ಮಡಿಕೇರಿ ಏ.3 NEWS DESK : ಶ್ರೀ ಕಾವೇರಮ್ಮೇ ಅಮ್ಮ ಕೊಡವ ಹಿತರಕ್ಷಣಾ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಭಾಗಮಂಡಲ ಮತ್ತು ತಲಕಾವೇರಿಯಲ್ಲಿ ಮಳೆಗಾಗಿ ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸಲಾಯಿತು. ಟ್ರಸ್ಟ್ ಅಧ್ಯಕ್ಷ ಎಂ.ಬಿ ದೇವಯ್ಯ ಹಾಗೂ ಪ್ರಮುಖರು ಭಾಗಮಂಡಲದ ಭಗಂಡೇಶ್ವರ ಸನ್ನಿಧಿಯಲ್ಲಿ ಪೂಜೆ ಸಲ್ಲಿಸಿ, ನಂತರ ತಲಕಾವೇರಿಗೆ ತೆರಳಿ ಕಾವೇರಿ ಮಾತೆಗೆ ವಿಶೇಷ ಪೂಜೆ ಹಾಗೂ ಪ್ರಾರ್ಥನೆ ಸಲ್ಲಿಸದರು. ಜಿಲ್ಲೆಯಾದ್ಯಂತ ಉತ್ತಮ ಮಳೆಯಾಗಿ, ನಾಡಿನೆಲ್ಲೆಡೆ ಉಂಟಾಗಿರುವ ಕುಡಿಯುವ ನೀರಿನ ಸಮಸ್ಯೆ ನೀಗಿಸುವಂತೆ ಪ್ರಾರ್ಥಿಸಿದರು. ಟ್ರಸ್ಟಿಗಳಾದ ಹಂಚೆಟ್ಟಿರ ಮನು ಮುದ್ದಪ್ಪ, ಪಾಸುರ ಕಾವೇರಪ್ಪ, ಎನ್.ಕೆ.ಅಯ್ಯಣ್ಣ, ಸೋಮಯ್ಯ, ಪಿ.ಎ.ನಂದ ಕುಮಾರ್ ಸೇರಿದಂತೆ ಮತ್ತಿತರರು ಹಾಜರಿದ್ದರು.







