಯೆ ಕ್ಷೀಣಿಸಲು ಮುಖ್ಯ ಕಾರಣವಾಗಿದ್ದು, ಪೋಷಕರು ಗರ್ಭಪೂರ್ವ ಮತ್ತು ಪ್ರಸವ ಪೂರ್ವ ಲಿಂಗ ಪತ್ತೆಗೆ ಹೆಣ್ಣು ಮಕ್ಕಳನ್ನು ಪ್ರೇರೆಪಿಸಬಾರದು. ಹೆಣ್ಣು ಗಂಡು ಎಂದು ಭೇದಭಾವ ತೋರದೆ ಸಮಾನವಾಗಿ ಕಾಳಜಿವಹಿಸುವಂತೆ ಕರೆ ನೀಡಿದರು.
ಹೆಣ್ಣು ಮಕ್ಕಳ ರಕ್ಷಣೆಗಾಗಿ ಜಿಲ್ಲಾ ಮಟ್ಟದಲ್ಲಿ ಸಮಿತಿಗಳು, ಸಲಹ ಸಮಿತಿಗಳಿದ್ದು 3 ತಿಂಗಳಿಗೆ ಸಭೆಯನ್ನು ಆಯೋಜಿಸುವ ಮೂಲಕ ಸೂಕ್ತ ರೀತಿಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಗಮನಹರಿಸುತ್ತಿದೆ. ಗ್ರಾಮಮಟ್ಟದಲ್ಲಿ ಈ ರೀತಿ ಪ್ರಕರಣಗಳು ಕಂಡುಬಂದಲ್ಲಿ ಆ ಬಗ್ಗೆ ಮಾಹಿತಿ ನೀಡಿದಲ್ಲಿ ಕಾನೂನು ಪ್ರಕಾರ ಶಿಕ್ಷೆ ನೀಡುವುದಾಗಿ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ತರಬೇತಿ ಸಂಸ್ಥೆಯ ಪ್ರಾಂಶುಪಾಲ ಡಾ. ಶಿವಕುಮಾರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖಾ ಸಿಬ್ಬಂದಿಗಳು ಹಾಜರಿದ್ದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಮಾಹಿತಿ ಸಲಹೆಗಾರ ಜೋಯಪ್ಪ ಕಾರ್ಯಕ್ರಮ ನಿರೂಪಿಸಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ನಟರಾಜ್ ಸ್ವಾಗತಿಸಿ, ವಂದಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೊಡಗಿನಲ್ಲಿ ಮೋಡಬಿತ್ತನೆ ಬೇಡ ಬಿಜೆಪಿ ಕೃಷಿಮೋರ್ಚಾ ಒತ್ತಾಯ*

ಆಗಷ್ಟ್ 24, 2026

*ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*

ಆಗಷ್ಟ್ 24, 2026

*ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*

ಆಗಷ್ಟ್ 24, 2026

*ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*

ಆಗಷ್ಟ್ 24, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಆ.24 : ನಾಪೋಕ್ಲುವಿನ ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆ ನಾಪೋಕ್ಲು, ರೋಟರಿ ಮಿಸ್ಟಿ ಹಿಲ್ಸ್…

*ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*

ಆಗಷ್ಟ್ 24, 2026

*ಎಸ್‍ಐಆರ್ ಪ್ರಕ್ರಿಯೆ, ಸೆ.23 ರ ವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಅವಕಾಶ : ಕರಡು ಮತದಾರರ ಪಟ್ಟಿ : ಜಿಲ್ಲೆಯಲ್ಲಿ 4,05,803 ಮಂದಿ ಮತದಾರರು : ಡಿಸಿ ಮಾಹಿತಿ *

ಆಗಷ್ಟ್ 24, 2026

*ಪೊನ್ನಾಡ್ ರೈತ ಉತ್ಪಾದಕ ಸಂಸ್ಥೆ(ಎಫ್‌ಪಿಓ)ಗೆ ಮಾರುಕಟ್ಟೆ ವಿಭಾಗದಲ್ಲಿ ರಾಜ್ಯ ಮಟ್ಟದ ಶ್ರೇಷ್ಠತಾ ಪ್ರಶಸ್ತಿ*

ಆಗಷ್ಟ್ 24, 2026

*ಪೂಂಪುಹಾರ್ ವರೆಗೆ 16ನೇ ವರ್ಷದ ಕಾವೇರಿ ಜಾಗೃತಿ ರಥಯಾತ್ರೆ : ಅ.26ರಿಂದ ತಲಕಾವೇರಿಯಿಂದ ಆರಂಭ*

ಆಗಷ್ಟ್ 24, 2026

*ಕಟ್ಟೆಮಾಡು ಸಕಾ೯ರಿ ಶಾಲೆಯಲ್ಲಿ ಹಿರಿಯ ಜೀವಿಗಳಿಗೆ ಗೌರವ ನಮನ*

ಆಗಷ್ಟ್ 24, 2026

*ಬುಡಕಟ್ಟು ಸಾಂಸ್ಕೃತಿಕ ಕಾರ್ಯಕ್ರಮ, ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ : ಸಂಸ್ಕೃತಿ ಉಳಿಸಿ ಬೆಳೆಸುವಲ್ಲಿ ಯುವಜನರ ಪಾತ್ರ ಮಹತ್ವದ್ದು : ಶಾಸಕ ಎ.ಎಸ್.ಪೊನ್ನಣ್ಣ*

ಆಗಷ್ಟ್ 24, 2026

*ಹಿರಿಯ ಜೀವಿಗಳಿಗೆ  ಮರಗೋಡು ಸಕಾ೯ರಿ ಶಾಲೆಯಲ್ಲಿ ಗೌರವ ನಮನ*

ಆಗಷ್ಟ್ 24, 2026

*ಪಾರಾಣೆಯ ಸಕಾ೯ರಿ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ಗೌರವ ಸಲ್ಲಿಕೆ ; ಕನ್ನಡದಲ್ಲಿ ಓದಿಯೂ ಉತ್ತಮ ಹುದ್ದೆಗೇರಲು ಸಾಧ್ಯ – ಕೆ.ಎ.ಉಮ್ಮರ್*

ಆಗಷ್ಟ್ 24, 2026

*ಮಳೆಗಾಗಿ ಸಚಿವರಿಂದ ವಿಶೇಷ ಪೂಜೆ*

ಆಗಷ್ಟ್ 23, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.