ಬೆಂಗಳೂರು ಏ.5 NEWS DESK : ನಟಿ ಹಾಗೂ ಮಂಡ್ಯದ ಸ್ವತಂತ್ರ ಸಂಸದೆ ಸುಮಲತಾ ಅಂಬರೀಶ್ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.
ಬೆಂಗಳೂರಿನ ಮಲ್ಲೇಶ್ವರಂ ನಲ್ಲಿರುವ ಭಾರತೀಯ ಜನತಾ ಪಕ್ಷದ ಕಚೇರಿಯಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡರು. ಕರ್ನಾಟಕ ಚುನಾವಣಾ ಉಸ್ತುವಾರಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಧಾ ಮೋಹನ್ ದಾಸ್ ಅಗರ್ವಾಲ್, ಮಾಜಿ ಮುಖ್ಯಮಂತ್ರಿ ಡಿ ವಿ ಸದಾನಂದ ಗೌಡ ಹಾಜರಿದ್ದರು.
ಬಿಜೆಪಿ ಸೇರ್ಪಡೆಯಾಗುವ ಮುನ್ನ ಅಂಬರೀಷ್ ಸಮಾದಿ ಬಳಿ ತೆರಳಿ ಪೂಜೆ ಸಲ್ಲಿಸಿದ್ದರು, ಪತ್ರ ಅಭಿಷೇಕ್ ಅಂಬರೀಷ್ ಮತ್ತುನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಜೊತೆಯಲ್ಲಿದ್ದರು.