ಕೊರಟಗೆರೆ ಏ.4 NEWS DESK : ಅರಣ್ಯ ಸಿಬ್ಬಂದಿಗಳು ನಾಲ್ವರು ಬೇಟೆಗಾರರನ್ನು ಸೆರೆ ಹಿಡಿದು ಬರೋಬರಿ 7 ಕಾಡುಹಂದಿಗಳನ್ನು ರಕ್ಷಿಸಿದ ಪ್ರಕರಣ ಕೊರಟಗೆರೆಯ ಸುರಪುರದಲ್ಲಿ ನಡೆದಿದೆ. ಕಾಡುಹಂದಿಗಳನ್ನು ಯಾದಗಿರಿಯಿಂದ ಕೊರಟಗೆರೆ ಪಟ್ಟಣಕ್ಕೆ ತಂದು ಮಾರಾಟಕ್ಕೆ ಯತ್ನಿಸುವ ಸಂದರ್ಭ ಅರಣ್ಯ ಸಿಬ್ಬಂದಿಗಳು ದಾಳಿ ನಡೆಸಿದರು. ಯಾದಗಿರಿ ಜಿಲ್ಲೆ ಸುರಪುರ ತಾಲೂಕಿನ ದೂಲ್‌ಪೇಟೆಯ ಸುರೇಶ(28), ರಂಗಮಪೇಟೆಯ ಪರಶುರಾಮ(22), ಕೊಪ್ಪಳ ಜಿಲ್ಲೆ ಕೊಪ್ಪಳ ಗಾಂಧಿನಗರದ ಮಂಜುನಾಥ(28) ಹಾಗೂ ತುಮಕೂರು ಜಿಲ್ಲೆ ಕೊರಟಗೆರೆ ಪಟ್ಟಣದ ವಿನಾಯಕ ನಗರದ ಮಾರುತಿ(39) ಬಂಧಿತ ಆರೋಪಿಗಳು. ಮತ್ತೊಬ್ಬ ಆರೋಪಿ ಭೀಮಾ(38) ಎಂಬಾತ ತಲೆ ಮರೆಸಿಕೊಂಡಿದ್ದು, ತನಿಖೆ ಮುಂದುವರೆದಿದೆ. ವಾಹನವನ್ನು ವಶಕ್ಕೆ ಪಡೆಯಲಾಗಿದೆ. ತುಮಕೂರು ಉಪ ಅರಣ್ಯ ಸಂರಕ್ಷಣಾಧಿಕಾರಿ ಅನುಪಮ.ಹೆಚ್, ಮಧುಗಿರಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಮಲ್ಲಿಕಾರ್ಜುನ್ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಯಿತು. ಕೊರಟಗೆರೆ ವಲಯಅರಣ್ಯಾಧಿಕಾರಿ ರವಿ.ಸಿ, ಉಪ ವಲಯಅರಣ್ಯಾಧಿಕಾರಿದಿಲೀಪ್‌ಕುಮಾರ್, ಸಿಬ್ಬಂಧಿಗಳಾದ ವಿಜಯಕುಮಾರ್, ಮಂಜುನಾಥ, ಚಾಂದುಪಾಷ, ಕಾವ್ಯಶ್ರೀ, ನರಸರಾಜು, ಬಾಬು ಸೇರಿದಂತೆಇತರರು ದಾಳಿಯಲ್ಲಿ ಭಾಗವಹಿಸಿದ್ದರು.
Breaking News
- *ವೀರ ಸೇನಾನಿಗಳಿಗೆ ಅಗೌರವ : ಕೊಡವ ಮಕ್ಕಡ ಕೂಟ ಖಂಡನೆ : ಕಿಡಿಗೇಡಿಯ ಬಂಧನಕ್ಕೆ ಆಗ್ರಹ*
- *ಮೂರ್ನಾಡು ಫ್ರೆಂಡ್ಸ್ ವಾಹನ ಮಾಲೀಕರ ಹಾಗೂ ಚಾಲಕರ ಸಂಘದ ವಾರ್ಷಿಕ ಮಹಾಸಭೆ : ನೂತನ ಪದಾಧಿಕಾರಿಗಳ ಆಯ್ಕೆ*
- *ನಿಧನ ಸುದ್ದಿ*
- *ರಾಜ್ಯ ಸರ್ಕಾರದ ವಿರುದ್ಧ ಮಡಿಕೇರಿಯಲ್ಲಿ ಬಿಜೆಪಿ ಪ್ರತಿಭಟನೆ : “ವಕ್ಫ್ ಕಾಯ್ದೆ” ಹಿಂಪಡೆಯಲು ಒತ್ತಾಯ : ಪ್ರತಾಪ್ ಸಿಂಹ ವಾಗ್ಧಾಳಿ*
- *ಶಾಲಾ ಮಕ್ಕಳ ಮನವಿಗೆ ಸ್ಪಂದಿಸಿದ ಶಾಸಕ ಡಾ.ಮಂತರ್ ಗೌಡ*
- *ಕನ್ನಡ ರಾಜ್ಯೋತ್ಸವ : ನ.23 ರಂದು ಮಡಿಕೇರಿಯಲ್ಲಿ ರಸಪ್ರಶ್ನೆ ಮತ್ತು ಗೀತಗಾಯನ ಕಾರ್ಯಕ್ರಮ*
- *ಗಂಗಮ್ಮ ನಿಧನ : ಶಾಸಕ ಪೊನ್ನಣ್ಣ ಸಂತಾಪ*
- *ಕೊಡಗು : ಡಿ.1 ರಿಂದ ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ ಪ್ರಕ್ರಿಯೆ ಆರಂಭ : ಜಿಲ್ಲಾಧಿಕಾರಿ ವೆಂಕಟ್ ರಾಜಾ*
- *ಪಡಿತರ ಚೀಟಿ ಪರಿಷ್ಕರಣೆ : ಅರ್ಹ ಬಿಪಿಎಲ್ ಕಾರ್ಡ್ ರದ್ದುಗೊಳಿಸುವುದಿಲ್ಲ : ಸಚಿವ ಮುನಿಯಪ್ಪ*
- *ಕೊಡಗು ಬ್ಲಡ್ ಡೋನಸ್೯ ಸಂಸ್ಥೆಯ 7ನೇ ವಾಷಿ೯ಕೋತ್ಸವ : ಜೀವ ಉಳಿಸುವ ರಕ್ತದಾನಿಗಳೇ ನಿಜವಾದ ಹೀರೋಗಳು : ಅನಿಲ್ ಹೆಚ್.ಟಿ.*