ವಿರಾಜಪೇಟೆ ಏ.4 NEWS DESK : ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರ ಆವರಣ ನಯನ ಸಭಾಂಗಣದಲ್ಲಿ ನಡೆದ ಶ್ರೀ ರಘುವೀರ್ ಕಲಾ ಸೇವಾ ಟ್ರಸ್ಟ್‍ನ ವತಿಯಿಂದ ಆಯೋಜಿಸಿದ್ದ ಪ್ರತಿಭೋತ್ಸವದಲ್ಲಿ ನಾಟ್ಯ ಮಯೂರಿ ನೃತ್ಯ ಶಾಲೆಯ ತಂಡಕ್ಕೆ ಪ್ರಶಸ್ತಿ ಪತ್ರ ಹಾಗೂ ಸ್ಮರಣಿಕೆಯನ್ನು ನೀಡಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಚಲನಚಿತ್ರ ನಿರ್ದೇಶಕ ಬಿ.ರಾಮಮೂರ್ತಿಯವರ ಹಲವಾರು ಚಲನಚಿತ್ರಗಳಲ್ಲಿ ನಟಿಸಿದ ನೀಲಕಂಠ ಅಡಿಗ, ಆಯೋಜಕರಾದ ಹ್ಯಾಟ್ರಿಕ್ ಸೂರ್ಯ ಮುಂತಾದ ಹಲವಾರು ಗಣ್ಯ ವ್ಯಕ್ತಿಗಳು ಭಾಗವಹಿಸಿದ್ದರು.









