ಸೋಮವಾರಪೇಟೆ ಏ.3 NEWS DESK : ಅಪರಿಚಿತರು ಹಾರಿಸಿದ ಗುಂಡೇಟಿನಿಂದ ರೈತ ಮುಖಂಡ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರೊಬ್ಬರು ಗಾಯಗೊಂಡಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಘಟನೆ ಗಣಗೂರು ಗ್ರಾಮದಲ್ಲಿ ನಡೆದಿದೆ. ಸ್ಥಳೀಯ ನಿವಾಸಿ ಚಂದ್ರಶೇಖರ್ ಗಾಯಗೊಂಡ ವ್ಯಕ್ತಿಯಾಗಿದ್ದು, ಇದೀಗ ಚೇತರಿಸಿಕೊಳ್ಳುತ್ತಿದ್ದಾರೆ.
ಅಪರಿಚಿತ ವ್ಯಕ್ತಿಗಳು ಗುಂಡುಹಾರಿಸಿದ ಪರಿಣಾಮ ಬೆರಳುಗಳಿಗೆ ಗಾಯವಾಗಿದೆ. ಗಾಯಾಳು ಮಡಿಕೇರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸೋಮವಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಎಸ್.ಪಿ ರಾಮರಾಜನ್. ಡಿವೈಎಸ್‍ಪಿ ಆರ್.ವಿ ಗಂಗಾಧರಪ್ಪ ಭೇಟಿ ನೀಡಿ ಪರಿಶೀಲಿಸಿದ್ದಾರೆ. ತನಿಖೆ ತೀವ್ರಗೊಂಡಿದ್ದು, ಆರೋಪಿಗಳ ಬಂಧನಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.









