ಮಡಿಕೇರಿ ಏ.4 NEWS DESK : ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ನ ಅಧ್ಯಕ್ಷರಾಗಿ ಕೊಡಂದೇರ ಬಾಂಡ್ ಗಣಪತಿ ಹಾಗೂ ಉಪಾಧ್ಯಕ್ಷರಾಗಿ ಕೇಟೋಳಿರ ಹರೀಶ್ ಪೂವಯ್ಯ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಗೆ ಬ್ಯಾಂಕ್ ಸಭಾಂಗಣದಲ್ಲಿ ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಕೊಡಂದೇರ ಬಾಂಡ್ ಗಣಪತಿ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಕೇಟೋಳಿರ ಹರೀಶ್ ಪೂವಯ್ಯ ಅವರು ಮಾತ್ರ ನಾಮಪತ್ರ ಸಲ್ಲಿಸಿದ ಹಿನ್ನೆಲೆಯಲ್ಲಿ ಇಬ್ಬರು ಅವಿರೋಧವಾಗಿ ಆಯ್ಕೆಯಾದರು.
2ನೇ ಬಾರಿಗೆ ಅಧ್ಯಕ್ಷ, ಉಪಾಧ್ಯಕ್ಷರಾಗಿ ಬಾಂಡ್ ಗಣಪತಿ ಹಾಗೂ ಹರೀಶ್ ಪೂವಯ್ಯ ಅವರು ಅಧಿಕಾರ ಸ್ವೀಕರಿಸಿದರು. ಕಳೆದ 5 ವರ್ಷಗಳ ಆಡಳಿತಾವಧಿಯಲ್ಲಿ ದಕ್ಷತೆಯಿಂದ ಕಾರ್ಯನಿರ್ವಹಿಸಿದ್ದೇನೆ. ಮುಂದಿನ ಅವಧಿಯಲ್ಲೂ ಬ್ಯಾಂಕ್ನ ನಿರ್ದೇಶಕರ ಸಲಹೆ ಸೂಚನೆಗಳೊಂದಿಗೆ ಸರ್ವಾಂಗೀಣ ಪ್ರಗತಿಗೆ ಶ್ರಮಿಸುವುದಾಗಿ ಭರವಸೆ ನೀಡಿದರು.
ಡಿಸಿಸಿ ಬ್ಯಾಂಕ್ 103 ವರ್ಷ ಇತಿಹಾಸ ಹೊಂದಿದ್ದು, ಕಳೆದ 5 ವರ್ಷಗಳ ತಮ್ಮ ಆಡಳಿತಾವಧಿಯಲ್ಲಿ ಬ್ಯಾಂಕ್ನ ನೂತನ ಕಟ್ಟಡ ನಿರ್ಮಾಣ, ಶತಮಾನೋತ್ಸವ ಆಚರಣೆ, ಸಾಲ ಮೇಳದಂತಹ ಕಾರ್ಯಕ್ರಮಗಳನ್ನು ಮಾಡಲಾಗಿದೆ ಎಂದರು.
ಚುನಾವಣಾಧಿಕಾರಿಯಾದ ಉಪವಿಭಾಗಾಧಿಕಾರಿ ವಿನಾಯಕ್ ನರ್ವಾಡೆ ಕಾರ್ಯನಿರ್ವಹಿಸಿದರು.









