ಮಡಿಕೇರಿ ಏ.4 NEWS DESK : ಕೊಡಗು ಜಿಲ್ಲಾ ಸಹಕಾರ ಬ್ಯಾಂಕಿನ ನೂತನ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಆಯ್ಕೆಗೊಂಡ ಕೊಂಡದೇರ ಬಾಂಡ್ ಗಣಪತಿ ಹಾಗೂ ಉಪಾಧ್ಯಕ್ಷ ಕೇಟೋಳಿರ ಹರೀಶ್ ಪೂವಯ್ಯ ಅವರನ್ನು ಮಡಿಕೇರಿ ಕೊಡವ ಸಮಾಜದ ವತಿಯಿಂದ ಗೌರವಿಸಲಾಯಿತು.
ಈ ಸಂದರ್ಭ ಮಡಿಕೇರಿ ಕೊಡವ ಸಮಾಜದ ಅಧ್ಯಕ್ಷ ಮಂಡುವಂಡ ಪಿ.ಮುತ್ತಪ್ಪ, ಉಪಾಧ್ಯಕ್ಷ ಕೇಕಡ ವಿಜುದೇವಯ್ಯ, ಜಂಟಿಕಾರ್ಯದರ್ಶಿ ನಂದಿನೆರವಂಡ ದಿನೇಶ್, ನಿರ್ದೇಶಕರಾದ ಕನ್ನಂಡ ಕವಿತ ಬೊಳ್ಳಪ್ಪ, ಮೂವೆರ ಜಯರಾಂ ಹಾಜರಿದ್ದರು.








