ಮಡಿಕೇರಿ ಏ.3 NEWS DESK : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಜನರಲ್ ತಿಮ್ಮಯ್ಯ ರಾಷ್ಟ್ರೀಯ ಸಾಹಸ ಅಕಾಡೆಮಿ ವತಿಯಿಂದ 10 ರಿಂದ 17 ವರ್ಷ ವಯೋಮಿತಿಯ ಶಾಲಾ-ಕಾಲೇಜಿನ ವಿದ್ಯಾರ್ಥಿಗಳಿಗೆ ಸಾಹಸ ಕ್ರೀಡೆಗಳ ಬೇಸಿಗೆ ಶಿಬಿರವು ಏಪ್ರಿಲ್ ಮತ್ತು ಮೇ ಮಾಹೆಯಲ್ಲಿ ನಡೆಯಲಿದೆ.
ಜನರಲ್ ತಿಮ್ಮಯ್ಯ ರಾಷ್ಟ್ರೀಯ ಸಾಹಸ ಅಕಾಡೆಮಿ ವತಿಯಿಂದ ನಡೆಯುವ ಸಾಹಸ ಕ್ರೀಡೆ ಬೇಸಿಗೆ ಶಿಬಿರದಲ್ಲಿ ಭಾಗವಹಿಸುವ ಶಾಲಾ-ಕಾಲೇಜಿನ ವಿದ್ಯಾರ್ಥಿಗಳು ವೆಬ್‍ಸೈಟ್: www.gethnaa.org ಮೂಲಕ ಹೆಚ್ಚಿನ ಮಾಹಿತಿ ಪಡೆದುಕೊಳ್ಳಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.









